ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …
Read More »ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ:ರಮೇಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …
Read More »ಕಳ್ಳಭಟ್ಟಿ ತಯಾರಿಕಾ ಅಡ್ಡೆ ಮೇಲೆ ದಾಳಿ, ಕಚ್ಚಾ ಸಾಮಗ್ರಿ ನಾಶ ಪಡಿಸಿದ ಪೊಲೀಸರು
ತಾಳಿಕೋಟೆ: ತಾಲ್ಲೂಕಿನ ಗಡಿ ಸೋಮನಾಳ ಗ್ರಾಮದ ತಾಂಡಾಕ್ಕೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಕಳ್ಳಬಟ್ಟಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್ ಐ ವಸಂತ ಬಂಡಗಾರ ಅವರ ನೇತೃತ್ವದಲ್ಲಿ ಶನಿವಾರ ಮದ್ಯಾಹ್ನ ದಾಳಿ ಮಾಡಿ ಜಮೀನಿನಲ್ಲಿ ಹೂತ್ತಿಟ್ಟ ಸುಮಾರು ೨೦೦ ಲೀಟರ್‌ಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶ ಪಡಿಸಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರವು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿದ್ದರಿಂದ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಳ್ಳಭಟ್ಟಿ ಸರಾಯಿ ತಯಾರಿಸಿ …
Read More »ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಮುಲ್ಲಾ ಓಣಿಯ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡ್ತಿದೆ. P-236 ರೋಗಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 63 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೋಗಿ ನಂಬರ್ P-236ನೇ ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ಜಿಲ್ಲೆಯಲ್ಲಿ …
Read More »ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ
ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …
Read More »ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..
ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …
Read More »ದುಬೈನಿಂದ ಫೇಸ್‌ಬುಕ್ ಮೂಲಕ ಮಗನ ಅಂತ್ಯಸಂಸ್ಕಾರ ವೀಕ್ಷಿಸಿದ ಕೇರಳ ಕುಟುಂಬ!
ನಿರ್ಬಂಧಗಳಿಂದಾಗಿ ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಯುಎಇಯಲ್ಲಿರುವ ಭಾರತೀಯ ಕುಟುಂಬಕ್ಕೆ ಸಾಧ್ಯವಾಗಲಿಲ್ಲ. ಕೇರಳದ ತಮ್ಮ ಸ್ವಂತ ಊರಿನಲ್ಲಿ ಪುತ್ರನ ಅಂತ್ಯಸಂಸ್ಕಾರ ನಡೆಸಲು ಪೋಷಕರು ನಿರ್ಧರಿಸಿದರು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಮಗನ ಪಾರ್ಥಿವ ಶರೀರದೊಂದಿಗೆ ಕೇರಳಕ್ಕೆ ತೆರಳಲು ಪೋಷಕರಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಸರಕಾರದ ಅನುಮತಿ ಪಡೆದು ಸರಕು ವಿಮಾನದಲ್ಲಿಪುತ್ರನ ಶವವನ್ನು ಕೇರಳಕ್ಕೆ ಕಳುಹಿಸಿದರು. ಅಂತ್ಯಸಂಸ್ಕಾರವನ್ನು ಫೇಸ್‌ಬುಕ್ ಮೂಲಕವೇ ವೀಕ್ಷಿಸಬೇಕಾಯಿತು
Read More »ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು
ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …
Read More »ವುಹಾನ್ ಲ್ಯಾಬ್‍ನಿಂದ ವೈರಸ್ ಹೊರಬಂದಿದ್ದು ಹೇಗೆ..? : ತನಿಖೆಗೆ ಟ್ರಂಪ್ ಚಿಂತನೆ
ವಾಷಿಂಗ್ಟನ್, ಏ.18-ವಿಶ್ವವ್ಯಾಪಿ 1.50 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ವೈರಸ್‍ನ ಉಗಮ ಬಿಂದು ಚೀನಾದ ವುಹಾನ ನಗರಿಯ ಪ್ರಯೋಗಾಲಯದಿಂದ ಡೆಡ್ಲಿ ವೈರಸ್ ತಪ್ಪಿಸಿಕೊಂಡಿರುವ ವರದಿ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕೊರೊನಾ ವೈರಸ್ ಸೋಂಕು ಮತ್ತು ಸಾವು ನೋವಿನ ಬಗ್ಗೆ ಸಾಕಷ್ಟು ಸುಳ್ಳುಗಳನ್ನು ಹೇಳಿ ಜಗತ್ತಿನ ದಿಕ್ಕು ತಪ್ಪಿಸುತ್ತಿರುವ ಚೀನಾದ ಕರ್ಮಕಾಂಡಗಳು ಒಂದೊಂದೇ ಬಯಲಿಗೆ ಬರುತ್ತಿದ್ದು, ಆ ದೇಶಕ್ಕೆ …
Read More »ಕೊರೋನಾ ವಿರುದ್ಧ ಹೋರಾಟಕ್ಕಾಗಿ ತನ್ನ ಮದುವೆ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ;
ಮಂಡ್ಯ(ಏ.18): ಕೊರೋನಾ ಆತಂಕ ಹೆಚ್ಚಾದ ಹಿನ್ನೆಲೆ, ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗಿದೆ. ಮಹಾಮಾರಿ ಕೊರೋನಾಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ಲಾಕ್‌ಡೌನ್ ನಡುವೆ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ವಿವಿಧ ವರ್ಗಗಳ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹಗಲಿರುಳು ಎನ್ನದೆ ಕುಟುಂಬಸ್ಥರಿಂದ ದೂರ ಉಳಿದು ದೇಶದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಡ್ಯದಲ್ಲಿ ದಕ್ಷ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯಕ್ಕಾಗಿ ತಮ್ಮ ಮದುವೆಯನ್ನೇ ಮುಂದೂಡಿ ಮಾದರಿಯಾಗಿದ್ದಾರೆ. ಹೌದು, ಮಳವಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ …
Read More »