ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು …
Read More »ಮಂಗಳೂರು:ಎರಡು ಸಾವಿರಕ್ಕಾಗಿ ಮುಗಿಬಿದ್ದ ಜನ……….
ಮಂಗಳೂರು: ಎರಡು ಸಾವಿರ ರೂಪಾಯಿ ಸಿಗುತ್ತದೆ ಎಂದು ಸಾಮಾಜಿಕ ಅಂತರವನ್ನೂ ಮರೆತು ಜನ ಮುಗಿಬಿದ್ದಿದ್ದು, ನೂಕುನುಗ್ಗಲು ಸಂಭವಿಸಿದೆ. ಮಂಗಳೂರು ನಗರದ ಕೂಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀ ದೇವಿ ಪ್ರಸಾದ್ ಖಾಸಗಿ ಕಟ್ಟಡದಲ್ಲಿ ಕೂಲಿ ಕಾರ್ಮಿಕರ ಮಾಹಿತಿ ಪಡೆದು ಹಣ ಅಕೌಂಟ್‍ಗೆ ಹಾಕಲಾಗುತ್ತದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿದ ಜನತೆ ಸಾಮಾಜಿಕ ಅಂತರವನ್ನು ಮರೆದು ಸುಮಾರು 600-750 ಜನರ ಗುಂಪು ಸಾಲಿನಲ್ಲಿ ಸೇರಿತ್ತು. ಯಾಕೆ ನಿಂತಿದ್ದೀರಿ ಎಂದು ಕೇಳಿದರೆ …
Read More »ಧಾರವಾಡ:ಕೆನರಾ ಬ್ಯಾಂಕ್‍ನ ಎಲ್ಲ ಸಿಬ್ಬಂದಿ ಹೋಮ್ ಕ್ವಾರಂಟೈನ್
ಧಾರವಾಡ: ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿ(ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಎಲ್ಲ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ. ಕೊರೊನಾ ಪಾಸಿಟಿವ್ ಬಂದಿರುವ ಧಾರವಾಡ ಜಿಲ್ಲೆಯ ರೋಗಿ ನಂ.194 ಮಾ.19ರಂದು ಪ್ರಯಾಣಿಸಿದ ಮುಂಬೈ- ಹುಬ್ಬಳ್ಳಿ ವಿಆರ್‍ಎಲ್ ಬಸ್ ಮೂಲಕವೇ ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕ್ (ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಸಿಬ್ಬಂದಿಯೊಬ್ಬರ ಪುತ್ರನೂ ಆಗಮಿಸಿದ್ದರು. ಇವರು ರೋಗಿ ನಂ.194 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಪರಿಗಣಿಸಿ ಸರ್ಕಾರಿ ಕ್ವಾರಂಟೈನ್ …
Read More »ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ
ಬೆಂಗಳೂರು, ಏ.15- ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬಿಬಿಎಂಪಿ ಬಜೆಟ್ ಏ.20ರಂದು ಮಂಡನೆಯಾಗಲಿದೆ. ಹನ್ನೊಂದು ಸಾವಿರ ಕೋಟಿ ರೂ.ಗಳ ಅಂದಾಜು ಮೊತ್ತದ ಬಿಬಿಎಂಪಿ ಬಜೆಟನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಬದಲಿಗೆ ಜನರಿಗೆ ಸಹಕಾರಿಯಾಗುವಂತಹ ಹಲವಾರು ಯೋಜನೆಗಳನ್ನು ಮಂಡಿಸುವ ಸಾಧ್ಯತೆಗಳಿವೆ.ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಿದ ಕೆಲವು …
Read More »ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್‌ಟಿಸಿಗೆ 253 ಕೋಟಿ ನಷ್ಟ..!
ಬೆಂಗಳೂರು, ಏ. 15- ಕೋರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ರದ್ದು ಮಾಡಿರುವುದರಿಂದ ಕೆಎಸ್‍ಆರ್‍ಟಿಸಿಗೆ 253 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮಾರ್ಚ್ 1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಆದಾಯದಲ್ಲಿ 253,24,19,256 ರೂ. ನಷ್ಟವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಲಾಕ್‍ಡೌನ್ ಮಾಡಿರುವುದರಿಂದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ನಿಲ್ಲಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಕೆಲವು ಬಸ್‍ಗಳನ್ನು ಒದಗಿಸಲಾಗಿದೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಟಿಕೆಟ್ …
Read More »ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……
ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು …
Read More »‘ಕೋವಿಡ್-19’ ಮಹಾಮಾರಿಯಿಂದ ಮತ್ತೋಂದು ವಿಪತ್ತೊಂದು ನಮ್ಮಗಾಗಿ ಕಾಯುತ್ತಿದೆ.!
ಖ್ಯಾತ ವೈರಾಣು ತಜ್ಞ ಹಾಗೂ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮಾಜಿ ಪ್ರೊಫೆಸರ್ ಆಗಿರುವ ಡಾ.ಟಿ. ಜಾಕೋಬ್ ಜಾಕೋಬ್ ಅವರು The Lede ಗೆ ನೀಡಿರುವ ಸಂದರ್ಶನದಲ್ಲಿ ಕೊರೋನ ವೈರಸ್ ಪತ್ತೆಗಾಗಿ ಸಾಕಷ್ಟು ಪರೀಕ್ಷೆಗಳನ್ನು ಕೈಗೊಳ್ಳದಿರುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಮಹಾ ವಿಪತ್ತೊಂದು ದೇಶವನ್ನು ಅಪ್ಪಳಿಸಲು ಕಾಯುತ್ತಿದೆ ಮತ್ತು ಪಾಸಿಟಿವ್ ಪ್ರಕರಣಗಳ ಮಹಾಪೂರವೇ ಹರಿದು ಬರಲಿದೆ ಎಂದು ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೊರೋನ ವೈರಸ್ ಪಿಡುಗು …
Read More »ಮೋದಿ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತೆ, ಇದರಲ್ಲಿ ಯಾವುದೇ ಸಂಕೋಚ ಇಲ್ಲ ” : ದೇವೇಗೌಡರು
ಬೆಂಗಳೂರು, -ನಮ್ಮ ರಾಜ್ಯದಲ್ಲಿ ಕೊರೋನಾದಿಂದ ಜನ ಸತ್ತಿದ್ದು, ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ತೀರ್ಪಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಕೋರೋನಾ ಹೊಡೆದೋಡಿಸಲು ಮಹಡಿಯ ಮೇಲೆ ನಿಂತು ಶಬ್ಧ ಮಾಡುವುದು. ಕತ್ತಲ್ಲಿನಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ದೀಪ …
Read More »ಮುಂಬೈನಲ್ಲಿ ವಲಸೆ ಕಾರ್ಮಿಕರಿಗೆ ಲಾಠಿ ಏಟು……
ಮುಂಬೈ: ಮುಂಬೈನಲ್ಲಿ ವಲಸೆ ಕಾರ್ಮಿಕರ ಪರದಾಟ ಹೇಳತೀರದಾಗಿದ್ದು, ಪೊಲೀಸರ ಲಾಠಿ ಚಾರ್ಜ್ ನಿಂದಾಗಿ ದೊಡ್ಡ ಗದ್ದಲ ಉಂಟಾಗಿದೆ. ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಾಗ್ವಾದಕ್ಕೆ ಕಾರಣವಾಗಿದೆ. ಇಂದು ಲಾಕ್‍ಡೌನ್ ತೆರವಾಗಲಿದೆ ಎಂದು ಭಾವಿಸಿದ್ದ ಸ್ಲಂ ನಿವಾಸಿಗಳು, ತಮ್ಮ ಊರುಗಳಿಗೆ ಹಿಂದಿರುಗಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಅದೇ ರೀತಿ ಮುಂಬೈನ ಬಾಂದ್ರಾ ಪಶ್ಚಿಮ ರೈಲು …
Read More »ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ
ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್‍ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …
Read More »