Breaking News

ರಾಷ್ಟ್ರೀಯ

ಡಿಸ್ಚಾರ್ಜ್ ಆಗಿದ್ದ ಇಬ್ಬರಿಗೆ ಮತ್ತೆ ಸೋಂಕು

ನವದೆಹಲಿ: ಡಿಸ್ಚಾರ್ಜ್ ಆಗಿದ್ದ ಕೊರೊನಾ ರೋಗಿಗಳಿಗೆ ಮತ್ತೆ ಸೋಂಕು ಬಂದಿದ್ದು ಆತಂಕ ಎದುರಾಗಿದೆ. ದೆಹಲಿ ಹೊರವಲಯದ ನೋಯ್ಡಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದು ಶುಕ್ರವಾರ ಡಿಸ್ಚಾರ್ಜ್ ಆಗಿದ್ದರು. ಡಿಸ್ಚಾರ್ಜ್ ಆಗುವ ಮುನ್ನ 24 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ಮಾಡಿದ್ದು ನೆಗೆಟಿವ್ ಬಂದಿತ್ತು. ಇದಾದ ಬಳಿಕ ಗಂಟಲಿನ ದ್ರವನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ಬಳಿಕ ವರದಿಯನ್ನು ಕೇಂದ್ರ …

Read More »

ರಸ್ತೆಯಲ್ಲಿ ಚೆಲ್ಲಿದ ಹಾಲನ್ನು ಹಂಚಿಕೊಂಡ ಶ್ವಾನ, ಮಾನವ

ಲಕ್ನೋ: ಕೊರೊನಾ ವೈರಸ್ ಹರಡದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ಮನಕಲಕುವ ಘಟನೆಗಳು ನಡೆದಿದೆ. ಇದರಲ್ಲಿ ಆಗ್ರಾದಲ್ಲಿ ನಡೆದ ಘಟನೆ ಕೂಡ ಒಂದು. ರಸ್ತೆಯಲ್ಲಿ ಚೆಲ್ಲಿದ ಹಾಲಿಗಾಗಿ 4 ಶ್ವಾನಗಳು ಹಾಗೂ ವ್ಯಕ್ತಿ ಮುಗಿಬಿದ್ದ ಘಟನೆ ನೋಡಿದರೆ ಎಂಥವರ ಮನಸ್ಸು ಕರಗದೇ ಇರದು. ಹೌದು. ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲೂ ಆಹಾರ ಸಿಗುತ್ತಿಲ್ಲ. ಕೆಲವು ಮಾನವೀಯ ಹೃದಯವಿದ್ದವರು ಬಡವರಿಗೆ ಮೂರು ಹೊತ್ತು ಆಹಾರ ಹಂಚುತ್ತಿದ್ದಾರೆ. …

Read More »

ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ – ಸಿಬ್ಬಂದಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೆಲವೊಂದು ಸೂಚನೆ ನೀಡಿದ್ದಾರೆ. ಲಾಕ್‍ಡೌನ್‍ನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅಲ್ಲದೇ ನಾವು ಏನೇ ಬಂದೋಬಸ್ತ್ ಮಾಡಿದರೂ ಸಹ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕಮಿಷನರ್ ಸಿಬ್ಬಂದಿಗೆ ನೀಡಿದ …

Read More »

ಕೇರಳದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ – ಕೊರೊನಾ ನಿಯಂತ್ರಣವಾಗಿದ್ದು ಹೇಗೆ?

ತಿರುವನಂತಪುರಂ: ಕೊರೊನಾ ವೈರಸ್‍ಗೆ ಇಡೀ ಜಗತ್ತಿನಾದ್ಯಂತ ಹರಡಿದ್ದು, ಜನರು ಭಯಭೀತಾಗಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೇರಳದಲ್ಲಿ ವೃದ್ಧ ದಂಪತಿ ಕೊರೊನಾ ವೈರಸ್‍ನಿಂದ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಕೇರಳದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದರಿಂದ ಕೇರಳ ‘ಕೊರೊನಾ ಹಾಟ್‍ಸ್ಟಾಟ್’ ಎನ್ನಿಸಿಕೊಂಡಿತ್ತು. ಆದರೆ ಈಗ ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ …

Read More »

ತಬ್ಲಿಘಿಗೆ ಹೋಗಿದ್ದ ಸ್ನೇಹಿತನಿಂದ ಸೋಂಕು, ವೃದ್ಧ ಬಲಿ – ಕಲಬುರಗಿಯ ನಿದ್ದೆಗೆಡಿಸಿದೆ ಮೂರು ಸಾವು

ಕಲಬುರಗಿ: ತೊಗರಿ ಕಣಜ ಕಲಬುರಗಿ ಜಿಲ್ಲೆಯಲ್ಲಿಗ ಕೊರೊನಾ ಸೋಂಕು ತನ್ನ ಅಟ್ಟಹಾಸ ಮೆರೆಯುತ್ತಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು ಮೂರು ಜನ ಸೋಂಕಿನಿಂದ ಸಾವನಪ್ಪಿದ್ದಾರೆ. ಇದು ಇದೀಗ ಅಲ್ಲಿನ ಜಿಲ್ಲಾಡಳಿತ ಹಾಗೂ ಜನರ ನಿದ್ದೆಗೆಡಿಸಿದೆ. ದೇಶದಲ್ಲಿಯೇ ಮೊದಲ ಸಾವು ಸಂಭವಿಸಿದ ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಪರಿಣಾಮ ಸೋಮವಾರ ಸಾಯಂಕಾಲ ಕಲಬುರಗಿ ನಗರದ ಮೊಮ್ಮಿನಪುರ ಬಡಾವಣೆಯ 55 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ. ಮೃತಪಟ್ಟ …

Read More »

ಮತ್ತೆ  1 ವಾರ ಜನತೆಗೆ ಉಚಿತ ಹಾಲು ನೀಡಲು ಕೆಎಂಎಫ್ ನಿರ್ಧಾರ:  ಶಾಸಕ ಬಾಲಚಂದ್ರ ಜಾರಕಿಹೊಳಿ  ಸ್ಪಷ್ಟನೆ

ಮತ್ತೆ  1 ವಾರ ಜನತೆಗೆ ಉಚಿತ ಹಾಲು ನೀಡಲು ಕೆಎಂಎಫ್ ನಿರ್ಧಾರ:  ಶಾಸಕ ಬಾಲಚಂದ್ರ ಜಾರಕಿಹೊಳಿ  ಸ್ಪಷ್ಟನೆ ಬೆಂಗಳೂರು: ಕೊರೊನಾ ವೈರಸ್ಸಿನಿಂದ ಲಾಕ್‍ಡೌನ್ ಸಂದರ್ಭದಲ್ಲಿ ಕೆಎಂಎಫ್‍ನಿಂದ ಏ-3ರಿಂದ 14ರ ವರೆಗೆ ಪ್ರತಿದಿನ 7.50 ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿಕೊಂಡಿದ್ದು, ಮತ್ತೇ ಬಡಜನರ ಹಿತಕ್ಕಾಗಿ ಒಂದು ವಾರಕಾಲ ಇದನ್ನು ವಿಸ್ತರಿಸಲಾಗಿದೆ. ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂತರ …

Read More »

ಅಗತ್ಯ ರಕ್ಷಣಾ ಸಾಮಾಗ್ರಿ ಖರೀದಿಸಲು ಪೊಲೀಸ್ ಇಲಾಖೆಗೆ 5 ಕೋಟಿ ಹಣ ಬಿಡುಗಡೆ

ಬೆಂಗಳೂರು(ಏ.14): ಹಗಲಿರುಳು ಎನ್ನದೇ ಕೊರೋನಾ ವಿರುದ್ಧ ಅವಿರತವಾಗಿ ಹೋರಾಡುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಅಗತ್ಯ ರಕ್ಷಣಾ ಸಾಮಾಗ್ರಿ ಖರೀದಿಸಲು ಎಸ್​ಡಿಆರ್​ಎಫ್​ ನಿಧಿಯಿಂದ ​​ 5 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಪೊಲೀಸರು ಮಹಾಮಾರಿ ಕೊರೋನಾ ವೈರಸ್​ ಹರಡುವಿಕೆ ನಡೆಯಲು ಹಗಲಿರುಳೆನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿನಿತ್ಯ ರಸ್ತೆಗಳಲ್ಲಿ ನಿಂತು ಬಂದೋಬಸ್ತ್​ ನಲ್ಲಿ ತೊಡಗಿದ್ದಾರೆ. ತಮ್ಮ ಪ್ರಾಣವನ್ನು ಲೆಕ್ಕಿಸದೇ ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಈ ವೇಳೆ ಪೊಲೀಸರಿಗೆ ಕೊರೋನಾ ಸೋಂಕು ಹರಡದಂತೆ ಎಚ್ಚರ …

Read More »

ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜಯಂತ್ಯುತ್ಸವ.

Dr. Babasaheb Ambedkar Birthday: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜಯಂತ್ಯುತ್ಸವ. ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಈ ದಿನದವರೆಗೂ ಈ ದೇಶದಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ಸಂವಿಧಾನ ಬರೆದವರ್ಯಾರು? ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ. ಪ್ರಗತಿಪರ ಚಿಂತಕರು, ವಕೀಲರು ಆದ ಸಿ.ಎಸ್.ದ್ವಾರಕಾನಾಥ್ ಅವರು ತಮ್ಮ ಸವಿವರ ಲೇಖನದ ಮೂಲಕ ಈ ವಿಷಯದ ಮೇಲೆ ಬೆಳಕು ಚೆಲ್ಲಿದ್ದಾರೆ.   ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಈ ದಿನದವರೆಗೂ …

Read More »

2ನೇ ಹಂತದ ಲಾಕ್​ಡೌನ್​ ವಿಸ್ತರಣೆ; ಪೊಲೀಸ್ ಸಿಬ್ಬಂದಿಗೆ ಮತ್ತಷ್ಟು ಸೂಚನೆಗಳನ್ನು ನೀಡಿದ ಕಮಿಷನರ್ ಭಾಸ್ಕರ್ ರಾವ

 ಎರಡನೇ ಹಂತದ ವಿಸ್ತರಣೆಯ ಲಾಕ್​ಡೌನ್​ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಇಂದು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣ ಸಲುವಾಗಿ ಹೇರಲಾಗಿದ್ದ 21 ದಿನಗಳ ಲಾಕ್​ಡೌನ್ ನಾಳೆಗೆ ಮುಕ್ತಾಯಗೊಳ್ಳಲಿದೆ. ಆದರೂ ಮಾರಕ ಸೋಂಕು ಹತೋಟಿಗೆ ಬಾರದ ಕಾರಣಕ್ಕೆ ಲಾಕ್​ಡೌನ್​ ಈ ತಿಂಗಳ ಕೊನೆಯವರೆಗೂ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.  ಎರಡನೇ …

Read More »

ಕಳ್ಳಭಟ್ಟಿ, ಅಕ್ರಮ ಸೇಂಧಿ ಮಾರುವವರ ವಿರುದ್ಧ ಕಠಿಣ : ಡಿಸಿಎಂ ಸವದಿ ಎಚ್ಚರಿಕೆ

ರಾಯಚೂರು, – ಜಿಲ್ಲೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ, ಸಿಎಚ್ ಪೌಡರ್ ಮಿಶ್ರಿತ ಸೆಂಧಿ ಮಾರಾಟ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ನೂತನವಾಗಿ ನೇಮಕಗೊಂಡಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಏ.13ರ ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ …

Read More »