Breaking News

ರಾಷ್ಟ್ರೀಯ

ಮುಂದಿನ 4 ದಿನ ಕರಾವಳಿ, ಉ.ಕ.ದಲ್ಲಿ ಮಳೆ

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್​, ವಿಜಯಪುರದಲ್ಲಿ ಆ.23ರಂದು …

Read More »

: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟ

ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟವಾಗಿದೆ. ಹಾನಿಗೀಡಾದ ವಿದ್ಯುತ್‌ ಪರಿಕರಗಳ ದುರಸ್ತಿ ಕಾರ್ಯ ನಡೆದಿದೆ. 2019ರಲ್ಲಿ ಭೀಕರ ಪ್ರವಾಹದಿಂದ ಹೆಸ್ಕಾಂ ತತ್ತರಿಸಿತ್ತು. ಆಗ ಬೆಳಗಾವಿ ಜಿಲ್ಲೆಯಲ್ಲಿ 17 ಸಾವಿರಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿತ್ತು. 5 ಸಾವಿರ ವಿದ್ಯುತ್‌ ಪರಿವರ್ತಕಗಳು ನೀರಲ್ಲಿ ಮುಳುಗಿದ್ದವು. ಈ ಬಾರಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ, ಹಿರಣ್ಯಕೇಶಿ, ದೂಧಗಂಗಾ, ವೇದಗಂಗಾ, ಮಾರ್ಕಂಡೇಯ …

Read More »

ಆ.24ರಿಂದ ಕನ್ನಡ ವೈದ್ಯ ಬರಹಗಾರರ ಸಮ್ಮೇಳನ

ಬೆಳಗಾವಿ: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಭವನದ ಎಚ್‌.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.   ಕೆಎಲ್‌ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ …

Read More »

ನ್ಯಾಯ ಕೊಡಿ ಇಲ್ಲವೆ ದಯಾಮರಣಕ್ಕೆ ಅನುಮತಿ ಕೊಡಿ: ತಮ್ಮಣ್ಣ ಕಾಂಬಳೆ ಕುಟುಂಬದ ಧರಣಿ

ಬೆಳಗಾವಿ: ‘ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸಂಬಂಧಿಕರು ನಮಗೆ ನೆಮ್ಮದಿಯಿಂದ ಜೀವನ ಸಾಗಿಸಲು ಅವಕಾಶ ನೀಡುತ್ತಿಲ್ಲ. ದೈಹಿಕವಾಗಿ ಹಲ್ಲೆಯನ್ನೂ ಮಾಡುತ್ತಿದ್ದಾರೆ. ನಮಗೆ ನ್ಯಾಯ ಕೊಡಿಸಿ. ಇಲ್ಲದಿದ್ದರೆ ದಯಾಮರಣಕ್ಕೆ ಅನುಮತಿ ಕೊಡಿ’ ಎಂದು ಆಗ್ರಹಿಸಿ ರಾಯಬಾಗ ತಾಲ್ಲೂಕಿನ ನಿಲಜಿಯ ತಮ್ಮಣ್ಣ ಕಾಂಬಳೆ ಕುಟುಂಬಸ್ಥರು ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ‘ನಮ್ಮ ಮೇಲೆ ಆಗಿರುವ ಅನ್ಯಾಯದ ಕುರಿತು ಕುಡಚಿ ಪೊಲೀಸರಿಗೆ ತಿಳಿಸಿದ್ದೇವೆ. ಆದರೆ, ಯಾವುದೇ ಕ್ರಮ ವಹಿಸಿಲ್ಲ. …

Read More »

ಕೆಸೆಟ್: ಅರ್ಜಿ ಸಲ್ಲಿಸಲು ಆ. 28ರವರೆಗೆ ಅವಕಾಶ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ. ‘ಅರ್ಜಿ ಸಲ್ಲಿಸಲು ಆಗಸ್ಟ್‌ 22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Read More »

ನಿಮಗೆ ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಆದರೆ ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಕೋಲ್ಕತಾ: ಇಲ್ಲಿನ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ ನೆಟ್ಟಿಗರ ಹೃದಯಗಳನ್ನು ಗೆದ್ದಿದ್ದಾರೆ. ಲೈಂಗಿಕ ಕಾರ್ಯಕರ್ತ ಮಹಿಳೆ ಕೆಲವು ನಿಮಿಷಗಳ ಕಾಮಕ್ಕಾಗಿ ಮಹಿಳೆಯರನ್ನು ಅತ್ಯಾಚಾರ ಮತ್ತು ಕೊಲ್ಲುವ ಬದಲು ಕೆಂಪು ದೀಪದ ಪ್ರದೇಶಗಳಿಗೆ ಭೇಟಿ ನೀಡುವಂತೆ ಪುರುಷರಿಗೆ ಸಲಹೆ ನೀಡಿದರು.   ನಿನಗೆ ಹೆಂಗಸಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬಾ. ದಯವಿಟ್ಟು ಮಹಿಳೆಯರ …

Read More »

ಆನಂದಪುರದಲ್ಲಿ ಭಾರಿ ಮಳೆ ಅಂಗಡಿಗಳಿಗೆ ನುಗ್ಗಿದ ನೀರು

ಆನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ. ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು. ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.

Read More »

ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ;C.M.,ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು;H.D.K

ಬೆಂಗಳೂರು, ಆಗಸ್ಟ್ 21: ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕುಎಂದು ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು …

Read More »

ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು ಆಗಸ್ಟ್ 21: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಿಎಂ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ಬೀಸೆ ದೊಣ್ಣೆಯಿಂದ ಸಿಎಂ ಸಿದ್ದರಾಮಯ್ಯ ಅವರು ಪಾರಾದಂತಾಗಿದೆ.   ದೂರಿನ ಬಗ್ಗೆ ವಿಚಾರಣೆ ಮಾಡಿದ ನ್ಯಾಯಧೀಶ ಗಜಾನನ ಭಟ್ ಅವರಿದ್ದ ಪೀಠ, ಸಾಕಷ್ಟು ವಾದ ಪ್ರತಿವಾದಗಳ ಬಳಿಕ ಆಗಸ್ಟ್ 20ಕ್ಕೆ ಆದೇಶ …

Read More »

ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ‘ಗೈಡ್ ಲೈನ್ಸ್’ ಪ್ರಕಟ

ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ …

Read More »