Breaking News

ರಾಷ್ಟ್ರೀಯ

ಪ್ರಧಾನಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂ. ನೀಡಿದ ನಟ ಅಕ್ಷಯ್ ಕುಮಾರ್..!

ನವದೆಹಲಿ : ಕೊರೋನಾ ಮಹಾಮಾರಿ ಪ್ರಪಂಚದಾದ್ಯಂತ ಮರಣಮೃದಂಗ ಬಾರಿಸುತ್ತಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೋನಾ ವಿರುದ್ಧ ಭಾರತ ಲಾಕ್ ಡೌನ್ ಹೋರಾಟ ಮಾಡುತ್ತಿದೆ. ಇದೆ ಹೊತ್ತಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಹಣಕಾಸಿನ ನೆರವನ್ನು ಕೋರಿದ್ದಾರೆ. ಈ ಕೊರೊನಾ ನಿಯಂತ್ರಣ ಕ್ರಮಕ್ಕಾಗಿ ದೇಶದ ಜನರು ಕೈಜೋಡಿಸಿ, ಹಣಕಾಸಿನ ನೆರವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕ್ಷಣಮಾತ್ರದಲ್ಲೇ ಸ್ಪಂದಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಉಳಿತಾಯದಿಂದ ಬರೋಬ್ಬರಿ 25 ಕೋಟಿ ರೂ. …

Read More »

ಆರ್ ಬಿಐ ಸೂಚನೆ ನೀಡಿದೆ ಆದ್ರೆ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ : ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ

ಅಥಣಿ:  ರಾಷ್ಟ್ರೀಕೃತ, ಸಹಕಾರಿ ಮತ್ತು ಗ್ರಾಮೀಣ ಬ್ಯಾಂಕುಗಳ ಎಲ್ಲಾ ಸಾಲಗಳ ಇಎಂಐ ಮೂರು ತಿಂಗಳು ವಿನಾಯ್ತಿ ನೀಡಿ ಆರ್ ಬಿಐ ಸೂಚನೆ ನೀಡಿದೆ. ಆದ್ರೆ  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿಯೇ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ ನೀಡುತ್ತಿರುವ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಅಥಣಿ  ತಾಲೂಕಿನ ಸುಟ್ಟಟ್ಟಿ ಗ್ರಾಮದ ರೈತ ಮಾಹವೀರ ವೀರಗೌಡ ಎಂಬುವವರು ವಿಸ್ತಾರ ಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಸದ್ಯ …

Read More »

ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 …

Read More »

ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್

ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಕೊರೊನಾ ತಡೆಗೆ ಪ್ರಧಾನಿಗಳು ದೇಶವನ್ನು ಲಾಕ್‍ಡೌನ್ ಮಾಡಿದಾಗಿನಿಂದಲೂ ರಿಷಿ ಕಪೂರ್ ಈ ವಿಷಯವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಟ್ವೀಟ್ ಮಾಡಿರುವ ರಿಷಿ ಕಪೂರ್, ಒಂದು ಕಾರಣಕ್ಕಾಗಿ ಪರವಾನಿಗೆ ಪಡೆದ ಮದ್ಯದಂಗಡಿಗಳನ್ನು ತೆರೆದರೆ ಸೂಕ್ತ ಎಂದಿದ್ದಾರೆ. ರಿಷಿ ಕಪೂರ್ ಟ್ವೀಟ್: ಸರ್ಕಾರ ಪ್ರತಿಸಂಜೆ ಲೈಸನ್ಸ್ ಹೊಂದಿರುವ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ …

Read More »

ಗಣ್ಯಾತಿಗಣ್ಯರಿಗೂ ಕೊರೊನಾ ಕಾಟ, ಅಮೆರಿಕದ ಐವರು ಸಂಸದರಿಗೂ ಸೋಂಕು..!

ವಾಷಿಂಗ್ಟನ್, ಮಾ.28-ಇಡೀ ಜಗತ್ತನ್ನೇ ನಡುಗಿಸುತ್ತಿರುವ ಕಿಲ್ಲರ್ ಕೊರೊನಾ ಸೋಂಕು ವಿವಿಧ ದೇಶಗಳ ಗಣ್ಯಾತಿಗಣ್ಯರು ಮತ್ತು ಖ್ಯಾತನಾಮರನ್ನೂ ಕಾಡುತ್ತಲೇ ಇದೆ. ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿರುವ (1 ಲಕ್ಷಕ್ಕೂ ಹೆಚ್ಚು) ಅಮೆರಿಕದಲ್ಲಿ ಐವರು ಸಂಸದರಿಗೂ ಕೋವಿಡ್-19 ಸೋಂಕು ತಗುಲಿದೆ. ಅಮೆರಿಕದ ಕಾಂಗ್ರೆಸ್ಸಿಗ ಮೈಕ್ ಕೆಲ್ಲಿ ಅವರಿಗೂ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಈವರೆಗೆ ಐವರು ಸಂಸದರಿಗೆ ಈ ಸಾಂಕ್ರಾಮಿಕ ರೋಗ ಹಬ್ಬಿದೆ. ನಿನ್ನೆಯಷ್ಟೇ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ …

Read More »

ಮೂರು ತಿಂಗಳು ವಿದ್ಯುತ್ ವಿನಾಯಿತಿ: ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ

ನವದೆಹಲಿ: ಜನ ಸಾಮಾನ್ಯರಿಗೆ, ಉದ್ಯೋಗಿಗಳಿಗೆ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ ಈಗ ವಿದ್ಯುತ್ ವಿನಾಯಿತಿಯನ್ನು ನೀಡಿದೆ. ಮೂರು ತಿಂಗಳ ಕಾಲ ವಿದ್ಯುತ್ ಬಿಲ್ ಪಾವತಿಗೆ 3 ತಿಂಗಳು ವಿನಾಯಿತಿ ನೀಡಿ ರಾಜ್ಯ ಸರ್ಕಾರಗಳು ಎಲ್ಲ ಎಸ್ಕಾಂಗಳಿಗೆ ಸೂಚಿಸಬೇಕೆಂದು ಕೇಂದ್ರ ಇಂಧನ ಸಚಿವಾಲಯ ಆದೇಶಿಸಿದೆ. ಲಾಕ್‍ಡೌನ್ ಅವಧಿಯಲ್ಲಿ ವ್ಯವಹಾರ ನಡೆಯದ ಕಾರಣ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಬೇಡಿಕೆ ವ್ಯಕ್ತವಾಗಿತ್ತು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆ ಮತ್ತು ಕಂಪನಿಗಳು ಬಂದ್ ಆಗಿರುವ …

Read More »

ಚಿಕ್ಕೋಡಿ:ಅಂಬುಲೆನ್ಸ್‌ನಲ್ಲಿ ಪ್ರಯಾಣ ಬೆಳೆಸಿದ್ದ ನಕಲಿ ರೋಗಿಗಳ ಬಂಧನ

ಚಿಕ್ಕೋಡಿ: ಭಾರತ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಸಂಚಾರ ಸ್ಥಗಿತ ಹಿನ್ನೆಲೆಯನ್ನೆ ಮಾಸ್ಟರ್ ಪ್ಲಾನ್ ಮಾಡಿ ರೋಗಿಗಳ ಸೋಗಿನಲ್ಲಿ ಅಂಬುಲೆನ್ಸ್ ಏರಿದವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಈ ಘಟನೆ ಮಹರಾಷ್ಟ್ರದ ಕೊಲ್ಹಾಪುರ ನಗರದ ಹೊರವಲಯದಲ್ಲಿ ನಡೆದಿದೆ. ಖಾಸಗಿ ಅಂಬುಲೆನ್ಸ್ ಚಾಲಕನಿಗೆ ಹಣದ ಆಮಿಷ ತೋರಿಸಿ ಕರ್ನಾಟಕದತ್ತ ಬರುತ್ತಿದ್ದ 8 ಜನ ಯುವಕರನ್ನ ಕೊಲ್ಹಾಪುರ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಾಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ …

Read More »

ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು:ಆರೋಗ್ಯ ಇಲಾಖೆ ಅಧಿಕಾರಿಯ

ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ. ಐಡಿ …

Read More »

ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್

ನವದೆಹಲಿ: ಇತ್ತೀಚೆಗೆ ಕಾಬೂಲ್‍ನಲ್ಲಿ ನಡೆದ ಸಿಖ್‍ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ. ಮಾರ್ಚ್ 25ರಂದು ಕಾಬೂಲ್‍ನ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಿಖ್‍ರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ನಾಲ್ಕು ಜನ ಸೂಸೈಡ್ ಬಾಂಬರ್ ಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಈಗ ಇದರಲ್ಲಿ ಓರ್ವ ಭಾರತದ ಮೂಲದವನಾಗಿದ್ದು, ಕೇರಳದಿಂದ 4 ವರ್ಷದ ಹಿಂದೆ …

Read More »

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ರೆ ಸಿಂಗಾಪುರದಲ್ಲಿ 6 ತಿಂಗಳು ಜೈಲು

ಸಿಂಗಾಪುರ: ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಿಂಗಾಪುರ ಸರ್ಕಾರ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. ಜನತೆ ಕಡ್ಡಾಯವಾಗಿ 1 ಮೀಟರ್(3.2 ಅಡಿ) ಅಂತರ ಕಾಯ್ದುಕೊಳ್ಳಬೇಕು. ಶಾಲೆ ಅಥವಾ ಕಂಪನಿಯಲ್ಲಿ 10ಕ್ಕಿಂತ ಹೆಚ್ಚು ಜನ ಸೇರಿದರೆ 10 ಸಾವಿರ ಸಿಂಗಾಪುರ ಡಾಲರ್(ಅಂದಾಜು 5.24 ಲಕ್ಷ ರೂ.) ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ …

Read More »