Breaking News

ರಾಷ್ಟ್ರೀಯ

ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ

ಮುಂಬೈ:  ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ. ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ …

Read More »

ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ

ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …

Read More »

ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್​​ಡೌನ್​

ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ. ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ …

Read More »

ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ

ಲಕ್ನೋ: ತಬ್ಲಿಘಿ ಜಮಾತ್‍ಗೆ ತೆರಳಿ ಇನ್ನೂ ಪತ್ತೆಯಾಗದವರನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಉತ್ತರ ಪ್ರದೇಶದ ಪೊಲೀಸರು ಪ್ರಕಟಿಸಿದ್ದಾರೆ. ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರು ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ನಡೆಸಬೇಕೆಂದು ಎಲ್ಲ ಸರ್ಕಾರಗಳು ಸೂಚನೆ ನೀಡುತ್ತಿವೆ. ಆದರೂ ಈ ಕಾರ್ಯಕ್ರಮಕ್ಕೆ ತೆರಳಿದ ಹಲವು ಮಂದಿ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಜಂಗಢದ ಪೊಲೀಸರು ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಬಹಳ ಸಂಖ್ಯೆಯಲ್ಲಿ ಜಮಾತ್ …

Read More »

ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ …

Read More »

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »

ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್‍ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್‍ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …

Read More »

ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು

ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು ಬೆಳಗಾವಿ: ಕೊರೋನಾ ಮಹಾಮಾರಿಯಿಂದಾಗಿ ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಮತ್ತು ಕೃಷಿ ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಎದುರಾಗಿರುವ ಬೆಳೆ ಸಾಲ ಮರುಪಾವತಿ ಸಮಸ್ಯೆಯನ್ನು ರಾಜ್ಯ ಸರಕಾರ ತಕ್ಷಣ ಬಗೆಹರಿಸಬೇಕು ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ. …

Read More »