Breaking News

ರಾಷ್ಟ್ರೀಯ

ಮಗನನ್ನು ಕರೆತರಲು 1,400 ಕಿಮೀ ದೂರ ಒಬ್ಬರೇ ಸ್ಕೂಟಿಯಲ್ಲಿ ಹೋದ ತಾಯಿ

ಹೈದರಾಬಾದ್: ಲಾಕ್‍ಡೌನ್ ಮಧ್ಯೆ ಮನೆಗೆ ಬರಲಾಗದೇ ಪರದಾಡುತ್ತಿದ್ದ ಮಗನಿಗಾಗಿ ತೆಲಂಗಾಣದಲ್ಲಿ ತಾಯಿ ಒಬ್ಬರೇ ಸ್ಕೂಟಿಯಲ್ಲಿ ಬರೋಬ್ಬರಿ 1,400 ಕಿಮೀ ಪ್ರಯಾಣಿಸಿ ಆತನನ್ನು ಕರೆತಂದಿದ್ದಾರೆ. ಈ ಮೂಲಕ ತಾಯಿ ಮಕ್ಕಳಿಗಾಗಿ ಯಾವುದೇ ಸಂಕಷ್ಟವನ್ನು ಎದುರಿಸಲು ಅಂಜಲ್ಲ ಎನ್ನೋದಕ್ಕೆ ಉದಾಹರಣೆ ಆಗಿದ್ದಾರೆ. ತೆಲಂಗಾಣದ ನಿಜಾಮಾಬಾದ್‍ನಲ್ಲಿರುವ ಬೋಧಾನ್ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿ ಆಗಿ ಕಾರ್ಯನಿರ್ವಹಿಸುತ್ತಿರುವ ರಜಿಯಾ ಬೇಗಮ್ ಮಗನಿಗಾಗಿ ಸಾವಿರಾರು ಕಿ.ಮೀ ಪ್ರಯಾಣಿಸಿದ್ದಾರೆ. ಮಗ ಮೊಹ್ಮದ್ ನಿಜಾಮುದ್ದೀನ್(19) ಹೈದರಾಬಾದಿನ ನಾರಾಯಣ ವೈದ್ಯಕೀಯ ಅಕಾಡೆಮಿ ಅಲ್ಲಿ ವ್ಯಾಸಂಗ …

Read More »

ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ …

Read More »

ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …

Read More »

ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ

ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …

Read More »

ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”

ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು‌ ಸಲಹೆ ಮಾಡಿದ್ದು,ನಾಳೆ ಪ್ರಧಾನಿ‌ ಜೊತೆ ಚರ್ಚಿಸಿದ ಬಳಿಕ ಮುಂದಿನ‌ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ‌ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ‌ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …

Read More »

17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು

ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್‍ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …

Read More »

ಡಿಸೆಂಬರ್‌ವರೆಗೂ ಅಲರ್ಟ್ ಆಗಿರುವಂತೆ ಸಾರ್ವಜನಿಕರಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಮನವಿ

ಬೆಂಗಳೂರು: ಕೊವಿಡ್‌ 19 ವೈರಸ್‌ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಬುಧವಾರ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು, ಅಡುಗೆ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, …

Read More »

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾದ ಸಿಎಂ

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಲಿದ್ದಾರೆ ಸಿಎಂ ಯಡಿಯೂರಪ್ಪ, ಹೌದು, ಕೊರೋನಾ ಹೊಡೆತಕ್ಕೆ ರಾಜ್ಯ ತತ್ತರಿಸಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಯಂತ್ರಕ್ಕೆ ಹಿಡಿದಿರುವ ಕಿಲುಬನ್ನು ತಿಕ್ಕಿ ತೊಳೆಯಲು ಬಯಸಿರುವ ಸಿಎಂ ಇದಕ್ಕಾಗಿ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ. ಆಡಳಿತ ಯಂತ್ರ ದುಬಾರಿ ವೆಚ್ಚದ್ದಾಗಿ ಪರಿಣಮಿಸಿರುವುದರಿಂದ ಮೊದಲು ತಮ್ಮ ಸಿಬ್ಬಂದಿಗಳು ಹಾಗೂ ಸಚಿವರ ಸಿಬ್ಬಂದಿಗಳ ಸಂಖ್ಯೆಗೆ ಸಿಎಂ ಕತ್ತರಿ ಹಾಕಲಿದ್ದಾರೆ. …

Read More »

ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್

ಬೆಂಗಳೂರು: ಕೊರೊನಾ ಸೋಂಕಿತ ರೋಗಿ ನಂಬರ್ 177 ಸಾವಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯ ಎಡವಟ್ಟು ಕಾರಣವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇರವಾಗಿ ದೂರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿಯ ಖಾಸಗಿ ಆಸ್ಪತ್ರೆಯು ಎರಡು ದಿನಗಳ ಕಾಲ ರೋಗಿಯನ್ನು ಇಟ್ಟುಕೊಂಡಿತ್ತು. ಆದರೆ ಈ ಬಗ್ಗೆ ಸರ್ಕಾರಿ ಆಸ್ಪತ್ರೆಗೆ ಯಾವುದೇ ಮಾಹಿತಿ ಕೊಟ್ಟಿರಲಿಲ್ಲ. ಎರಡು ದಿನಗಳ ಬಳಿಕ ಅಲ್ಲಿಂದ ಇಎಸ್‍ಐ ಆಸ್ಪತ್ರೆಗೆ ಶಿಫ್ಟ್ …

Read More »

ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ 6ನೇ ಬಲಿ- ಗದಗನಲ್ಲಿ ಮೊದಲ ಸಾವು

ಗದಗ: ರಾಜ್ಯದಲ್ಲಿ ಕೊರೊನಾ ತನ್ನ ಕಬಂದಬಾಹುವನ್ನು ಚಾಚುತ್ತಿದ್ದು, ಗದಗನಲ್ಲಿ 6ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗದಗ ನಗರದ ನಿವಾಸಿಯಾಗಿದ್ದ ರೋಗಿ ನಂಬರ್ 166 ಸಾವನ್ನಪ್ಪಿದ್ದಾರೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ …

Read More »