Breaking News

ರಾಷ್ಟ್ರೀಯ

ಭಾರತಲ್ಲಿ 80000 ಕೇಸ್‌: ಒಂದೇ ದಿನ ಯಾವ ದೇಶದಲ್ಲೂ ಇಷ್ಟು ಕೇಸ್‌ ಇಲ್ಲ!

ನವದೆಹಲಿ : ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಪರೀಕ್ಷೆ ಹಾಗೂ ಜನಜೀವನ ಸಹಜ ಸ್ಥಿತಿಯತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ವೈರಸ್‌ ಪೀಡಿತರ ಸಂಖ್ಯೆ ದೇಶದಲ್ಲಿ ಮತ್ತೊಂದು ಹೊಸ ದಾಖಲೆ ನಿರ್ಮಿಸಿದೆ. ಭಾನುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ 80 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೊರೋನಾ ಹಾವಳಿ ಆರಂಭವಾದಾಗಿನಿಂದ ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಇಷ್ಟೊಂದು ಸಂಖ್ಯೆಯ ಕೊರೋನಾ ಪ್ರಕರಣಗಳು ಪತ್ತೆಯಾದ ನಿದರ್ಶನವೇ ಇಲ್ಲ. ಭಾನುವಾರ 80,078 ಮಂದಿಗೆ …

Read More »

ಮುಂದಿನ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು  : ಈ ಬಾರಿಯ ಮಾನ್ಸೂನ್​ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್​ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಕುಮಟಾ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ನಿರಂತರವಾಗಿ ಮಳೆ …

Read More »

ಸೆ.17ಕ್ಕೆ 70 ವಸಂತಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಸೇವಾ ಸಪ್ತಾಹ ಆಚರಣೆ

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ. ಈ ದಿನವನ್ನು ವಿಶೇಷವಾಗಿ ಮಹತ್ವಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಭಾರತೀಯ ಜನತಾ ಪಾರ್ಟಿ ಸೆಪ್ಟೆಂಬರ್ 14ರಿಂದ 20ರವರೆಗೆ ಸೇವಾ ಸಪ್ತಾಹವನ್ನು ಆಚರಿಸಲು ನಿರ್ಧರಿಸಿದೆ. ನರೇಂದ್ರ ದಾಮೋದರದಾಸ್ ಮೋದಿ ಸೆಪ್ಟೆಂಬರ್ 17, 1950ರಂದು ಗುಜರಾತ್ ನ ವಡಾನಗರದಲ್ಲಿ ಜನಿಸಿದ್ದರು. ಆ ಸಮಯದಲ್ಲಿ ಅದು ಬಾಂಬೆ ಪ್ರಾಂತ್ಯಕ್ಕೆ ಸೇರಿತ್ತು. ನಂತರ …

Read More »

ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್‌ಮನ್‌ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …

Read More »

ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …

Read More »

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …

Read More »

ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು

ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್‌ ಆನ್‌ ರೋಲ್‌ ಆಫ್‌’ (ರೋ ರೋ) ಎಂಬ ಸರಕು ತುಂಬಿದ ಟ್ರಕ್‌ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್‌ ಮೂಲಕ …

Read More »

ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಕೋಲಾರ  : ಕೋಲಾರ ಜಿಲ್ಲೆಯ ಕೆಜಿಎಫ್​ನ ಬಿಜಿಎಂಎಲ್​ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …

Read More »

ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.  

Read More »

ಬೆಂಗಳೂರು ಉಗ್ರ ಡಾ| ಶಬೀಲ್ ದಿಲ್ಲಿಯಲ್ಲಿ ಬಂಧನ!

ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್‌ನ ಗ್ಲಾಸ್ಗೋ ಏರ್‌ಪೋರ್ಟ್‌ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್‌ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್‌ ಅಹ್ಮದ್‌ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್‌ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್‌ ಅಹ್ಮದ್‌, ಗ್ಲಾಸ್ಗೋ …

Read More »