Breaking News

ರಾಷ್ಟ್ರೀಯ

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು …

Read More »

ರಡ್ಡೆರಹಟ್ಟಿ ಸರ್ಕಾರಿ ಶಾಲೆಗೆ ₹1ಲಕ್ಷ ಬಹುಮಾನ

ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು. ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು …

Read More »

ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ. ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್‌ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ. ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ …

Read More »

ರಕ್ಷಾಬಂಧನದ ಇತಿಹಾಸ ಹೇಳಿದ ಸುಧಾಮೂರ್ತಿ​​​; ವಿಡಿಯೋ ನೋಡಿ ನೆಟ್ಟಿಗರು ಕಿಡಿ..

ಬೆಂಗಳೂರು: ಇನ್ಫೋಸಿಸ್​ ಸಹ-ಸಂಸ್ಥಾಪಕ ಎನ್​.ಆರ್​. ನಾರಾಯಣಮೂರ್ತಿ ಅವರ ಪತ್ನಿ, ರಾಜ್ಯಸಭಾ ಸಂಸೆ ಸುಧಾಮೂರ್ತಿ ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಗೆ ಸುದ್ದಿಯಲ್ಲಿರುತ್ತಾರೆ. ಪ್ರಸಿದ್ಧ ಬರಹಗಾರರು ಆದ ಸುಧಾಮೂರ್ತಿ ಅವರು ಬಹುಪಾಲು ಸಮಯ ಸಮಾಜಸೇವೆಯಲ್ಲಿ ತೊಡಗಿರುತ್ತಾರೆ. ಇಂದು (ಆಗಸ್ಟ್​​ 19) ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಅಣ್ಣ-ತಂಗಿಯರ ಈ ಪವಿತ್ರ ಹಬ್ಬದ ಕುರಿತು ಸುಧಾಮೂರ್ತಿ ಅವರು ಹೇಳಿರುವ ಮಾತುಗಳು ಜಾಲತಾಣದಲ್ಲಿ ವೈರಲ್​ ಆಗುತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಸುಧಾಮೂರ್ತಿ ಅವರು ರಕ್ಷಾಬಂಧನ ಆಚರಣೆಯ ಮೂಲವನ್ನು …

Read More »

ಆಗಸ್ಟ್ 21ಕ್ಕೆ ಭಾರತ್ ಬಂದ್‌: ?ದೇಶಾದ್ಯಂತ ಪ್ರತಿಭಟನೆ ಕಾರಣ ಯಾವ ಸೇವೆ ಅಲಭ್ಯ?

ನವದೆಹಲಿ:ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ‘#21_August_Bharat_Bandh’ ಹ್ಯಾಶ್ ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ನಲ್ಲಿದೆ. ಈ ಹ್ಯಾಶ್ ಟ್ಯಾಗ್ ನೊಂದಿಗೆ ಎಕ್ಸ್ ನಲ್ಲಿ 15.4 ಸಾವಿರ ಪೋಸ್ಟ್ ಗಳನ್ನು ಪೋಸ್ಟ್ ಮಾಡಲಾಗಿದೆ. ಭಾರತ್ ಬಂದ್ ಹಿಂದಿನ ಕಾರಣ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ …

Read More »

ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆ, ಸಿಎಂ ಪರ ಶಕ್ತಿ ಪ್ರದರ್ಶನ

ಬೆಂಗಳೂರು: ಮುಡಾ ಪ್ರಕರಣ ದಲ್ಲಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಿಎಂ ಪರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆ. 22ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ, “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ಪ್ರಮಾದ ಮಾಡಿಲ್ಲ. ಆದರೂ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದೆ. ಈ ಸಂದರ್ಭದಲ್ಲಿ ಸರಕಾರ ಮತ್ತು ಪಕ್ಷ ಒಗ್ಗಟ್ಟು ಪ್ರದರ್ಶಿಸಬೇಕು. ಜತೆಗೆ …

Read More »

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು. ಬೆಳಗಾವಿಯಲ್ಲಿಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರು ವಿರುದ್ದ …

Read More »

ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿ 14 ವರ್ಷದ ಬಳಿಕ ಮತ್ತೆ ಬಂಧನ !

ಕೊಪ್ಪಳ: ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧಿಯಾಗಿ 2010 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಲಕಲ್ ಮೂಲದ ನಿವಾಸಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಎಂಬ ಖೈದಿಯನ್ನು ಜಿಲ್ಲಾ ಪೊಲೀಸರು ಬರೊಬ್ಬರಿ 14 ವರ್ಷಗಳ ಬಳಿಕ ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.   ವಿಚಾರಣಾ ಖೈದಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಇಲಕಲ್ ನಿವಾಸಿಯಾಗಿದ್ದ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ದ 2009ರಲ್ಲಿ ಕೇಸ್ ದಾಖಲಾಗಿತ್ತು. ಈತನನ್ನು ಕೊಪ್ಪಳ …

Read More »

ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಯ ಸಂಚಲನ ಸೃಷ್ಟಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಾನು ಕಲಿತ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ದತ್ತು ಪಡೆದು ಅದಕ್ಕೆ ಹೊಸ ಕಳೆ ನೀಡಿದ್ದಾರೆ.   ಕಾಂತಾರ ಚಿತ್ರದ ನಟನೆಗಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿರುವ ಅವರು ಕಳೆದ ಸ್ವಾತಂತ್ರ್ಯೋತ್ಸವ ದಿನದಂದೂ ಶಾಲೆಗೆ ಭೇಟಿ ನೀಡಿದ್ದರು. …

Read More »

ರಸ್ತೆಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಜರುಗಿಸಿ:ಮೊಹಮ್ಮದ್ ರೋಷನ್

ಬೆಳಗಾವಿ: ‘ನಗರದಲ್ಲಿ ಕೈಗಾರಿಕೆಯವರು ರಸ್ತೆ ಬದಿ ತ್ಯಾಜ್ಯ ಎಸೆಯುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಗಾರಿಕೆ ಇಲಾಖೆಯ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ‘ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕಾರ್ಖಾನೆಗಳ ತ್ಯಾಜ್ಯವನ್ನು ಮರುಬಳಕೆ ಮಾಡಲು ಅವಕಾಶವಿಲ್ಲ. ಹಾಗಾಗಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಅನ್ವಯ, ತ್ಯಾಜ್ಯ ವಿಲೇವಾರಿಗೆ …

Read More »