ಬೆಂಗಳೂರು: ರಸ್ತೆಗೆ ಇಳಿಯಬೇಡಿ, ಮನೆಯಲ್ಲೇ ಇರಿ ಎಂದು ಸಾಕಷ್ಟು ಬಾರಿ ಹೇಳಿದರೂ ಈ ಮನವಿಯನ್ನು ಲೆಕ್ಕಿಸದೇ ರಸ್ತೆಗೆ ಇಳಿದ ಜನತೆಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಕರ್ನಾಟಕ ಸಂಪೂರ್ಣ ಲಾಕ್‍ಡೌನ್ ಆಗಿದ್ದರೂ ಜನ ಇಂದು ಬೆಳಗ್ಗೆಯಿಂದಲೇ ರಸ್ತೆಗೆ ಇಳಿಯುತ್ತಿದ್ದರು. ಈ ವೇಳೆ ಪೊಲೀಸರು ಮನೆಗೆ ತೆರಳುವಂತೆ ಮನವಿ ಮಾಡುತ್ತಿದ್ದರು. ಮನವಿಗೂ ಕ್ಯಾರೇ ಎನ್ನದ ಜನರಿಗೆ ಪೊಲೀಸರಿಗೆ ಲಾಠಿ ಏಟು ನೀಡಿದ್ದಾರೆ. ಯಶವಂತಪುರದ ಗೋವರ್ಧನ್ ಥಿಯೇಟರ್ ಬಳಿ ಆಟೋಗಳು, ಸಾರ್ವಜನಿಕರ ಅನಗತ್ಯ …
Read More »ಕೊರೋನಾ ಭೀತಿಯಿಂದ ಕೇರಳ ಗಡಿ ಬಂದ್ – ಬಂಡೀಪುರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರ ನಿಷೇಧ
ನೆರೆಯ ಕೇರಳದಿಂದ ಯಾವುದೇ ವಾಹನ ಕರ್ನಾಟಕ ಪ್ರವೇಶ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಆ್ಯಂಬುಲೆನ್ಸ್ ನಂತಹ ತುರ್ತು ವಾಹನಗಳಿಗಷ್ಟೆ ಅವಕಾಶ ನೀಡಲಾಗಿದೆ ಚಾಮರಾಜನಗರ(ಮಾ.23) : ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಗಡಿ ಬಂದ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನೆರೆಯ ಕೇರಳದಿಂದ ಯಾವುದೇ ವಾಹನ ಕರ್ನಾಟಕ ಪ್ರವೇಶ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಆ್ಯಂಬುಲೆನ್ಸ್ ನಂತಹ ತುರ್ತು ವಾಹನಗಳಿಗಷ್ಟೆ ಅವಕಾಶ …
Read More »ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ.
ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದ್ದ ರಾಜ್ಯ ಸರಕಾರ ಇದೀಗ ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡಿ ಆದಶ ಹೊರಡಿಸಿದೆ. ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಇದರಿಂದಾಗಿ ಇಡೀ ರಾಜ್ಯದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆ ಸ್ಥಗಿತವಾಗಲಿದೆ. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚಾರ ಬಂದ್ ಆಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೇನೂ ಸಿಗುವುದಿಲ್ಲ. ಮಾರ್ಚ್ 31ರ ವರೆಗೆ ಇಡೀ …
Read More »ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ
ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …
Read More »ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆ, ಕಟ್ಟಡ ಮಾಲೀಕರಿಗೆ ಕಾದಿದೆ ಗ್ರಹಚಾರ..
ಬೆಂಗಳೂರು, ಮಾ.23- ಬೆಂಗಳೂರು ಮಹಾನಗರದಲ್ಲಿ ಸಿಇ ಹಾಗೂ ಸಿಇಒ ನಿಂದ ಅನುಮತಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ಮತ್ತು ಕಟ್ಟಡಗಳ ಮಾಲೀಕರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್‍ಸಿಂಗ್ ವಿಧಾನ ಪರಿಷತ್‍ನಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಮಹಾನಗರದಲ್ಲಿ ಕಾನ್‍ಸೆಂಟ್ ಫಾರ್ ಎಸ್ಟಾಬ್ಲಿಷ್‍ಮೆಂಟ್ ಹಾಗೂ ಕಾನ್‍ಸೆಂಟ್ ಫಾರ್ ಆಪರೇಷನ್‍ನಿಂದ ಕಟ್ಟಡಗಳು ಮತ್ತು ಕಾರ್ಖಾನೆಗಳು ಕಡ್ಡಾಯವಾಗಿ …
Read More »ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್
ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ …
Read More »ಕೊರೊನಾ ಪೀಡಿತರಲ್ಲಿ ಶೇ.80 ಮಂದಿಗೆ ಅಲ್ಪಜ್ವರ, ನೆಗಡಿ :ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ
ನವದೆಹಲಿ, ಮಾ.23-ದೇಶದಲ್ಲಿ ಕೊರೊನಾ ಪೀಡಿತರದಲ್ಲಿ ಶೇಕಡ 80ರಷ್ಟು ಜನರಿಗೆಅಲ್ಪಜ್ವತ ಮತ್ತು ನೆಗಡಿ (ಶೀತ) ಮಾತ್ರ ಕಂಡು ಬಂದಿದೆ. ಹೀಗಾಗಿ ಜನರು ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್‍ಕೌನ್ಸಿಲ್‍ಆಫ್ ಮೆಡಿಕಲ್ ರಿಸರ್ಚ್-ಐಸಿಎಂಆರ್) ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲುಅಗತ್ಯವಾದಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.ನಾವು ಈಗಾಗಲೇ …
Read More »ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.
ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …
Read More »ನವದೆಹಲಿ:ಲಾಕ್‌ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್ …
Read More »ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ.
. ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ… ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಬಳಿ ಸರದಿ ಸಾಲಿನಲ್ಲಿ ನಿಂತು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡುವವರ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳುತ್ತಿರೋ ಜನ.. . ಸ್ವಯಂ ಪ್ರೇರಿತರಾಗಿ ಬಂದು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡಿಸಿಕೊಂಡವರ ಹೆಸರನ್ನು ನಮೋದಿಸಿಕೊಂಡು ತಪಾಸಣೆ ಮಾಡುತ್ತಿರೋ ಅರೋಗ್ಯ ಇಲಾಖೆ… ತಪಾಸಣೆ ಮಾಡುವ ವೇಳೆ ಕೋರೋನಾ ಶಂಕಿತ ಲಕ್ಷಣಗಳು ಕಂಡು ಬಂದರೆ ಅವರ ಕುಟುಂಬದ ಮೇಲೆ ನಿಗಾ …
Read More »