Breaking News

ರಾಷ್ಟ್ರೀಯ

ಕೇರಳದಂತೆ ರಾಜ್ಯದಲ್ಲೂ ವಿಶೇಷ ಪ್ಯಾಕೆಜ್ ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ

ಕೊರೊನಾ ವೈರಸ್ ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೊನಾ ವೈರಸ್​ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ …

Read More »

ಮಧ್ಯಪ್ರದೇಶದಲ್ಲಿ 104 ಮ್ಯಾಜಿಕ್ ನಂಬರ್: ರಾಜ್ಯಪಾಲರಿಗೆ ರಾಜೀನಾಮೆ ನೀಡಲು ಕಮಲ್‍ನಾಥ್ ನಿರ್ಧಾರ

ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ 17 ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗೆ ಮತ್ತಷ್ಟು ತಿರುವು ಸಿಕ್ಕಂತಾಗಿದೆ. ಮುಖ್ಯಮಂತ್ರಿ ಕಮಲ್ ನಾಥ್ ರಾಜ್ಯಪಾಲರಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಭೋಪಾಲ್‍ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಧ್ಯಪ್ರದೇಶದ ವಿಧಾನಸಭೆಯ ಫಲಿತಾಂಶವು 11 ಡಿಸೆಂಬರ್ 2018 ರಂದು ಬಂದಿತ್ತು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವಾಗಲೂ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿದ್ದೇನೆ. ರಾಜ್ಯದಲ್ಲಿ ಬಿಜೆಪಿಗೆ 15 ವರ್ಷಗಳ ಕಾಲ ಅಧಿಕಾರ ಸಿಕ್ಕಿತ್ತು. ಈಗ ನಾನು …

Read More »

ಅತ್ಯಾಚಾರಿಗಳ ಕೊರಳಿಗೆ ಸಾವಿನ ಕುಣಿಕೆ ಬೀಳುತ್ತಿದ್ದಂತೆ ದೇಶಾದ್ಯಂತ ಸಂಭ್ರಮ..!!

ನವದೆಹಲಿ:ಏಳು ವರ್ಷಗಳ ಸತತ ಹೋರಾಟದ ಬಳಿಕ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಬೀಕರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನಾಲ್ವರು ನರ ರಾಕ್ಷಸರಿಗೆ ಇಂದು ಮುಂಜಾನೆ ದೆಹಲಿಯ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಿರುವುದಕ್ಕೆ ದೇಶಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ.ಪರಮಪಾಪಿಗಳಾದ ಮುಕೇಶ್ ಸಿಂಗ್, ಪವನ್ ಕುಮಾರ್, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್‍ಗೆ ಇಂದು ಬೆಳಗ್ಗೆ ಸರಿಯಾಗಿ 5.30ರಲ್ಲಿ ನೇಣಿಗೇರಿಸಲಾಯಿತು. ಕಾನೂನು ಪ್ರಕಾರವಾಗಿಯೇ ಕೀಚಕರ ಸಂಹಾರವಾಗುತ್ತಿದ್ದಂತೆಯೇ ಇಂದು ಬೆಳಗ್ಗೆಯಿಂದಲೇ ದೇಶದ ವಿವಿಧ ನಗರಗಳಲ್ಲಿ …

Read More »

ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ

ಬೆಂಗಳೂರು,ಮಾ.20- ನಿರ್ಭಯಾ ಅತ್ಯಾಚಾರ ಮಾಡಿದ ಪಾಪಿಗಳನ್ನು ನೇಣು ಹಾಕಿದ ವಧಾದಾರ(ಹ್ಯಾಂಗ್‍ಮನ್)ನಿಗೆ ಚಿತ್ರನಟ ಜಗ್ಗೇಶ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಿರ್ಭಯ ಅತ್ಯಾಚಾರಿಗಳಾದ ಮುಕೇಶ್‍ಸಿಂಗ್, ಪವನ್ ಗುಪ್ತಾ, ವಿನಯ್‍ಕುಮಾರ್ ಶರ್ಮಾ, ಅಕ್ಷಯ್ ಕುಮಾರ್‍ನನ್ನು ಗಲ್ಲಿಗೇರಿಸಿದ ಹ್ಯಾಂಗ್‍ಮನ್‍ಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ದೇಣಿಗೆ ನೀಡಿರುವ ಬಗ್ಗೆ ಟ್ವಿಟರ್‍ನಲ್ಲಿ ಜಗ್ಗೇಶ್ ಪ್ರಕಟಿಸಿದ್ದಾರೆ. ನಿರ್ಭಯಾ ಹಂತಕರ ಹ್ಯಾಂಗ್‍ಮನ್‍ಗೆ ನನ್ನ ದೇಣಿಗೆ ದೇವನೊಬ್ಬನಿರುವ, ಅವ ಎಲ್ಲ ನೋಡುತ್ತಿರುವ ಸತ್ಯದ …

Read More »

ನಿರ್ಭಯಾ ಅಪರಾಧಿಗಳು ಏನಾಗಿದ್ದರು? ಇಲ್ಲಿದೆ ಪೂರ್ಣ ವಿವರ!

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಗಲ್ಲಿಗೇರಿಸಲಾಗಿದ್ದು, ಭಾರತದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ಅತ್ಯುನ್ನತ ಶಿಕ್ಷೆ ಪೂರ್ಣಗೊಂಡಿದೆ ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ‘ನಿರ್ಭಯಾ’ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ವಯಸ್ಸು ಹಾಗೂ ಅವರು ಮಾಡುತ್ತಿದ್ದ ವೃತ್ತಿ ಸೇರಿದಂತೆ ವೈಯಕ್ತಿಕ ವಿವರಗಳು ಇಲ್ಲಿವೆ. ಮುಖೇಶ್ ಸಿಂಗ್‌: ವಯಸ್ಸು: 30 …

Read More »

ದೇಶದಲ್ಲಿ 5ನೇ ಕೊರೊನಾ ಸಾವು- 2 ದಿನದಲ್ಲಿ 2 ಬಲಿ

ಜೈಪುರ: ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ. ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ …

Read More »

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ.

ಅಂಬೋಲಿ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವಿಗೀಡಾದ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡು ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕಾರು ಚಾಲನೆ ಮಾಡುತ್ತಿದ್ದ ದುಂಡಪ್ಪ ಪದ್ಮಣ್ಣವರ್ ಮೃತ ಮಹಿಳೆಯ ಪತಿಯಲ್ಲ. ಆತ ಆಕೆಯೊಂದಿಗೆ ರೆಸಾರ್ಟ್ ಗೆ ತೆರಳಿದ್ದ ಎನ್ನುವ ಮಾಹಿತಿ ಬಂದಿದೆ. ಸುಟ್ಟು ಭಸ್ಮವಾದ ಮಹಿಳೆ ರಿಜ್ವಾನಾ (41) ಎನ್ನುವವಳಾಗಿದ್ದು, ಆಕೆ ಬೆಳಗಾವಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಮಹಿಳೆಯ ಸಂಬಧಿಕರು ಇದೀಗ ಪ್ರಕರಣದ …

Read More »

ಕೊರೊನಾ ಎಫೆಕ್ಟ್ – ರಾಜಾಮೌಳಿ ಆರ್‌ಆರ್‌ಆರ್ ಸಿನಿಮಾದಿಂದ ಆಲಿಯಾ ಔಟ್

ಮುಂಬೈ: ಕೊರೊನಾ ದೇಶದ ಎಲ್ಲಾ ಕ್ಷೇತ್ರಗಳ ಮೇಲೆ ತನ್ನ ಪ್ರಭಾವವನ್ನು ಬೀರಿದೆ, ಹಾಗೆಯೇ ಭಾರತ ಚಿತ್ರರಂಗವನ್ನು ಸಂಕಷ್ಟಕ್ಕೆ ದೂಡಿದೆ. ಕೊರೊನಾದಿಂದ ನಿರ್ದೇಶಕ ರಾಜಾಮೌಳಿಯ ಆರ್‌ಆರ್‌ಆರ್ ಚಿತ್ರದಿಂದ ಬಾಲಿವುಡ್ ಬೆಡಗಿ ಆಲಿಯಾ ಭಟ್ ಹೊರಬಂದಿದ್ದಾರೆ ಎನ್ನಲಾಗಿದೆ. ಹೌದು ಸ್ಟಾರ್ ನಿರ್ದೇಶಕ ರಾಜಾಮೌಳಿ ನಿರ್ದೇಶದ ಆರ್‌ಆರ್‌ಆರ್ ಚಿತ್ರ ಬಹುಕೋಟಿ ವೆಚ್ಚದಲ್ಲಿ ತಯಾರಗುತ್ತಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಅವರು ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊರೊನಾ …

Read More »

ನನ್ನ ಮೌನವನ್ನು ನನ್ನ ವೀಕ್‍ನೆಸ್ ಎಂದುಕೊಳ್ಳಬೇಡಿ:ಯುವಕನ ಚಳಿ ಬಿಡಿಸಿದ ನಮಿತಾ

ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್‍ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್‍ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಏನಿದೆ? “ಎಲ್ಲರಿಗೂ …

Read More »

ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ

ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್‍ಗಳು, ಮಾಧ್ಯಮಗಳಿಗೆ ಧನ್ಯವಾದ   ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …

Read More »