ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ ಸಂಪರ್ಕ ಹೊಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಮಣಿಪಾಲದಿಂದ ತಮ್ಮ ರಾಜ್ಯಗಳಿಗೆ ತೆರಳಿದ್ದು, ವಿದೇಶದ ವಿದ್ಯಾರ್ಥಿಗಳು ಮಣಿಪಾಲದಲ್ಲೇ ಉಳಿದುಕೊಳ್ಳುವ ಸೂಚನೆಯನ್ನು ವಿವಿ ಕೊಟ್ಟಿದೆ. ಇಂಗ್ಲಿಷ್ ಮಾತನಾಡುವ ಐವತ್ನಾಲ್ಕು …
Read More »ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ
ತಾನು ಬಂದರೆ ಭಾರತದಲ್ಲಿ ಕೊರೊನಾ ಹರಡಬಹುದೆಂದು ಚೀನಾದಲ್ಲೇ ಉಳಿದ ಕನ್ನಡಿಗ! ಕೊರೊನಾ ವೈರಸ್‌ಗೆ ಇಡೀ ಚೀನಾ ದೇಶ ತತ್ತರಿಸಿದ್ದು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅಲ್ಲಿ ನೆಲೆಸಿದ್ದ ವಿವಿಧ ದೇಶಗಳ ಪ್ರಜೆಗಳು ಜೀವ ಭಯದಿಂದ ಸ್ವದೇಶಕ್ಕೆ ಮರಳುತ್ತಿದ್ದಾರೆ. ಅಂತಹದರಲ್ಲಿ ತಾನು ಸ್ವದೇಶಕ್ಕೆ ಮರಳಿದರೆ ತನ್ನೊಂದಿಗೆ ವೈರಸ್ ಕೂಡ ತನ್ನ ದೇಶಕ್ಕೆ ಬರಬಹುದು ಎಂಬ ಭೀತಿಯಿಂದ ತನ್ನ ಪ್ರಾಣವನ್ನೂ ಲೆಕ್ಕಿಸದೇ ಕನ್ನಡಿಗನೊಬ್ಬ ಚೀನಾದಲ್ಲೇ ಉಳಿದುಕೊಂಡಿದ್ದಾನೆ! ತುಮಕೂರಿನ ಶಿಕ್ಷಕ ಹೊಸಕೆರೆ ರಿಜ್ವಾನ್ …
Read More »ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ
ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ 100 ಜನ ಕೊರೋನಾ ಶಂಕಿತರ ಮೇಲೆ ನಿಗಾ/ಕೊರೋನಾ ವೈರಸ್ ತಡೆಯಲು ಸರ್ಕಾರ ಸನ್ನದ್ಧ/ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ಸರಕಾರ ಕೊರೋನಾ ಎದುರಿಸಲು ಸನ್ನದ್ದವಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ 100ಜನ ಕರೋನಾ ಶಂಕಿತರ ಮೇಲೆ ನಿಗಾ ಇಡಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಾಂತೇಶ್ ಕವಟಗಿಮಠ …
Read More »Be Alert : ಭಾರತದಲ್ಲಿ ಕೊರೊನ ಪೀಡಿತರ ಸಂಖ್ಯೆ 103ಕ್ಕೇರಿಕೆ..!
ನವದೆಹಲಿ/ಮುಂಬೈ, ಮಾ.15- ದೇಶದಲ್ಲಿ ಮಾರಕ ಕೊರೊನಾ ಸೋಂಕಿನ ದೃಢೀಕೃತ ಪ್ರಕರಣಗಳ ಸಂಖ್ಯೆ 103ಕ್ಕೆ ಏರಿದೆ. ಅಲ್ಲದೆ ಇನ್ನೂ ಹಲವು ಶಂಕಿತರಲ್ಲಿ ಮತ್ತಷ್ಟು ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ 24 ತಾಸುಗಳಲ್ಲಿ ಈ ಸಂಖ್ಯೆಯಲ್ಲಿ ಏರಿಕೆಯಾಗುವ ಆತಂಕವಿದೆ. ದೇಶದಲ್ಲಿ ಅತ್ಯಂತ ಹೆಚ್ಚು ಸೋಂಕು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಅಲ್ಲಿ ಕೊರೊನಾ ಪೀಡಿತರ ಸಂಖ್ಯೆ 31ಕ್ಕೇರಿದೆ. ಕೇರಳ ಎರಡನೆ ಸ್ಥಾನದಲ್ಲಿದ್ದು , ಅಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ …
Read More »ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಬೆಂಗಳೂರು, ಮಾ.14- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಕನಿಷ್ಠ 15 ರೂ.ಗಳನ್ನಾದರು ಕಡಿಮೆ ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಒತ್ತಾಯಿಸಿದೆಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ವಿದ್ಯಮಾನಗಳಿಂದ ಕಚ್ಚಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಈ ಹಂತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲಾಗಿ ಆಮದು ಶುಲ್ಕವನ್ನು ಹೆಚ್ಚಿಸಿ ಪ್ರತಿ ಲೀಟರ್‍ಗೆ …
Read More »ಕೊರೊನಾ ಆತಂಕದಿಂದ ಶೇಕ್ ಹ್ಯಾಂಡ್ ಬದಲು ‘ನಮಸ್ತೆ’ಗೆ ಹೊರೆಹೋದ ಟ್ರಂಪ್
ವಾಷಿಂಗ್ಟನ್, ಮಾ.13- ವಿಶ್ವವನ್ನು ಕಂಗೆಡಿಸಿರುವ ಮಾರಕ ಕೊರೊನಾ ಆತಂಕದಿಂದ ಜಗತ್ತಿನ ದೊಡ್ಡಣ್ಣ ಅಮೆರಿಕ ಕೂಡ ಹೆದರಿ ಕಂಗಾಲಾಗಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹೊರತಾಗಿಲ್ಲ. ತಮ್ಮನ್ನು ಭೇಟಿ ಮಾಡುವ ವಿವಿಧ ದೇಶಗಳ ಅಧಿಪತಿಗಳು ಮತ್ತು ಗಣ್ಯಾತಿಗಣ್ಯರನ್ನು ಟ್ರಂಪ್ ಹಸ್ತಲಾಂಘವ ಮಾಡಿ ಆಲಂಗಿಸಿಕೊಳ್ಳುವ ಪರಿಪಾಠವಿತ್ತು. ಆದರೆ, ಕೊರೊನಾ ವೈರಾಣು ಆತಂಕದಿಂದಾಗಿ ಟ್ರಂಪ್ ಮಹಾಶಯರು ಈಗ ಶೇಕ್‍ಹ್ಯಾಂಡ್ ಮಾಡುವ ಬದಲು ಭಾರತೀಯ ಶೈಲಿಯ ನಮಸ್ತೆ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ನಿನ್ನೆ ತಮ್ಮನ್ನು ಭೇಟಿ …
Read More »ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್‌ದೀಪ್‌ಗೆ 10 ವರ್ಷ ಜೈಲು..
ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆನಗರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್‍ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …
Read More »ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ
ಬೆಂಗಳೂರು, ಮಾ : ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …
Read More »ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ
ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …
Read More »‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ
ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …
Read More »