Breaking News

ರಾಷ್ಟ್ರೀಯ

ಹೆಲ್ಮೆಟ್‌ ಧರಿಸಿ ಜಾಗೃತಿ ಮೂಡಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಹೆಲ್ಮೆಟ್ ಜಾಗೃತಿ ಕಾರ್ಯಕ್ರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಹೆಲ್ಮೆಟ್‌ ಧರಿಸಿ ಬೈಕ್‌ ಸವಾರಿ ಮಾಡುವ ಮೂಲಕ ಗಮನ ಸೆಳೆದರು. ಜಾಗೃತಿ ರ್‍ಯಾಲಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮ ವೃತ್ತ, ಕೋರ್ಟ್ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ತಲುಪಿ ಕೊನೆಗೊಂಡಿತು.   ಸಚಿವರ ಜತೆಗೆ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ …

Read More »

ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದೆ. ಈ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ತಿಳಿಸಿದರು. ಉಡುಪಿ ಜಿಲ್ಲೆಯ ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ …

Read More »

ವಿತ್ರಾಗೌಡ ಚಪ್ಪಲಿ ಮೇಲೂ ರಕ್ತದ ಕಲೆ; ದರ್ಶನ್‌ & ಗ್ಯಾಂಗ್‌ಗೆ ಮತ್ತಷ್ಟು ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡ, ದರ್ಶನ್‌ ತೂಗುದೀಪ ಮತ್ತು ಗ್ಯಾಂಗ್ ಜೈಲಿನಲ್ಲೇ ಸ್ವಾತಂತ್ರ್ಯ ದಿನಾಚರಣೆ ಮಾಡಿದೆ!, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ ಬಳಿಕ ಜಾಮೀನು ಪಡೆಯಬಹುದು ಎಂದು ಕನಸು ಕಾಣುತ್ತಿದ್ದ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಒಂದರ ಹಿಂದೊಂದು ಶಾಕ್ ಕೊಡುತ್ತಲೇ ಇದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್‌ ಧರಿಸಿದ್ದ ಪ್ಯಾಂಟ್ ಮತ್ತು ಟೀ ಶರ್ಟ್ ಮೇಲೆ ರಕ್ತದ ಕಲೆ ಪತ್ತೆಯಾಗಿದ್ದು ಪೊಲೀಸರ ತನಿಖೆಗೆ …

Read More »

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ

78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …

Read More »

ಬಲ್ಬ್‌ನಲ್ಲಿ ಅರಳಿದ ರಾಷ್ಟ್ರಧ್ವಜ

ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್‌ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ.   ಸಂಗನಗೌಡ ನ್ಯಾಮಗೌಡ

Read More »

ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…

ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ.   ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …

Read More »

ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ?

ಬೆಳಗಾವಿ : ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ ಎಂಬ ಪ್ರಶ್ನೆ ಮೂಡಿದೆ. ಜಾಹಿರಾತು ಫಲಕದಲ್ಲಿ ಕನ್ನಡವನ್ನು ಶೇಕಡಾ 70 ರಷ್ಟು ಬಳಸಬೇಕಾದ ಕಾನೂನು ಕೇವಲ ಜನಸಾಮಾನ್ಯರಿಗೆ ಮಾತ್ರ ಸೀಮಿತವಾ ಎಂಬ ಪ್ರಶ್ನೆ ಮೂಡಿದೆ. ಹೌದು ಸ್ವಾತಂತ್ರ್ಯ ದಿನದ ಅಂಗವಾಗಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಅವರ ಹೆಸರಿನಲ್ಲಿ ಅಳವಡಿಸಿರುವ ಬ್ಯಾನರ್ ನಲ್ಲಿ ಕನ್ನಡವೇ ಮಾಯವಾಗಿದೆ. ಕೇವಲ ಆಂಗ್ಲ ಭಾಷೆಯಲ್ಲೇ ಅವರು ಶುಭಾಶಯ ತಿಳಿಸಿದ್ದು …

Read More »

ರಾಜ್‌ಪಾಲ್ ಯಾದವ್ ರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ

ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಆಗಮಿಸಿ ಭಾನುವಾರ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ. ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟವನ್ನು ಮಾಡಲು ಸಾಧ್ಯವಿಲ್ಲ ಎಂದು …

Read More »

ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ : ಎಂ.ಬಿ.ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಸರ್ಕಾರ ಇರುವವರೆಗೂ ಈ ಯೋಜನೆಗಳು ಇರುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು. ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಯಾವ ಕಾಲಕ್ಕೂ ನಿಲ್ಲುವುದಿಲ್ಲ. ಅವುಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಆದಾಗ್ಯೂ, ಅಭಿವೃದ್ಧಿಗೆ ಹಣ ಏನು ಶೇಖರಣೆ ಮಾಡಬೇಕು, ಮಾಡುತ್ತೇವೆ’ ಎಂದರು. ನಮ್ಮ …

Read More »

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು

ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.14ರ ಬುಧವಾರ ನಡೆದಿದೆ. ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ ರಾಮಾಂಜನೇಯಲು (56) ಮೃತಪಟ್ಟ ವ್ಯಕ್ತಿ. ಆ.14ರ ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಯ ಸಂದರ್ಭದಲ್ಲಿ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಬೈರಪುರದ ಗೇಟ್ ಬಳಿ ಆಂಧ್ರ ಮತ್ತು …

Read More »