ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(Renukaswamy Case) ಸಂಬಂಧ ಜೈಲಿನಲ್ಲಿರುವ ನಟ ದರ್ಶನ್(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು …
Read More »ಸೊಸೆ ಮಾಡಿದ ಮೋಸಕ್ಕೆ ಬೀದಿಗೆ ಬಂದ ಬದುಕು
ಗದಗ: ಸೊಸೆ ಮಾಡಿದ ಮೋಸಕ್ಕೆ ಬದುಕು ಬೀದಿಗೆ ಬಂದಿದ್ದು, ನನಗಾಗಿರುವ ಅನ್ಯಾಯಕ್ಕೆ ಸಮಾಜದ ಯಾವುದೇ ವ್ಯಕ್ತಿ, ಅಧಿಕಾರಿಗಳಿಂದ ನ್ಯಾಯ ಸಿಕ್ಕಿಲ್ಲ. ಆದಕಾರಣ, ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಆದಿತ್ಯ ನಗರದ ನಿವಾಸಿ ಅನುಸೂಯ ಬಸವಂತಪ್ಪ ಕರಕಿಕಟ್ಟಿ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ವರ್ಷಗಳ ಹಿಂದೆ ಮಗನಿಗೆ ಪಾರ್ವತೆವ್ವ ಹುನಗುಂದ ಎಂಬ ಹುಡುಗಿ ನೋಡಿ ವಿವಾಹ ಮಾಡಲಾಗಿತ್ತು. ಮದುವೆಯಾದ ಮೂರು …
Read More »ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಿನ್ನೆ ಸಂಜೆ 7:30 ರ ವೇಳೆಗೆ ಹತ್ಯೆ ನಡೆದಿದ್ದು, ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಅಪಾಯದಲ್ಲಿವೆ 563 ಶಾಲಾ ಕೊಠಡಿಗಳು
ಚಿಂಚೋಳಿ: ತಾಲ್ಲೂಕಿನಲ್ಲಿ ವಿವಿಧೆಡೆ ಸರ್ಕಾರಿ ಶಾಲೆಗಳು ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿವೆ. ಕೆಲವು ಶಾಲೆಗಳ ಛತ್ತಿನ ಪ್ಲಾಸ್ಟರ್ ಕಿತ್ತು ಬೀಳುತ್ತಿದ್ದು ಮಕ್ಕಳು ಹೆದರಿಕೆಯಲ್ಲಿಯೇ ಪಾಠ ಪ್ರವಚನ ಆಲಿಸುವಂತಾಗಿದೆ. ತಾಲ್ಲೂಕಿನಲ್ಲಿ 298 ಸರ್ಕಾರಿ ಶಾಲೆಗಳಿವೆ. ಇಲ್ಲಿ 28,340 ಮಕ್ಕಳ ದಾಖಲಾತಿಯಿದೆ. ಇವರಿಗೆ ಪಾಠ ಪ್ರವಚನ ನಡೆಸಲು ಒಟ್ಟು 2,073 ಶಾಲಾ ಕೊಠಡಿಗಳಿದ್ದು, ಈ ಪೈಕಿ 1,200 ಕೊಠಡಿಗಳು ಸುಸ್ಥಿತಿಯಲ್ಲಿವೆ. 308 ಶಿಥಿಲ ಕೊಠಡಿಗಳು ಸೇರಿ 563 ಕೊಠಡಿಗಳು ಅಪಾಯದಲ್ಲಿವೆ. 255 ಕೊಠಡಿಗಳಿಗೆ ಭಾರಿ ದುರಸ್ತಿಯ …
Read More »ಬದಲಾಗಲಿದೆ ಉತ್ತರ ಕರ್ನಾಟಕ ಭಾಗದ ಪ್ರವಾಸೋದ್ಯಮ
ಬೆಳಗಾವಿ, ಆಗಸ್ಟ್ 14: ಉತ್ತರ ಕರ್ನಾಟಕ ಅನೇಕ ಪ್ರವಾಸಿ ತಾಣಗಳನ್ನು ಹೊಂದಿದೆ. ಆದರೆ ಅವುಗಳು ಪ್ರಚಾರದಲ್ಲಿ, ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಈಗ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇರುವ ಪೂರಕ ಅಂಶಗಳನ್ನು ಗುರುತಿಸಿ ಅವುಗಳ ಮೇಲೆ ಹೆಚ್ಚಿನ ಗಮನ ಹರಿಸಿ, ಈ ಭಾಗದ ಪ್ರವಾಸೋದ್ಯಮದ ಚಿತ್ರಣ ಬದಲಿಸಲು ಯೋಜನೆ ರೂಪಿಸಲಾಗಿದೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಬೆಳಗಾವಿಯ ಪ್ರಯಾಣ, ಪ್ರವಾಸೋದ್ಯಮ ಮತ್ತು ಆತಿಥ್ಯ ಮದ್ಯಸ್ಥಿಕೆಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಬೆಳಗಾವಿ ವಿಮಾನ ನಿಲ್ದಾಣದ …
Read More »ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ
ಬೆಂಗಳೂರು,ಆ.13- ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್ ಆರ್ಗನ್ …
Read More »ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!
ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ! ನವದೆಹಲಿ: ದೆಹಲಿಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ …
Read More »ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ
ನವದೆಹಲಿ,ಆ.13- ದೇಶದ 78ನೇಸ್ವಾತಂತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳನ್ನು ಪ್ರಧಾನಿ ಕಾರ್ಯಾಲಯ ಅತಿಥಿಗಳನ್ನಾಗಿ ಆಹ್ವಾನಿಸಿದೆ. ಕರ್ನಾಟಕದ ಗದಗ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳಾದ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಅವರನ್ನು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ಕೇಂದ್ರ ಸರ್ಕಾರದ ಮೇರಿ ಮಾಟಿ, ಮೇರಾ ದೇಶ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌ಎಸ್ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, …
Read More »ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್ ಸ್ಪರ್ಶ ನೀಡಲು ಮುಂದಾದ ಬಿಬಿಎಂಪಿ
ಬೆಂಗಳೂರು,ಆ.13- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್ ಸ್ಪರ್ಶ ನೀಡಲು ಬಿಬಿಎಂಪಿ ಮುಂದಾಗಿದೆ.ಇನ್ನು ಮುಂದೆ ಟಚ್ ಸ್ಕ್ರೀನ್ ಮೂಲಕ ತಿಂಡಿ ಬುಕ್ಕಿಂಗ್ ಮಾಡಲು ಇಂದಿರಾ ಕ್ಯಾಂಟಿನ್‌ಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ರಾಜರಾಜೇಶ್ವರಿನಗರ ವಲಯದ 11 ಕ್ಯಾಂಟೀನ್‌ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಾಧಕ ಬಾಧಕ ಅಧ್ಯಯನದ ಬಳಿಕ 169 ಇಂದಿರಾ ಕ್ಯಾಂಟೀನ್ ಗೂ ಡಿಜಿಟಲ್ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಎಷ್ಟು ತಿಂಡಿ, ಎಷ್ಟು ಊಟ ಖರ್ಚಾಯ್ತು? ಗುಣಮಟ್ಟ …
Read More »ವಿಜಯಪುರ: ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ ನೀಡಿ
ವಿಜಯಪುರ(ದೇವನಹಳ್ಳಿ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾತ್ಮಕ ಅಕ್ರಮಣ ಕೊನೆಗೊಳ್ಳಿಸಿ, ಅವರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಸೋಮವಾರ ಹಿಂದೂ ಹಿತರಕ್ಷಣಾ ಸಮಿತಿಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶಿವಗಣೇಶ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಸಮಿತಿ ಸದಸ್ಯರು ಮೌನ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. …
Read More »