ಬೆಳಗಾವಿ – ಗೋವಾ ಮತ್ತು ಕರ್ನಾಟಕದ ಗಡಿ ಖಾನಾಪುರ ತಾಲೂಕಿನ ಸುರಾಲ್ ಕ್ರಾಸ್ ನ ಅಬಕಾರಿ ನಾಕಾದಲ್ಲಿ ದಿನದ ಇಪ್ಪತ್ನಾಲ್ಕು ಘಂಟೆಯೂ ಅಬಕಾರಿ ಪೊಲೀಸರು ಮತ್ತು ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು ಗೋವಾದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲ್ಲ ಕಾರ್ಮಿಕ ಪಾದಚಾರಿಗಳ ಪ್ರಾಥಮಿಕ ಚಿಕಿತ್ಸೆ ನಡೆಸುತ್ತಿದ್ದಾರೆ. ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾತ್ರಿ ವಿದ್ಯುತ್ತಿನ ತೀವ್ರ ಅಭಾವದಿಂದಾಗಿ ದಟ್ಟ ಅರಣ್ಯದ ಈ ಭಾಗದಲ್ಲಿ ಕೆಲಸ ನಿರ್ವಹಣೆ …
Read More »ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. …
Read More »ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ
ಮುಂಬೈ: ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ. ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ …
Read More »ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ
ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …
Read More »ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್ಡೌನ್
ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ. ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ …
Read More »ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ
ಲಕ್ನೋ: ತಬ್ಲಿಘಿ ಜಮಾತ್‍ಗೆ ತೆರಳಿ ಇನ್ನೂ ಪತ್ತೆಯಾಗದವರನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಉತ್ತರ ಪ್ರದೇಶದ ಪೊಲೀಸರು ಪ್ರಕಟಿಸಿದ್ದಾರೆ. ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರು ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ನಡೆಸಬೇಕೆಂದು ಎಲ್ಲ ಸರ್ಕಾರಗಳು ಸೂಚನೆ ನೀಡುತ್ತಿವೆ. ಆದರೂ ಈ ಕಾರ್ಯಕ್ರಮಕ್ಕೆ ತೆರಳಿದ ಹಲವು ಮಂದಿ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಜಂಗಢದ ಪೊಲೀಸರು ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಬಹಳ ಸಂಖ್ಯೆಯಲ್ಲಿ ಜಮಾತ್ …
Read More »ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ
ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ …
Read More »ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು
ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …
Read More »ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..
ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …
Read More »‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “
ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …
Read More »
Laxmi News 24×7