Breaking News

ರಾಷ್ಟ್ರೀಯ

ಎನ್ಎಸ್ಎಫ್ ಕಚೇರಿಯಲ್ಲಿ ನಾಗಪ್ಪ ( ನಾಗ ದೇವತೆ) ನಿಗೆ ಹಾಲೇರೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಶ್ರಾವಣ ಮಾಸದಲ್ಲಿ ಆರಂಭವಾಗುವ ನಾಗರ ಪಂಚಮಿ ಎಲ್ಲ ಹಬ್ಬ-ಹರಿ ದಿನಗಳಿಗೆ ಮುನ್ನುಡಿ- ಬಾಲಚಂದ್ರ ಜಾರಕಿಹೊಳಿ ಗೋಕಾಕ- ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬವಾಗಿರುವ ನಾಗರ ಪಂಚಮಿ ಹಬ್ಬದ ಹಿಂದಿನ ದಿನ ಸಹೋದರಿಯರು ನಾಗ ದೇವತೆಗೆ ಪ್ರಾರ್ಥಿಸಿಕೊಂಡು ತಮ್ಮ ಸಹೋದರರಿಗೆ ರಕ್ಷಣೆ ಸಿಗಲೆಂದು ಹರಕೆ ಹೊರುವ ಪ್ರತೀತಿ ಇಂದಿಗೂ ಪ್ರಸ್ತುತವಿದೆ ಎಂದು ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ನಾಗರ ಪಂಚಮಿ ನಿಮಿತ್ತ …

Read More »

ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

ಕಲಬುರಗಿ: ಜಿಲ್ಲೆಯಲ್ಲಿರುವ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಹಾಗೂ ಕೆಪಿಆರ್ ಚಿಣಮಗೇರಾ ಸಕ್ಕರೆ ಕಾರ್ಖಾಬೆ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ರೈತರ ಕಬ್ಬಿನ ಬಾಕಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ‌ಕಚೇರಿ ಎದುರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ …

Read More »

ಮುಂದುವರಿದ ತನಿಖೆ, ಮಹತ್ವದ ‌ಮಾಹಿತಿ‌ ಪಡೆದ ಸಿಐಡಿ

ಯಾದಗಿರಿ: ನಗರ ಠಾಣೆ ಪಿಎಸ್‌ಐ ಪರಶುರಾಮ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಐಡಿ ತಂಡವು ನಗರದ ಡಿವೈಎಸ್‌ಪಿ ಕಚೇರಿಗೆ ಆಗಮಿಸಿ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹಣಮಂತ, ಮಾವ ವೆಂಕಟಸ್ವಾಮಿ ಅವರಿಂದ ಹೇಳಿಕೆ ಪಡೆಯಿತು. ನಂತರ ಪೊಲೀಸ್‌ ಇಲಾಖೆಯ ವಸತಿ ಗೃಹದಲ್ಲಿರುವ ಮೃತ ಪರಶುರಾಮ್ ಅವರ ಮನೆಗೆ ತೆರಳಿದರು. ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ನಡೆಸಿ ಮೃತ ಪಿಎಸ್‌ಐ ಪರಶುರಾಮ್ ಕುಟುಂಬಸ್ಥರಿಂದ ಸಿಐಡಿ ತಂಡ ಮಾಹಿತಿ ಪಡೆದರು. ಅಲ್ಲದೇ …

Read More »

ಟ್ರ್ಯಾಕ್ಟರ್ ಟ್ರೈಲರ್ ಕಳ್ಳನ ಬಂಧನ: ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ವಶ

ಬೈಲಹೊಂಗಲ: ಟ್ರ್ಯಾಕ್ಟರ್‌ ಟ್ರೈಲರ್ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ₹5 ಲಕ್ಷ ಮೌಲ್ಯದ ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ಟ್ರ್ಯಾಕ್ಟರ್ ಎಂಜಿನ್‌ನ್ನು ಗುರುವಾರ ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ. ಸವದತ್ತಿ ತಾಲ್ಲೂಕಿನ ಮರಕುಂಬಿ ಗ್ರಾಮದ ಅಡಿವೆಪ್ಪ ನಾಗಪ್ಪ ಕಳಸನ್ನವರ (34) ಬಂಧಿತ ಆರೋಪಿ. ಈತ ತಾಲ್ಲೂಕಿನ ಸಾಣಿಕೊಪ್ಪ ಗ್ರಾಮದ ಹದ್ದಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳುವು ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. …

Read More »

ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಸಾಗರ: ಇಲ್ಲಿನ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಮಂಗಳವಾರ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕರು ಹಾಗೂ ನಿರ್ವಾಹಕರು ಬಸ್‌ನಿಂದ ಇಳಿದು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದ್ದಾರೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ತೊಂದರೆ ಉಂಟಾಗಿಲ್ಲ. ಬಸ್‌ನ ಶೇ 50ರಷ್ಟು ಭಾಗ ಸುಟ್ಟು ಹೋಗಿದೆ.

Read More »

ನಾಗರಪಂಚಮಿಗೆ ಖರೀದಿ ಜೋರು

ಹುಬ್ಬಳ್ಳಿ: ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ನಗರದಲ್ಲಿ ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ಜನರು ಬುಧವಾರ ಇಲ್ಲಿನ ದುರ್ಗದ್‌ಬೈಲ್‌ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಗುರುವಾರ, ಶುಕ್ರವಾರ ಪಂಚಮಿ, ನಾಗರಮೂರ್ತಿಗಳಿಗೆ ಹಾಲೆರೆಯುವ ಹಬ್ಬ ನಡೆಯಲಿದ್ದು, ಇಲ್ಲಿನ ಬಟ್ಟೆ ಅಂಗಡಿ, ಅಲಂಕಾರಿಕ ವಸ್ತುಗಳು, ಹೂ, ಹಣ್ಣಿನ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿತ್ತು.   ನಾಗಪಂಚಮಿಯ ವಿಶೇಷತೆಯಾಗಿರುವ ವಿಧವಿಧವಾದ ಉಂಡಿಗಳನ್ನು ತಯಾರಿಸಲು, ಶೇಂಗಾ, ಎಳ್ಳು, ಕೊಬ್ಬರಿ, ಕಡಲೆಹಿಟ್ಟು, ರವೆ, ಬೆಲ್ಲ, …

Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು,

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ (MUDA Scam) ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಾಗಿದೆ. ಬೆಂಗಳೂರಿನ (Bengaluru) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರಿನ (Mysore) ಸ್ನೇಹಮಯಿ ಕೃಷ್ಣ ಎಂಬುವರು ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಆದೇಶ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿಯಲ್ಲಿ …

Read More »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಶಾಕ್‌

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೋರಾಟ ಮಾಡುತ್ತಿರುವ ಬೆನ್ನಲ್ಲೇ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಕ್ ಕೊಟ್ಟಿದೆ. ಆಗಸ್ಟ್ 29ರಂದು ಖುದ್ದು ಹಾಜರಾಗಬೇಕು ಎಂದು ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಇದರಿಂದ ಸಿಎಂ ಮತ್ತು ಡಿಸಿಎಂಗೆ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಖಂಡಿಸಿ …

Read More »

: ಕಾರ್ಮಿಕನ ಶವವನ್ನು ಕೈಚೀಲದಲ್ಲಿ ಹಾಕಿ ಕೊಟ್ಟ ಜಿಲ್ಲಾಡಳಿತ

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (20) ಅವರ ದೇಹದ ಅವಶೇಷಗಳನ್ನು, ಅಧಿಕಾರಿಗಳು ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟು ಕಳುಹಿಸಿದರು. ಸುಟ್ಟುಹೋದ ಮಗನ ದೇಹದ ಅಲ್ಪಸ್ವಲ್ಪ ಅಂಗಾಂಗಗಳನ್ನು ತಂದೆ ಸಣ್ಣಗೌಡ ಅವರು, ಸಂತೆಗೆ ಬಳಸುತ್ತಿದ್ದ ಕೈಚೀಲದಲ್ಲಿ ಹಾಕಿಕೊಂಡು ಮನೆ ಕಡೆಗೆ ಹೊರಟರು. ದಾರಿಯುದ್ದಕ್ಕೂ ಇನ್ನಿಲ್ಲದಂತೆ ದುಃಖಿಸುತ್ತಿದ್ದ ಅವರ ಪರಿಸ್ಥಿತಿಗೆ ಮರುಗದವರೇ ಇಲ್ಲ. ಕಾರ್ಖಾನೆಯ ಲಿಫ್ಟ್‌ನಲ್ಲೇ ಸಿಕ್ಕಿ ಸತ್ತುಹೋದ ಯುವಕನ …

Read More »

ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಈ ಬಾರಿ ಶಾಂತಿ, ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕೋರಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ನಡೆದ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಗಣೇಶೋತ್ಸವ ಆಚರಣೆ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ನಗರದ ಎಂಟು ಠಾಣೆಗಳಲ್ಲಿ ಏಕಗವಾಕ್ಷಿ ಪದ್ಧತಿ …

Read More »