Breaking News

ರಾಷ್ಟ್ರೀಯ

ಕರ್ಮ, ಅಕರ್ಮ, ವಿಕರ್ಮದ ಅರಿವಿರಲಿ: ಮೋಹನ್‌ ಭಾಗವತ್‌

ಬೆಳಗಾವಿ: ‘ಕರ್ಮ, ಅಕರ್ಮ ಮತ್ತು ವಿಕರ್ಮದ ಬಗ್ಗೆ ನಾವು ಸದಾ ಜಾಗೃತರಾಗಬೇಕು. ಯಾವ ಕರ್ಮ ಮಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು’ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದರು. ಇಲ್ಲಿನ ಅಕಾಡೆಮಿ ಆಫ್‌ ಕಂಪೇರೆಟಿವ್‌ ಫಿಲಾಸಫಿ ಆಯಂಡ್‌ ರಿಲೀಜನ್‌ (ಎಸಿಪಿಆರ್‌)ನ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಗುರುದೇವ ರಾನಡೆ ರಚಿಸಿದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಬದುಕಿನಲ್ಲಿ ಪ್ರತಿಯೊಬ್ಬರಿಗೂ ಜ್ಞಾನ ಮತ್ತು ಭಕ್ತಿ ಅಗತ್ಯ. ರಾಮ ಮತ್ತು ರಾವಣ ಇಬ್ಬರಿಗೂ …

Read More »

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್‌ಡಿಆರ್‌ಎಫ್‌ ತಂಡ ಬೋಟ್‌ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್‌ ಜಾಕೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್‌ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್‌ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್‌ ನಿಯಂತ್ರಣ …

Read More »

ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ವಿಠಲಾಪುರದಲ್ಲಿ 16 ಮನೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ

ಗದಗ: ತುಂಗಭದ್ರಾ ನದಿಯ ಪ್ರವಾಹದಿಂದ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ 16 ಮನೆಗಳು ಜಲಾವೃತಗೊಂಡಿವೆ. ವಿಠಲಾಪುರ ಗ್ರಾಮದ 40 ಜನರನ್ನು ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ಥಳಾಂತರಿಸಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

Read More »

ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ರೈಲ್ವೆ ಹಳಿಗೆ ಅಣ್ಣ ತಂಗಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಆ.02)ಬೆಳಗ್ಗೆ ನಡೆದಿದೆ. ಶಿಡ್ಲಘಟ್ಟ ಟೌನ್ ನ ಪ್ರೇಮನಗರದ ನಿವಾಸಿಗಳಾದ ಶಿಲ್ಪ ಅಲಿಯಾಸ್ ನವ್ಯ (23) ಹಾಗೂ ಪ್ರಭು (20) ಎನ್ನಲಾಗಿದ್ದು ಬಲಜಿಗ ಜನಾಂಗದವರು ಎನ್ನಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಪೊಲೀಸ್ …

Read More »

Rajasthan ದಿಂದ ಬಂದಿದ್ದು ಕುರಿ ಮಾಂಸ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದೊಂದು ವಾರದಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರಾಜಸ್ಥಾನದಿಂದ ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿ ತಂದ ಆರೋಪ ಪ್ರಕರಣದ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಜೊತೆಗೆ, ಈ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಮಾಂಸದ ಸ್ಯಾಂಪಲ್‌ ಟೆಸ್ಟಿಂಗ್‌ ವರದಿಯನ್ನು ಆಹಾರ ಇಲಾಖೆಯು ಪ್ರಕಟಿಸಿದ್ದು, ಅದು ನಾಯಿ ಮಾಂಸ ಅಲ್ಲ, …

Read More »

ಆ. 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು,ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಘೋಷಿಸಲಾಗಿಲ್ಲ.

Read More »

ಸೋರುತ್ತಿರುವ ದಾಂಡೇಲಿಯ ಸಾರಿಗೆ ಬಸ್ ನಿಲ್ದಾಣ:

ದಾಂಡೇಲಿ : ಪ್ರವಾಸೋದ್ಯಮ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಚಾಪನ್ನ ಮೂಡಿಸುತ್ತಿರುವ ದಾಂಡೇಲಿ ನಗರದ ಕೇಂದ್ರ ಬಸ್ ನಿಲ್ದಾಣ ಮಾತ್ರ ಸೋರುವ ಮೂಲಕ ಎಲ್ಲರ ಗಮನ ಸೆಳೆಯತೊಡಗಿದೆ. ಸಾರಿಗೆ ಬಸ್ ನಿಲ್ದಾಣದ ಒಳಗಡೆ ಛತ್ರಿ‌ ಬಿಡಿಸಿ ಕುಳಿತುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಂಚಾರಿ ನಿಯಂತ್ರಕರ ಕೊಠಡಿಯಲ್ಲಂತೂ ನೀರು ತುಂಬಿಕೊಂಡಿರುತ್ತದೆ. ನಿಲ್ದಾಣದಲ್ಲಿರುವ ವಿಶ್ರಾಂತಿ ಕೊಠಡಿಯಲ್ಲಂತೂ ನೀರು ನಿಂತಿರುವುದರಿಂದ ವಿಶ್ರಾಂತಿ ಮಾಡಲು ಹೋದವರಿಗೆ ವಾಂತಿ ಬರುವಂತಹ ಸ್ಥಿತಿಯಿದೆ. ಬಸ್ ನಿಲ್ದಾಣದ ಗೋಡೆಗಳು ಅಲ್ಲಲ್ಲಿ ಬಿರುಕು …

Read More »

JDS ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ‘ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ವಿಚಾರದಲ್ಲಿ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ಗುರುವಾರ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ “ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. …

Read More »

ಅಂಗನವಾಡಿಗಳಿಗೂ ಹೈಟೆಕ್‌ ಸ್ಪರ್ಶ-ಸಚಿವೆ ಹೆಬ್ಬಾಳಕರ

ಬೆಳಗಾವಿ: ದೇಶ ಬೆಳೆಯುತ್ತಿದೆ; ರಾಜ್ಯವೂ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಹಾಗೆಯೇ ನಮ್ಮ ಅಂಗನವಾಡಿಗಳೂ ಉನ್ನತೀಕರಣ ಆಗಬೇಕೆಂಬ ಆಶಯದಿಂದ ನಮ್ಮ ಇಲಾಖೆ ಅಂಗನವಾಡಿಗಳನ್ನು ಆಧುನೀಕರಣಗೊಳಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಇಲಾಖೆ ವತಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ಇದು ಪೈಪೋಟಿ …

Read More »

ಪಾದಯಾತ್ರೆ ನಿಗದಿಯಂತೆ ನಡೆಯಲಿದೆಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.:ಜೋಶಿ

ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದರು.   ಪಾದಯಾತ್ರೆಗೆ ಜೆಡಿಎಸ್ ಅಸಮಾಧಾನ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಪಾದಯಾತ್ರೆ ನಿಲ್ಲಲ್ಲ. ಜೆಡಿಎಸ್ ನವರನ್ನೂ ಮನವೊಲಿಸಲಾಗುವುದು ಎಂದು ಹೇಳಿದರು. ಇನ್ನು …

Read More »