Breaking News

ರಾಷ್ಟ್ರೀಯ

ಪಾದಯಾತ್ರೆ ನಿಗದಿಯಂತೆ ನಡೆಯಲಿದೆಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತುಕತೆ ನಡೆಸಲಾಗುವುದು.:ಜೋಶಿ

ನವದೆಹಲಿ: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಲು ಮುಂದಾಗಿರುವ ಪಾದಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದರು.   ಪಾದಯಾತ್ರೆಗೆ ಜೆಡಿಎಸ್ ಅಸಮಾಧಾನ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಪಾದಯಾತ್ರೆ ನಿಲ್ಲಲ್ಲ. ಜೆಡಿಎಸ್ ನವರನ್ನೂ ಮನವೊಲಿಸಲಾಗುವುದು ಎಂದು ಹೇಳಿದರು. ಇನ್ನು …

Read More »

ಗುಡಿಸಲು ತೆರವುಗೊಳಿಸದಂತೆ ಪ್ರತಿಭಟನೆ

ವಿಜಯಪುರ (ದೇವನಹಳ್ಳಿ): ಹೋಬಳಿಯ ಕೋರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡುವನಹಳ್ಳಿ ಗ್ರಾಮದ ಸಮೀಪ ಇರುವ ತಮ್ಮ ಗುಡಿಸಲಗಳನ್ನು ತೆರವುಗೊಳಿಸಿದಂತೆ ಇಲ್ಲಿನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಸರ್ವೇ ನಂ.36 ರಲ್ಲಿ ಇರುವ 2 ಎಕರೆ 30 ಗುಂಟೆ ಜಾರ ಸರ್ಕಾರದ್ದು, ಸರ್ಕಾರಿ ಜಾಗದಲ್ಲಿ ಅನಧಿಕೃತ ಗುಡಿಸಲು ನಿರ್ಮಿಸಿರುವುದು ಸರಿಯಿಲ್ಲ. ಇಲ್ಲಿರುವ ಗುಡಿಸಿಲುಗಳನ್ನು ತೆರವುಗೊಳಿಸಲಾಗುವುದು ಎಂದು ಹೇಳಿ ಎಚ್ಚರಿಕೆಯ ಫಲಕ ಅಳವಡಿಸಲು ಅಧಿಕಾರಿಗಳು ಮುಂದಾದರು. ಇದರಿಂದ ಕೆರಳಿದ ಗುಡಿಸಲು ನಿವಾಸಿಗಳು ಗುಡಿಸಲುಗಳ …

Read More »

ಸಿದ್ದರಾಮಯ್ಯಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್..!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕಚೇರಿಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಹೆಚ್.ಕೆ ಪಾಟೀಲ್ ರಾಜ್ಯಪಾಲರ ಕಚೇರಿಯಿಂದ ಅವರಿಗೆ ನೋಟಿಸ್ ಬಂದಿದೆ. ತಪ್ಪು ಗ್ರಹಿಕೆಯಿಂದ …

Read More »

ಅವಳಿ ಜಲಾಶಯಗಳಿಗೆ ಬಾಗಿನ ಸಮರ್ಪಣೆ

ಹೊಸನಗರ: ನಾಡಿನ ಬೆಳಕಿಗಾಗಿ ಬಹುದೊಡ್ಡ ಕೊಡುಗೆ ನೀಡಿದ ಚಕ್ರಾ-ಸಾವೇಹಕ್ಲು ಅವಳಿ ಜಲಾಶಯಗಳು ಗಮನಾರ್ಹ ಅಭಿವೃದ್ಧಿ ಕಾಣಬೇಕಾಗಿದೆ. ಈ ಪ್ರದೇಶವು ‘ಇಕೋ ಟೂರಿಸಂ’ಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರ ಚಕ್ರಾ ಮತ್ತು ಸಾವೇಹಕ್ಲು ಅವಳಿ ಜಲಾಶಯಗಳಿಗೆ ಪ್ರಥಮ ಬಾರಿಗೆ ಬಾಗಿನ ಸಮರ್ಪಿಸಿದ ಬಳಿಕ ಮಾತನಾಡಿದರು. ಈ ಅವಳಿ ಜಲಾಶಯ ಪ್ರದೇಶಗಳು ಪ್ರವಾಸೋದ್ಯಮಕ್ಕೆ ಸೂಕ್ತ ಜಾಗ. ಜನರು ಇಲ್ಲಿನ ಸೌಂದರ್ಯವನ್ನು ಆಸ್ವಾದಿಸಲು ಅವಕಾಶ ಮಾಡಿಕೊಡಬೇಕಿದೆ. ಅದರಲ್ಲೂ …

Read More »

ಯತ್ನಾಳ ಎಲ್ಲಿಂದ ಮಾಹಿತಿ ಸಂಗ್ರಹಿಸುತ್ತಾರೆ ಎಂಬುದೇ ವಿಚಿತ್ರ: ಹೆಬ್ಬಾಳಕರ

ಬೆಳಗಾವಿ: ‘ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಹೈಕಮಾಂಡ್‌ಗೆ ₹2,000 ಕೋಟಿ, ಮಂತ್ರಿ ಸ್ಥಾನಕ್ಕೆ ₹500 ಕೋಟಿ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರೇ ಈ ಹಿಂದೆ ಹೇಳಿದ್ದರು. ಈಗ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ದಾಖಲೆ ನೀಡುತ್ತಿದ್ದಾರೆ ಎನ್ನುತ್ತಿದ್ದಾರೆ. ಅವರು ಎಲ್ಲಿಂದ ಇಂಥ ವಿಷಯ ಸಂಗ್ರಹಿಸುತ್ತಾರೆ ಎಂಬುದೇ ವಿಚಿತ್ರ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿರುಗೇಟು ನೀಡಿದರು. ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಲು …

Read More »

ಪ್ರವಾಹದಿಂದ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಿ’

ಬೆಳಗಾವಿ: ‘ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರವಾಹದಿಂದ ಜನರು ಮತ್ತು‌ ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.   ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ನಿರ್ವಹಣೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ …

Read More »

ಘಟಪ್ರಭಾ ನದಿ ಪ್ರವಾಹ: ಮರೀಚಿಕೆಯಾದ ಶಾಶ್ವತ ಸ್ಥಳಾಂತರ

ಮಹಾಲಿಂಗಪುರ: ಘಟಪ್ರಭಾ ನದಿ ಪ್ರವಾಹದಿಂದ ನಡುಗಡ್ಡೆಯಾಗಿರುವ ಹಳೆ ನಂದಗಾಂವ ಗ್ರಾಮದ 52 ಕುಟುಂಬಗಳ ಶಾಶ್ವತ ಸ್ಥಳಾಂತರದ ಬೇಡಿಕೆ ಮರೀಚಿಕೆಯಾಗಿದ್ದು, ಮನೆಗಳ ಹಂಚಿಕೆ ಗೊಂದಲಮಯವಾಗಿ ಪರಿಣಮಿಸಿದೆ. ಗ್ರಾಮಸ್ಥರ ಶಾಶ್ವತ ಸ್ಥಳಾಂತರಕ್ಕಾಗಿ 1982ರಲ್ಲಿಯೇ ಹಕ್ಕು ಪತ್ರ ಹಾಗೂ 10 ಎಕರೆ ಭೂಮಿ ನೀಡಲಾಗಿದೆ. ಪ್ರತಿ ಮನೆಯ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಜಾಗೆ ಅಳತೆ ಮಾಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯ್ತಿ ಪ್ರತಿ ವರ್ಷ ಇದಕ್ಕಾಗಿ ಭೂಬಾಡಿಗೆಯನ್ನು ಕೆಲ ಗ್ರಾಮಸ್ಥರಿಂದ ಪಡೆಯುತ್ತಿದೆ. ಸ್ಥಳಾಂತರಕ್ಕಾಗಿ ಹಕ್ಕು …

Read More »

ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಜೀವನವೇ ಜಲಾವೃತ.

ಶೃಂಗೇರಿ: ಭಾರಿ ಮಳೆಗೆ ಮಲೆನಾಡು ಅಕ್ಷರಶ ಕಂಗಾಲಾಗಿದೆ, ತುಂಗೆಯ ಅಬ್ಬರಕ್ಕೆ ನೂರಾರು ಎಕರೆ ಹೊಲ – ಗದ್ದೆ-ತೋಟಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿ ದೇಗುಲದ ಪಾರ್ಕಿಂಗ್ ಪ್ರದೇಶ, ಗಾಂಧಿ ಮೈದಾನವೂ ಜಲಾವೃತಗೊಂಡಿದ್ದು, ಶೃಂಗೇರಿ ದೇಗುಲದ ಕಪ್ಪೆಶಂಕರ ನಾರಾಯಣ ದೇಗುಲ, ಗುರುಗಳ ಸಂಧ್ಯಾವಂದನೆ ಮಂಟಪವೂ ಜಲಾವೃತಗೊಂಡಿದೆ. ಗಾಂಧಿ ಮೈಧಾನದಲ್ಲಿರುವ ಅಂಗಡಿಗಳು ಅರ್ಧ ಮುಳುಗಿದ್ದು ತುಂಗಾ ನದಿ ಅಬ್ಬರಕ್ಕೆ ಶೃಂಗೇರಿ ಜನರ ಬದುಕೇ ಅತಂತ್ರಗೊಂಡಿದೆ.

Read More »

SC-ST’ ಒಳಮೀಸಲಾತಿಗೆ `ಸುಪ್ರೀಂಕೋರ್ಟ್’ ಗ್ರೀನ್ ಸಿಗ್ನಲ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ. ಮಹತ್ವದ ತೀರ್ಪಿನಲ್ಲಿ, ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್ಸಿ / ಎಸ್ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದೆ. ಉದ್ಯೋಗ ಮತ್ತು ಪ್ರವೇಶದಲ್ಲಿ ಕೋಟಾಕ್ಕಾಗಿ ಎಸ್ಸಿ ಮತ್ತು ಎಸ್ಟಿ ವರ್ಗಗಳಲ್ಲಿ ಉಪ ವರ್ಗೀಕರಣ ಮಾಡಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ನ 7 ನ್ಯಾಯಾಧೀಶರ ಪೀಠವು 6:1 ಬಹುಮತದಿಂದ, ಮೀಸಲಾತಿ ವರ್ಗಗಳ ಅಂದರೆ ಪರಿಶಿಷ್ಟ …

Read More »

ತುಂಗಭದ್ರೆಯ ಚೆಲುವಿಗೆ ಮನಸೋತ ಪ್ರವಾಸಿಗರು

ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯವು ನಿರಂತರ ಮಳೆಯಿಂದ ಭರ್ತಿಯಾಗಿದ್ದು, ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯದಿಂದ ಧುಮ್ಮಿಕ್ಕುವ ನೀರು ಮತ್ತು ನೊರೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಜಲಾಶಯ ಹಿನ್ನೀರಿನ ಲೇಕ್ ವ್ಯೂ ಪ್ರವಾಸಿ ಮಂದಿರದ ಬಳಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡುಬಂದರು. ತೆರೆ ಬರುವ ವೇಳೆ ಮತ್ತು ಗಾಳಿಯ ಪರಿಣಾಮ ಸಿಡಿಯುವ ನೀರ ಸಿಂಚನಕ್ಕೆ ಮೈವೊಡ್ಡಿ ಮಕ್ಕಳು ಸಮೇತ ಪ್ರವಾಸಿಗರು ಪುಳಕಗೊಂಡರು. ಅಲ್ಲಿನ ಸಿಬ್ಬಂದಿಯ ಎಚ್ಚರಿಕೆ …

Read More »