Breaking News

ರಾಷ್ಟ್ರೀಯ

ಮನೆಗಳಿಗೆ ನುಗ್ಗಿದ ಮಳೆ ನೀರು

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದ ಹೊರವಲಯದಲ್ಲಿ ಬರುವ ಹೊಸ ರಸ್ತೆಯ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಕಳೆದ ವರ್ಷ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ವೆಚ್ಚದಲ್ಲಿ ಆಗಿರುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹರಿಯುವ ಮಳೆ ನೀರು ಗಟಾರಕ್ಕೆ ಹೋಗದೆ ಮನೆಗೆ ನುಗ್ಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ‘ಈ ಬಗ್ಗೆ ಇಲ್ಲಿಯ ಮುಸ್ಲಿಂ ಸಮುದಾಯದವರು …

Read More »

ಮಹಾದಾಯಿಗೆ ಶೀಘ್ರದಲ್ಲಿ ತಾರ್ಕಿಕ ಅಂತ್ಯ: ಶೆಟ್ಟರ

ಸವದತ್ತಿ: ಮಹಾದಾಯಿ, ಕಳಸಾ-ಬಂಡೂರಿ ಸೇರಿ 13 ಟಿಎಂಸಿ ಅಡಿ ನೀರು ಮಲಪ್ರಭೆಗೆ ಹರಿಸಬೇಕಿದೆ. ಗೋವಾ ಸರ್ಕಾರದ ಉದ್ಧಟತನದಿಂದ ವಿಳಂಬವಾಗುತ್ತಿದೆ. ಅರಣ್ಯ, ನೀರಾವರಿ ಇಲಾಖೆಗಳಿಂದ ಕ್ಲಿಯರನ್ಸ್ ಬಂದಿದ್ದು, ಕೆಲ ದಿನಗಳಲ್ಲಿ ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ಕಲ್ಮಠದ ಆರವಣದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಭಾನುವಾರ ಜರುಗಿದ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. …

Read More »

ಮಳೆಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಹಳ್ಳಿಗಳು

ಖಾನಾಪುರ: 93 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಿಂದ ಸುತ್ತುವರಿದ ಖಾನಾಪುರ ತಾಲ್ಲೂಕಿನ 100ಕ್ಕೂ ಹೆಚ್ಚು ಗ್ರಾಮಗಳು ದಟ್ಟ ಅರಣ್ಯ ಪ್ರದೇಶದಲ್ಲಿವೆ. ಪ್ರತಿ ಬಾರಿ ಮಳೆಗಾಲದಲ್ಲಿ ಈ ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿತಗೊಳ್ಳುತ್ತವೆ. ಮಳೆಗಾಲ ಮುಗಿಯುವವರೆಗೂ ಭಯದಲ್ಲೇ ಬದುಕಬೇಕಾದ ಅನಿವಾರ್ಯವಿದೆ.   ಲೋಂಡಾ, ನಾಗರಗಾಳಿ, ಕಣಕುಂಬಿ ಮತ್ತು ಭೀಮಗಡ ವನ್ಯಧಾಮ ವ್ಯಾಪ್ತಿಯಲ್ಲಿರುವ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಹೊಲ- ಗದ್ದೆಗಳು ಮತ್ತು ಜನವಸತಿಗಿಂತ ಅರಣ್ಯ ಪ್ರದೇಶವೇ ಅಧಿಕ ಪ್ರಮಾಣದಲ್ಲಿದೆ. ವನ್ಯಜೀವಿಗಳ ಮೇಲೆ …

Read More »

ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ನದಿಗೆ 2 ಲಕ್ಷ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ಪೌರಾಣಿಕ ಹಿನ್ನೆಲೆಯ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಸಂಪೂರ್ಣ ಜಲಾವೃತಗೊಂಡಿದೆ. ಶನಿವಾರ ತಡರಾತ್ರಿ ದೇವಸ್ಥಾನದ ದಕ್ಷಿಣ ದ್ವಾರದಿಂದ ಕೃಷ್ಣಾ ನದಿ ನೀರು ಗರ್ಭಗುಡಿಯೊಳಗೆ ಪ್ರವೇಶಿಸಿತು. ನದಿ ನೀರು …

Read More »

‘ಕಮಲ’ ಚಕ್ರವ್ಯೂಹವನ್ನು ಆರು ಜನರು ನಿಯಂತ್ರಿಸುತ್ತಾರೆ; ರಾಹುಲ್​ಗಾಂಧಿ

ನವದೆಹಲಿ: ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಯುವಕರು, ರೈತರು, ಮಹಿಳೆಯರು ಮತ್ತು ಸಣ್ಣ ಉದ್ಯಮಗಳ ಸುತ್ತ ಚಕ್ರವ್ಯೂಹವನ್ನು (ಮಹಾಭಾರತದ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಯುದ್ಧ ರಚನೆ) ರಚಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ(ಜುಲೈ 29) ಆರೋಪಿಸಿದ್ದಾರೆ. ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಮಲ (ಬಿಜೆಪಿಯ ಚಿಹ್ನೆ) ರಚನೆಯ ಕೇಂದ್ರದಲ್ಲಿ ನರೇಂದ್ರ ಮೋದಿ, ಅಮಿತ್ ಷಾ, ಮೋಹನ್ ಭಾಗವತ್, ಅಜಿತ್ ದೋವಲ್, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ …

Read More »

ನೆರೆಪೀಡಿತ ಪ್ರದೇಶಗಳ ಭೇಟಿಗೆ ಮುಂದಾದ ಬಿಜೆಪಿ ನಾಯಕರ ತಂಡ

ಬೆಂಗಳೂರು,ಜು.29- ಭಾರತದಲ್ಲಿ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡವನ್ನು ರಚಿಸಿದೆ. ಈಗಾಗಲೇ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಗೊಂಡಿದ್ದು, ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಅಶ್ವಥನಾರಾಯಣ, ಅರಗ ಜ್ಞಾನೇಂದ್ರ, ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ , ಮೇಲನೆ ವಿಪಕ್ಷ ನಾಯಕ …

Read More »

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ..!

ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಂಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾನಸ (25) ಎಂದು ಗುರುತಿಸಲಾಗಿದೆ. ಗಂಡನ ಮನೆಯಲ್ಲೇ ಆಕೆ ಮೊಬೈಲ್ ನಲ್ಲಿ ವಿಡಿಯೋ ಮಾಡಿ ನಂತರ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ಮದುವೆಯಾಗಿದ್ದರು. 1 ವರ್ಷದಿಂದ ದಿಲೀಪ್ ಅನ್ಯ ಮಹಿಳೆ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು …

Read More »

BPL ಕಾರ್ಡ್ ಹೊಂದಿರುವವರು ಓದಲೇ ಬೇಕಾದ ಸುದ್ದಿ

ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ಅಕ್ರಮವಾಗಿ ಕಾರ್ಡ್‌ಹೊಂದಿರುವವರಿಗೆ ಬಿಸಿ ಮುಟ್ಟಿಸುವುದಕ್ಕೆ ಮುಂದಾಗಿದೆ. ಅಕ್ರಮವಾಗಿ ಕಾರ್ಡ್‌ ಪಡೆದುಕೊಂಡಿರುವವರ ವಿವರವನ್ನು ಪತ್ತೆ ಹೆಚ್ಚುವುದಕ್ಕೆ ರಾಜ್ಯ ಸರ್ಕಾರವು ವಿವಿಧ ಮೂಲಗಳ ಮೊರೆ ಹೋಗಿದ್ದು, ಈ ಪೈಕಿ ಆದಾಯ ತೆರಿಗೆ ಇಲಾಖೆ, ಆರ್‌ಟಿಓ, ಸಬ್ ರಿಜಿಸ್ಟ್ರಾರ್ ಕಚೇರಿ, ಕಂದಾಯ ಇಲಾಖೆ ಕೂಡ ಆಗಿದೆ. ಇದಲ್ಲದೇ ಕುಟುಂಬದ ವಾರ್ಷಿಕ …

Read More »

ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ: ಆಷಾಢದಲ್ಲಿ ಇದೇ ಮೊದಲು!

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟೆ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಕಾಲದಿಂದ ನಡೆದುಕೊಂಡು ಬಂದಿದೆ. ಆಷಾಢ ಮಾಸದಲ್ಲಿ ಜರುಗುತ್ತಿರುವುದು ಇದೇ ಮೊದಲು. ಶ್ರಾವಣ ಅಥವಾ ಭಾದ್ರಪದ ಮಾಸದಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು. ಈ ಹಿಂದೆ ಸಾಮಾನ್ಯವಾಗಿ ವರಮಹಾಲಕ್ಷ್ಮಿ ಹಬ್ಬ ಸಮೀಪವಿದ್ದಾಗ ಬಾಗಿನ ಅರ್ಪಣೆ ನಡೆಯುತ್ತಿತ್ತು. ಈ ಬಾರಿ ಅಣೆಕಟ್ಟೆ ಮುಂಚಿತವಾಗಿ ಭರ್ತಿಯಾಗಿದೆ. 1989ರಿಂದ, ಅಂದರೆ 35 ವರ್ಷಗಳಿಂದ ಜ್ಯೋತಿಷಿ …

Read More »

ಕೇಂದ್ರ ಬಜೆಟ್ 2024 ಕುರಿತು ಇಂದು ಸಂಸತ್ತಿನಲ್ಲಿ ರಾಹುಲ್ ಗಾಂಧಿ ಭಾಷಣ

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2024 ಅನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ವಿರೋಧ ಪಕ್ಷದ ನಾಯಕನ ಪಾತ್ರದಲ್ಲಿ ರಾಹುಲ್ ಮಾತನಾಡುವುದು ಅನಿವಾರ್ಯ ಎಂದು ಕಾಂಗ್ರೆಸ್ ಸಂಸದರು ಭಾವಿಸಿದ್ದಾರೆ ಎಂದು ಮೂಲಗಳು ಸೂಚಿಸುತ್ತವೆ.   ಇದಕ್ಕೂ ಮೊದಲು, ಕಾಂಗ್ರೆಸ್ ಲೋಕಸಭಾ ಸಂಸದರೊಂದಿಗಿನ ಸಭೆಯಲ್ಲಿ, ರಾಹುಲ್ ಗಾಂಧಿ ಅವರು ಈಗಾಗಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವುದರಿಂದ, ಪ್ರತಿ ಬಾರಿ …

Read More »