Breaking News

ರಾಷ್ಟ್ರೀಯ

ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: HDK

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು …

Read More »

ಆರೀಕಟ್ಟಿ | ಸರ್ಕಾರಿ ಶಾಲೆಗೆ ಶತಮಾನ ಸಂಭ್ರಮ: ಬೇಕಿದೆ ಕಾಯಕಲ್ಪ

ಆರೀಕಟ್ಟಿ (ಹಂಸಬಾವಿ): ಇಲ್ಲಿಯ ಆರೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಇದರ ಜೊತೆಯಲ್ಲಿಯೇ ಹಲವು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಶತಮಾನೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ ಗ್ರಾಮಸ್ಥರು, ‘ನಮ್ಮ ಶಾಲೆ ಮೂಲ ಸೌಕರ್ಯ ಕಲ್ಪಿಸಬೇಕು. ಶತಮಾನ ಸಂಭ್ರಮದಲ್ಲಿರುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಬೇಕು’ ಎಂದು ಒತ್ತಾಯಿಸಿದರು. ಶತಮಾನದ ಸಂಭ್ರಮದಲ್ಲಿರುವ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ದಾಖಲಾತಿ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು …

Read More »

ಬಾಡಿಗೆ ಮನೆಯಲ್ಲಿ ಅಂಗನವಾಡಿ: ಮಳೆ ಬಂದರೆ ಆತಂಕ

ಅಡವಿಸೋಮಾಪುರ (ತಡಸ): ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಡವಿಸೋಮಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದ್ದು, ಮಳೆ ಬಂದರೆ ಹಂಚಿನ ಮನೆ ಸೋರುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಅಡವಿಸೋಮಾಪುರ ಗ್ರಾಮದ 96ನೇ ಅಂಗನವಾಡಿ ಕೇಂದ್ರದ ಹಳೇ ಕಟ್ಟಡ ಎರಡು ವರ್ಷಗಳ ಹಿಂದೆ ಮಳೆಯಿಂದ ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು, ಮಕ್ಕಳನ್ನು ಬಾಡಿಗೆ ಹಂಚಿನ ಮನೆಗೆ ಸ್ಥಳಾಂತರಿಸಿದ್ದರು. ಎರಡು ವರ್ಷವಾದರೂ ನೂತನ ಕಟ್ಟಡ ನಿರ್ಮಿಸುವಲ್ಲಿ …

Read More »

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಕಷ್ಟ: FIR ದಾಖಲಿಸುವಂತೆ ಕೋರ್ಟ್ ಸೂಚನೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ …

Read More »

ಶೀಘ್ರದಲ್ಲೆ ಏಪಿಎಂಸಿಗಳ ಡಿಜಟಲೀಕರಣ ಕಾರ್ಯ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿರುವ ಏಪಿಎಂಸಿಗಳ ಡಿಜಟಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದರು.   ಇಂದು ಎಫ್‌ಕೆಸಿಸಿಐ ನ 107 ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ …

Read More »

ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.   ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ …

Read More »

ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸುದ್ಧಿಗೋಷ್ಠಿ.

ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ ರಾಜುಗೌಡನ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸುದ್ಧಿಗೋಷ್ಠಿ. ಈಶ್ವರಪ್ಪ ಮನೆಯಲ್ಲಿ ಸಭೆ ವಿಚಾರ. ಸಭೆಯ ವಿಶೇಷತೆ ಎನೂ ಇಲ್ಲ. ಮುಂಬೈದಿಂದ ಬೆಂಗಳೂರಿಗೆ ಬಂದಿದ್ದೆ ಯತ್ನಾಳ್ ಕರೆ ಮಾಡಿದ್ರೂ. ಈಶ್ವರಪ್ಪ ಮನೆಗೆ ಹೋಗ್ತಿದ್ದೇನೆ ಬಾ ಅಂತಾ ಹೇಳಿದ್ರೂ. ಅಲ್ಲಿಗೆ ಹೋದೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ಅವರು ಇದಿದ್ರೇ ನಾನು ಮನೆಗೆ ಹೋಗ್ತಿರಲಿಲ್ಲ ನಾನು ಹೊರ …

Read More »

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ಸಾಧ್ಯತೆ

ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ  ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್‌ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ …

Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್‌ ಆದೇಶ

ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಹೈಕೋರ್ಟ್‌ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ (ಸೆ.25) ಮೈಸೂರು ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸಬೇಕೆಂದು ಆದೇಶ ನೀಡಿದೆ.   ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌, CrPC 156(3) ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ …

Read More »

ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

ದಾಂಡೇಲಿ: ನಾಪತ್ತೆಯಾಗಿದ್ದ ಮಹಿಳೆಯೋರ್ವರ ಬಗ್ಗೆ ದೂರು ನೀಡಿದ ಕೇವಲ ಎರಡುವರೆ ಗಂಟೆಯೊಳಗಡೆ ಪೊಲೀಸರು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಒಪ್ಪಿಸಿದ ಶ್ಲಾಘನಾರ್ಹ ಘಟನೆ ಅಂಬಿಕಾನಗರದ ಜಮಗಾದಲ್ಲಿ ನಡೆದಿದೆ. ಅಂಬಿಕಾನಗರದ ಜಮಗಾ ನಿವಾಸಿ 50 ವರ್ಷ ವಯಸ್ಸಿನ ಫಾತಿಮಾ ಮುಂಡಗೋಡ ಇವರು ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಣಬೆ ತರಲೆಂದು ಕಾಡಿಗೆ ಹೋಗಿದ್ದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಸುತ್ತಮುತ್ತಲೂ ಹುಡುಕಿ, ಕೊನೆಗೆ ಸಂಜೆ 7.45 ನಿಮಿಷಕ್ಕೆ ಅಂಬಿಕಾನಗರ …

Read More »