Breaking News

ರಾಷ್ಟ್ರೀಯ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ

ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ …

Read More »

ನಾಳೆಯಿಂದ ವಿಧಾನ ಕಲಾಪ: ಹಲವು ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣಗಳನ್ನು ಮುಂದಿರಿಸಿ ಸರಕಾರದ ವಿರುದ್ಧ ಮುಗಿಬೀಳಲು ಬಿಜೆಪಿ-ಜೆಡಿಎಸ್‌ ಸಜ್ಜಾಗಿವೆ. ಇದರ ನಡುವೆ ಹಲವು ಮಸೂದೆಗಳಿಗೆ ಸದನದಲ್ಲಿ ಸರಕಾರ ಅಂಗೀಕಾರ ಪಡೆಯುವ ಸಾಧ್ಯತೆಯಿದೆ.   ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ, ಜೆಡಿಎಸ್‌ ವಿಪಕ್ಷ ಸ್ಥಾನದಲ್ಲಿದ್ದರೂ ಲೋಕಸಭೆ ಚುನಾವಣ ಫ‌ಲಿತಾಂಶದಿಂದ ಹೊಸ ಹುರುಪು ಪಡೆದಿವೆ. ಇದರೊಂದಿಗೆ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ …

Read More »

ಡೊನಾಲ್ಡ್‌ ಟ್ರಂಪ್‌ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ

ವಾಷಿಂಗ್ಟನ್‌ : ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ …

Read More »

ಲೆಜೆಂಡ್ಸ್ ಕ್ರಿಕೆಟ್: ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಗೆದ್ದು ಬೀಗಿದ ಭಾರತ

ಬರ್ಮಿಂಗ್‌ಹ್ಯಾಮ್: ‘ವರ್ಲ್ಡ್ ಚಾಂಪಿಯನ್‌ಷಿಪ್ ಆಫ್ ಲೆಜೆಂಡ್ಸ್ 2024’ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಇಲ್ಲಿನ ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಚಾಂಪಿಯನ್ಸ್‌, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 156 ರನ್ ಗಳಿಸಿತು. ಈ ಗುರಿಯನ್ನು ಭಾರತ 19.1 ಓವರ್‌ಗಳಲ್ಲಿ ತಲುಪಿತು. ಯುವರಾಜ್ ಸಿಂಗ್‌ ನಾಯಕತ್ವದ ಟೀಂ …

Read More »

ರಾಜ್ಯದಲ್ಲಿ ಹೋಬಳಿಗೊಂದು ʻವಸತಿ ಶಾಲೆʼ ಪ್ರಾರಂಭ : ʻCMʼ

ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ …

Read More »

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ದುರ್ಮರಣ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ನಡೆದಿದೆ. ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಮೃತ ದುರ್ದೈವಿಗಳು. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ. 7 ಯುವಕರು ಸ್ವಿಫ್ಟ್ ಕಾರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ …

Read More »

ಲೋಕಸಭಾ ಸ್ಪೀಕರ್ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್: ಯೂಟ್ಯೂಬರ್ ವಿರುದ್ಧ FIR

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗದೆ ತೇರ್ಗಡೆಯಾಗಿದ್ದಾರೆ ಎಂದು ಧ್ರುವ ರಾಠಿಯ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ …

Read More »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ರಾಷ್ಟ್ರ ರಾಜಧಾನಿಯ ಏಮ್ಸ್ ಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿನಿಂದ ಕಳೆದೆರಡು ದಿನಗಳ ಹಿಂದೆ ದಾಖಲಾಗಿದ್ದ ರಾಜನಾಥ್ ಸಿಂಗ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಏಮ್ಸ್ ನ ಮಾಧ್ಯಮ ಕೋಶದ ಉಸ್ತುವಾರಿ ಡಾ.ರೀಮಾ ದಾದಾ, ಬೆನ್ನುನೋವಿಗಾಗಿ ರಕ್ಷಣಾ ಸಚಿವರಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಉತ್ತಮವಾಗಿದೆ …

Read More »

ನೇಣು ಬಿಗಿದು ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಪತಿ ಸಾವಿನ ಖಿನ್ನತೆಯಿಂದ ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 13 ವರ್ಷದ ಪುತ್ರ ಭಾರ್ಗವ್ ನನ್ನು ಕೊಂದು ತಾಯಿ ರಮ್ಯಾ (40) ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕ ಠಾಣಾ ವ್ಯಾಪ್ತಿಯ RNZ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 3 ತಿಂಗಳ ಹಿಂದೆ ಕ್ಯಾನ್ಸರ್ ನಿಂದ ರಮ್ಯಾ ಪತಿ ಶ್ರೀಧರ್ ಸಾವನ್ನಪ್ಪಿದ್ದರು. …

Read More »

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ   ಮುಧೋಳ: ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಹುಟ್ಟಿಸಿದ್ದು ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಜಮೀನುಗಳಲ್ಲಿ‌ ಪ್ರತ್ಯಕ್ಷವಾಗಿರುವ ಚಿರತೆ ಮೇಯಲು ಬಿಟ್ಟ ಎಮ್ಮೆ, ಕರುಗಾಲ ಮೇಲೆ‌ ದಾಳಿ‌ ನಡೆಸಿದ್ದು ಚಿರತೆ ಕಾಟದಿಂದ ಗ್ರಾಮದ ಜನ ರೋಸಿ ಹೋಗಿದ್ದಾರೆ. ಯಡಹಳ್ಳಿ‌ ಚಿಂಕಾರ ರಕ್ಷಿತಾರಣ್ಯಕ್ಕೆ‌ ಹೊಂದಿಕೊಂಡಿರುವ ಕಿಶೋರಿ ಗ್ರಾಮದ ಜಮೀನುಗಳಲ್ಲಿ ಓಡಾಡುತ್ತಿರುವ ಚಿರತೆ ನಾಯಿಯೊಂದನ್ನು ಕೊಂದು ತಿಂದಿದ್ದು, …

Read More »