ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …
Read More »ಕೆಡಿಪಿ ಸಭೆಯಲ್ಲಿ ಕುಡುಕ ಶಿಕ್ಷಕರ ಕುರಿತು ಚರ್ಚೆ
ಬೆಳಗಾವಿ : ಕೆಲ ಶಾಲಾ ಶಿಕ್ಷಕರು ದಿನನಿತ್ಯ ಶಾಲೆಗೆ ಮಧ್ಯಪಾನ ಮಾಡಿ ಬರುತ್ತಿರುವ ಕುರಿತು ದೂರುಗಳು ಬಂದಿದ್ದು ಇಂತಹ ಶಿಕ್ಷಕರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಧ್ಯಪಾನ ಮಾಡಿ ಶಾಲೆಗೆ ಬರುವ ಶಿಕ್ಷಕರ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ …
Read More »ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ …
Read More »ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …
Read More »ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪತ್ರ ಚಳವಳಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ, ಬಸವ ಜಯಮೃತ್ಯುಂಜಯ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ನೂರಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದರು. ಬಸವ ಜಯಮೃತ್ಯುಂಜಯ ಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ನೀಡಿ, ಈ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ …
Read More »ಬೆಂಗಳೂರಿನಲ್ಲಿ ಮನೆ ಬಾಡಿಗೆ ಇಳಿಕೆ ಆರಂಭ, ಹೊರ ವಲಯದಲ್ಲಿ ಬೇಡಿಕೆ
ಬೆಂಗಳೂರು, ಜುಲೈ 11: ಕಳೆದ ಎರಡು ವರ್ಷಗಳಿಂದ ಬಾಡಿಗೆ (rent) ಬೇಡಿಕೆಯ ಹೆಚ್ಚಳದ ನಂತರ ಬೆಂಗಳೂರಿನ ಟೆಕ್ ವೃತ್ತಿಪರರು ಈಗ ಐಟಿ ಕೇಂದ್ರಗಳಿಂದ ನಗರದ ಹೊರವಲಯಕ್ಕೆ ಹೆಚ್ಚು ಕೈಗೆಟುಕುವ ವಸತಿಗಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ. ವೈಟ್‌ಫೀಲ್ಡ್‌ನಂತಹ ಐಟಿ ಉಪನಗರಗಳಲ್ಲಿನ ಬಾಡಿಗೆಗಳು ವರ್ಷದಿಂದ ವರ್ಷಕ್ಕೆ 15-20% ರಷ್ಟು ಕಡಿಮೆಯಾಗಿದೆ ಎಂದು ಬ್ರೋಕರ್‌ಗಳು ತಿಳಿಸಿದ್ದಾರೆ. ಇತ್ತೀಚೆಗೆ, ಐಟಿಯಲ್ಲಿ ಕೆಲಸ ಮಾಡುವ ದಂಪತಿಗಳು ಸರ್ಜಾಪುರದಿಂದ ಸುಮಾರು 5 ಕಿಮೀ ದೂರದ ಹೊರವಲಯಕ್ಕೆ ಹೋಗಲು ನಿರ್ಧರಿಸಿದರು. ಅವರು 38,000 …
Read More »ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, : ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ …
Read More »ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು
ನವದೆಹಲಿ, ಜುಲೈ 11: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೇಲೆ ಸರ್ಕಾರಿ ನೌಕರರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಮನವಿ …
Read More »2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ
ಇಳಕಲ್: ‘ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಅಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ 28 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲದು, ಸಂದರ್ಭ ಬಂದರೆ ಅಧಿಕಾರ ತ್ಯಾಗ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳುವೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ನೀಡಿದ …
Read More »ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ
ಬೆಳಗಾವಿ : ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ** ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ, ತಂದೆ, ಡೆಂಗಿ ಜ್ವರದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರೇಯಾ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾಗಿದ್ದು, ಥೈಪಾಡ್‌ನಿಂದ ಬಳಲುತ್ತಿದ್ದಳು. ಈ ಕುರಿತು, ಡಿಹೆಚ್ಒ ಮಹೇಶ ಕೋಣಿ, ಜಿ ಬಿ ಏನ್ 7 …
Read More »