ಹುಬ್ಬಳ್ಳಿ: ವಲಯ ವರ್ಗಾವಣೆ ನಡೆಸದಿರಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಬಹುತೇಕ ಶಿಕ್ಷಕರಲ್ಲಿ ನಿರಾಸೆ ಮೂಡಿಸಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ಅವರ ನಿರೀಕ್ಷೆ ಹುಸಿಯಾಗಿದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ (ತಿದ್ದುಪಡಿ)-2022ರ ಪ್ರಕಾರ, ಹೆಚ್ಚುವರಿ ವರ್ಗಾವಣೆ ನಂತರದ ವರ್ಷದಲ್ಲಿ ವಲಯ (ಕಡ್ಡಾಯ) ವರ್ಗಾವಣೆ ಮಾಡಬೇಕು. ಈ ಪ್ರಕ್ರಿಯೆಯಲ್ಲಿ 10 ವರ್ಷಕ್ಕೂ ಹೆಚ್ಚು ಸಮಯದಿಂದ ನಗರ ಪ್ರದೇಶದಲ್ಲಿ (ಎ-ವಲಯ) ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಗ್ರಾಮೀಣ (ಸಿ-ವಲಯ) …
Read More »ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ
ಕೋಲ್ಕತ್ತ: 2024-25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಪೂರ್ವ ರೈಲ್ವೆಯು ₹953 ಕೋಟಿ ವರಮಾನ ಗಳಿಸಿದೆ ಎಂದು ರೈಲ್ವೆ ವಲಯದ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಪ್ರಯಾಣಿಕರ ಸೇವಾ ವಿಭಾಗದಿಂದ ₹866 ಕೋಟಿ ಆದಾಯ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 9.97ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. ಈ ತ್ರೈಮಾಸಿಕದಲ್ಲಿ ಒಟ್ಟು 2.87 ಲಕ್ಷ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದು, ಶೇ 3.36ರಷ್ಟು ಏರಿಕೆಯಾಗಿದೆ ಎಂದು …
Read More »ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.
ನವದೆಹಲಿ: ಅಂಗವಿಕಲ ವ್ಯಕ್ತಿಗಳ ಕಾಯ್ದೆಯ (ಪಿಡಬ್ಲ್ಯುಡಿ) ಪರಿಣಾಮಕಾರಿಯಾಗಿ ಜಾರಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. 2009ರಲ್ಲಿ ನಾಗರಿಕ ಸೇವಾ ಪರೀಕ್ಷೆ ತೇರ್ಗಡೆಯಾಗಿರುವ, ಶೇ 100ರಷ್ಟು ಅಂಧತ್ವ ಹೊಂದಿರುವ ಅಭ್ಯರ್ಥಿಯನ್ನು ಮೂರು ತಿಂಗಳ ಒಳಗಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆಯೂ ಸರ್ಕಾರಕ್ಕೆ ಆದೇಶಿಸಿತು. 1995ರ ಪಿಡಬ್ಲ್ಯುಡಿ ಕಾಯ್ದೆಯ ನಿಬಂಧನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ‘ಎದ್ದು ಕಾಣುವಂತಹ ಕರ್ತವ್ಯಲೋಪ’ …
Read More »50:50 ನಿವೇಶನ ಹಂಚಿಕೆ ಕಾನೂನುಬದ್ಧ: ಎಚ್.ವಿ.ರಾಜೀವ್
ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಡಿ ನಿವೇಶನ ಹಂಚಿಕೆಯು ಕಾನೂನುಬದ್ಧವಾಗಿದೆ’ ಎಂದು ಕಾಂಗ್ರೆಸ್ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಪ್ರತಿಪಾದಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಡಾಗೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲು, ಭೂ ಮಾಲೀಕರಿಗೆ ಕಚೇರಿ ಅಲೆದಾಟ ತಪ್ಪಿಸಲು ಪ್ರಾಧಿಕಾರದ ಸಭೆಯಲ್ಲಿ ಸದಸ್ಯರು ಚರ್ಚಿಸಿ ಸರ್ವಾನುಮತದಿಂದ 50:50 ಅನುಪಾತದಲ್ಲಿ ನಿವೇಶನ ಹಂಚುವ ನಿರ್ಣಯ ಕೈಗೊಳ್ಳಲಾಯಿತು’ ಎಂದರು. ‘2013ರ ಭೂಸ್ವಾಧೀನ ತಿದ್ದುಪಡಿ ಕಾಯ್ದೆ, ಶ್ರೀರಾಂಪುರದ …
Read More »ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ
ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ ಹಳಿಯಾಳ: ‘ಕಲ್ಯಾಣ ರಾಜ್ಯ ಎಂಬುದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಕಾವ್ಯ ರಚನೆಯ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ರಾಜ ಮಾರ್ಗವು ಸಾಂಸ್ಕೃತಿಕ ಅಂತಃಕರಣದಿಂದ ಕೂಡಿರಬೇಕು’ ಎಂದು ಸಾಹಿತ್ಯ ಅಕಾಡೆಮಿಯ ಸಾಮಾನ್ಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀಧರ ಬಳಿಗಾರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ …
Read More »ಬೀದಿ ಬದಿ ಹೊಟೇಲ್, ಕಿರಾಣಿ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ
ಚಿಕ್ಕೋಡಿ: ನಗರದ ಬೀದಿ ಬದಿ ಗಾಡಾ ಅಂಗಡಿ ಮತ್ತು ಹೊಟೇಲ್ ನಲ್ಲಿ ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಕಲಬೆರಕೆ ಮಾಡಿ ಆಹಾರ ತಯಾರು ಮಾಡುತ್ತಿದ್ದ ಅಂಗಡಿಗಳ ಮೇಲೆ ಮತ್ತು ಟೇಸ್ಟಿಂಗ್ ಪೌಡರ್ ಮಾರಾಟ ಮಾಡುವ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 17 ಕೆಜಿ ಟೇಸ್ಟಿಂಗ್ ಪೌಡರ್ ವಶಪಡಿಸಿಕೊಂಡಿದ್ದಾರೆ. ಆಹಾರದಲ್ಲಿ ವಿಷ ಪದಾರ್ಥಗಳು ಕಲಬೆರಕೆ ಕುರಿತು ಸಾರ್ವಜನಿಕರು ನೀಡಿದ ದೂರಿನ ಹಿನ್ನಲೆ ನಗರದ ರಾಜಸ್ತಾನಿ ಕಿರಾಣಿ ಅಂಗಡಿ ಮೇಲೆ ದಾಳಿ …
Read More »ಬೆಳಗಾವಿ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೂ ಅವಿರೋಧ ಆಯ್ಕೆ
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಮಂಗಳವಾರ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಷ್ಮಾ …
Read More »ಎಸ್‌ಐಟಿ ಮುಂದೆ ಹಾಜರಾದ ಮಾಜಿ ಸಚಿವ ನಾಗೇಂದ್ರ
ಬೆಂಗಳೂರು,ಜು.9- ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಇಂದು ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದರು. ಈ ಹಗರಣದಲ್ಲಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ದಳ ನೋಟೀಸ್ ನೀಡಿತ್ತು. ಹಾಗಾಗಿ ಇಂದು ಸಿಐಡಿ ಕಚೇರಿಯಲ್ಲಿರುವ ಎಸ್‌ಐಟಿ ಮುಂದೆ ನಾಗೇಂದ್ರ ಅವರು ಹಾಜರಾಗಿದ್ದು, ತನಿಖಾಧಿಕಾರಿಗಳು ಅವರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. …
Read More »ಬೆಂಗಳೂರು ದಕ್ಷಿಣ ಜಿಲ್ಲೆ ರಚಿಸಿದರೆ ರಾಮನಗರವೇ ಹೆಡ್ ಕ್ವಾರ್ಟರ್!
ಬೆಂಗಳೂರು: ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು, ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ …
Read More »ಅನರ್ಹ ʻBPLʼ ಕಾರ್ಡ್ ರದ್ದು : ʻCMʼ ಸಿಎಂ
ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ …
Read More »