Breaking News

ರಾಷ್ಟ್ರೀಯ

ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್

ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು …

Read More »

ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳ ಹೋರಾಟ: ಚಿಕಿತ್ಸೆಗಾಗಿ ಹಳೇ ದಾವಣಗೆರೆ ಭಾಗದ ಜನರ ಪರದಾಟ

ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಹೆಚ್ಚು ಅಲ್ಪಸಂಖ್ಯಾತ ಕುಟುಂಬಗಳು ವಾಸಿಸುತ್ತಿವೆ. ಕೂಲಿ ಕಾರ್ಮಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕಟ್ಟಡ ಕಾರ್ಮಿರು ಸೇರಿ ಬರೋಬ್ಬರಿ 80 ಸಾವಿರ ಜನಸಂಖ್ಯೆ ಇದೆ. ಆದರೆ, ಇಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಇದಕ್ಕಾಗಿ ಜನ ದಶಕಗಳಿಂದ ಹೋರಾಟ ಮಾಡ್ತಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಾದರೆ ಇಲ್ಲಿಯ ಜನ ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಚಿಕಿತ್ಸೆಗಾಗಿ ಇಲ್ಲಿನ ಜನ ರೈಲ್ವೆ ಹಳಿ ದಾಟಿ ಸಿಜಿ ಆಸ್ಪತ್ರೆ ಸೇರಿದಂತೆ ಇತರ ಖಾಸಗಿ ಆಸ್ಪತ್ರೆಗೆ …

Read More »

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …

Read More »

ರಾಜ್ಯ ಸರ್ಕಾರ ಸಂವಿಧಾನ ಉಲ್ಲಂಘಿಸಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ 1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ. ಅರ್ಜಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ …

Read More »

ಬಿಜೆಪಿಯವರು ಮತಗಳ್ಳತನ ಮಾಡುತ್ತಿದ್ದಾರೆ, ನನ್ನ ಬಳಿ ಅಧಿಕೃತ ದಾಖಲೆಗಳಿವೆ: ಪ್ರಿಯಾಂಕ್​ ಖರ್ಗೆ

ಬೆಂಗಳೂರು: “ಬಿಜೆಪಿಯವರೇ ಮತಗಳ್ಳತನ ಮಾಡುತ್ತಿದ್ದಾರೆ. ನನ್ನ ಬಳಿ ಅಧಿಕೃತ ದಾಖಲೆಗಳಿವೆ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಳಂದ ಮತ ಕ್ಷೇತ್ರದಲ್ಲಿ ಮತಗಳವು ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್​ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು.‌ ಪರಿಶೀಲನೆ …

Read More »

ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬೆಳಗಾವಿ: ನಗರದ ಸಿವಿಲ್‌ ಆಸ್ಪತ್ರೆಯ ಐಎಮ್‌ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್‌ ಫೌಂಡೇಶನ್‌ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …

Read More »

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ |

ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ | ಖಾನಾಪುರ:ಖಾನಾಪುರದ ರೈಲು ನಿಲ್ದಾಣದ ಅಭಿವೃದ್ದಿಗಾಗಿ ರೈಲ್ವೇ ಇಲಾಖೆಯಿಂದ ಮೂರು ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಇದರಲ್ಲಿ ನಿಲ್ದಾಣದ ಪ್ಲಾಟಫಾರ್ಮ್‌ ವಿಸ್ತರಣೆ,ಶೌಚಾಲಯ ನಿರ್ಮಾಣ ಸೇರಿದಂತೆ ಪ್ರಯಾಣಿಕರ ಅನುಕೂಲಕ್ಕೆ ನಾನಾ ಸೌಲಭ್ಯ ಒದಗಿಸುವ ಕಾಮಿಗಾರಿಗಳಿಗೆ ಸಚಿವ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಖಾನಾಪುರ ಸಂಪದ್ಭರಿತ ತಾಲೂಕಾಗಿದ್ದು ಪ್ರಮುಖವಾಗಿ ಕೃಷಿ ಉತ್ಪಾದನೆ …

Read More »

ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್

ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು. ಸಿದ್ದರಾಮಯ್ಯ …

Read More »

ಜಾತಿಗಣತಿ ಹೊತ್ತಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ ಜಗಳ

ದಾವಣಗೆರೆ, ಸೆಪ್ಟೆಂಬರ್ 16: ಜಾತಿಗಣತಿಯಲ್ಲಿ (Caste Census) ಕ್ರಿಶ್ಚನ್‌ ಸಮುದಾಯದಲ್ಲಿನ ಉಪಜಾತಿಗಳ ಕಾಲಂ ಈಗಾಗಲೇ ಭಾರಿ ವಿವಾದ ಸೃಷ್ಟಿಸಿದೆ. ಇದೀಗ, ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದವೂ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಜಾತಿಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಲಿಂಗಾಯತ ಧರ್ಮ (Lingayat) ಎಂದು ಬರೆಸಲು ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಅಭಿಪ್ರಾಯಕ್ಕೆ ಬರಲಾಗಿದ್ದು, ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ ಲಿಂಗಾಯತ ಧರ್ಮ ಎಂದು ಬರೆಯುವಂತೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ನಡೆದ ಬಸವ …

Read More »