ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ …
Read More »ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್ ನ್ಯೂಸ್ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ!
ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್ ಗಳಲ್ಲಿನ ರಶ್ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. ಕೆಎಸ್ ಆರ್ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್ಆರ್ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ …
Read More »ಬೆಳಗಾವಿ: ಇನ್ನೂ ಪೂರೈಕೆಯಾಗದ ಸಮವಸ್ತ್ರ
ಬೆಳಗಾವಿ: 2024-25ನೇ ಸಾಲಿನ ತರಗತಿ ಆರಂಭವಾಗಿ ಮೂರು ವಾರವಾದರೂ, ಇನ್ನೂ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ವಿತರಣೆಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಳೇ ಸಮವಸ್ತ್ರದಲ್ಲೇ ಶಾಲೆಯತ್ತ ಹೆಜ್ಜೆ ಹಾಕುವುದು ಅನಿವಾರ್ಯವಾಗಿದೆ. ಪ್ರತಿವರ್ಷ ಶಾಲಾ ಆರಂಭೋತ್ಸವ ದಿನವೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ನೀಡಲಾಗುತ್ತಿತ್ತು. 8ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಬಟ್ಟೆ ಕೊಡಲಾಗುತ್ತಿತ್ತು. ಈ ವರ್ಷದಿಂದ ತಮಗೂ ಚೂಡಿದಾರ್ ಬಟ್ಟೆ ಸಿಗುತ್ತದೆ ಎಂದು 6 ಮತ್ತು …
Read More »ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ: ಎತ್ತುಗಳ ಬಳಸಿ ಸ್ಕೂಟರ್ ಎಳೆದು BJP ಆಕ್ರೋಶ
ಬೆಳಗಾವಿ: ಇಂಧನ ತೈಲಗಳ ತೆರಿಗೆ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ನಗರದಲ್ಲಿ ಸೋಮವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ಎತ್ತುಗಳಿಗೆ ಬೈಕ್-ಸ್ಕೂಟರ್‌ಗಳನ್ನು ಕಟ್ಟಿ ಎಳೆಯುವ ಮೂಲಕ ಆಕ್ರೋಶ ಹೊರಹಾಕಿದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ ಬೈಕುಗಳನ್ನು ತಳ್ಳಿಕೊಂಡು ಹೋಗುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು, ಕೆಲಕಾಲ ವೃತ್ತದ ಸಂಚಾರ ಬಂದ್ …
Read More »ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ
ನವದೆಹಲಿ: ಏಪ್ರಿಲ್ ತಿಂಗಳಲ್ಲಿ 2.61 ಕೋಟಿ ಟನ್ ಕಲ್ಲಿದ್ದಲು ದೇಶಕ್ಕೆ ಆಮದಾಗಿದೆ ಎಂದು ಇ-ವಾಣಿಜ್ಯ ಸಂಸ್ಥೆ ಎಂ-ಜಂಕ್ಷನ್ ಸರ್ವಿಸಸ್ ಲಿಮಿಟೆಡ್ ತಿಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 2.30 ಕೋಟಿ ಟನ್ ಕಲ್ಲಿದ್ದಲು ಆಮದಾಗಿತ್ತು. ಈ ಆಮದಿಗೆ ಹೋಲಿಸಿದರೆ ಶೇ 13.2ರಷ್ಟು ಏರಿಕೆಯಾಗಿದೆ. ಕೋಕಿಂಗ್ ಅಲ್ಲದ (ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಳಸುವ ಕಲ್ಲಿದ್ದಲು) ಕಲ್ಲಿದ್ದಲು 1.74 ಕೋಟಿ ಟನ್ ಮತ್ತು 49.7 ಲಕ್ಷ ಟನ್ ಕೋಕಿಂಗ್ (ಉತ್ತಮ ಗುಣಮಟ್ಟ) ಕಲ್ಲಿದ್ದಲು …
Read More »ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ
ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು ಕೈ ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹರಿಹಾಯ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,187 ಕೋಟಿ ಭ್ರಷ್ಟಾಚಾರ ಮಾಡಿ ಆಂಧ್ರ ಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ …
Read More »ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಗದಗ: ಡೀಸೆಲ್, ಪೆಟ್ರೋಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಮಹಿಳೆಯರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಾಹನ ಸವಾರರ ಮೇಲೆ ಬರೆ ಎಳೆದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನಸಾಮಾನ್ಯರಿಗೆ ಹೊರೆಯಾದ ಕಾಂಗ್ರೆಸ್ …
Read More »ಟಾಟಾ ನೆಕ್ಸಾನ್ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!
ನವದೆಹಲಿ: 2017ರಲ್ಲಿ ಮಾರುಕಟ್ಟೆಗೆ ಬಂದ ಟಾಟಾ ನೆಕ್ಸಾನ್(Tata Nexon), 2021ರಿಂದ 2023ರವರೆಗೆ ಸತತ ಮೂರು ವರ್ಷಗಳ ಕಾಲ ಭಾರತದಲ್ಲಿ ಅತೀ ಹೆಚ್ಚು ಮಾರಾಟವಾದ ಎಸ್ ಯುವಿ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ. ಟಾಟಾ ನೆಕ್ಸಾನ್ ಮಾರುಕಟ್ಟೆಗೆ ಬಿಡುಗಡೆಗೊಂಡ ಏಳು ವರ್ಷಗಳಲ್ಲಿ ಟಾಟಾ ನೆಕ್ಸಾನ್ ಏಳು ಲಕ್ಷ ಮಾರಾಟ ಕಂಡಿರುವುದು ಟಾಟಾ ಮೋಟಾರ್ಸ್ ಸಂಭ್ರಮಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ 2018ರಲ್ಲಿ ಗ್ಲೋಬಲ್ NCAPನಿಂದ 5 ಸ್ಟಾರ್ ರೇಟಿಂಗ್ ಪಡೆದ ಭಾರತದ ಮೊದಲ ಕಾರು …
Read More »ಹೊಲಗಳತ್ತ ಮುಖ ಮಾಡಿದ ಅನ್ನದಾತ: ಬಿತ್ತನೆ ಕಾರ್ಯ ಚುರುಕು
ಮುದ್ದೇಬಿಹಾಳ: ತಾಲ್ಲೂಕಿನ ಮೂರು ಹೋಬಳಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಬಿತ್ತನೆಗೆ ಸಿದ್ಧ ಮಾಡಿಕೊಂಡ ಕೃಷಿಪರಿಕರಗಳೊಂದಿಗೆ ಹೊಲಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಲ್ಲಿ ತೊಗರಿ, ಹೆಸರು, ಸಜ್ಜೆ,ಹ ತ್ತಿ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೃಷಿ ಇಲಾಖೆಯಿಂದ ಈಗಾಗಲೇ ಮುದ್ದೇಬಿಹಾಳ, ಢವಳಗಿ, ನಾಲತವಾಡ ಹೋಬಳಿ ವ್ಯಾಪ್ತಿಯ ರೈತರಿಗೆ ತೊಗರಿ, ಹೆಸರು ಬೀಜಗಳನ್ನು ವಿತರಣೆ ಮಾಡಿದೆ. ಅದರಲ್ಲಿ ಮುಸುಕಿನ ಜೋಳ, ಬಿಜಿಎಸ್-9 ಹೆಸರು, ಟಿಎಸ್‌ಆರ್3ಆರ್ ತೊಗರಿ …
Read More »ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್
ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಅಂಶಗಳು ಹೊರಬರುತ್ತಿವೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆಗೈದು ಶವ ಎಸೆದಿದ್ದ ಡಿ ಗ್ಯಾಂಗ್, ಆತಮನ ಮೈಮೇಲೆ ಇದ್ದ ಚಿನ್ನಾಭರಣ, ವಾಚ್ ಗಳನ್ನು ದೋಚಿದ್ದರು. ರೇಣುಕಾಸ್ವಾಮಿಯ ಶವದ ಮೇಲಿದ್ದ ಚಿನ್ನದ ಚೈನ್, ಉಂಗುರ, ಬೆಳ್ಳಿ ಕಡಗ, ವಾಚ್ ಗಳನ್ನು ಬಿಡದ ಆರೋಪಿ ರಾಘವೇಂದ್ರ, ಚಿನ್ನಾಭರಣಗಳನ್ನು ಕಿತ್ತುಕೊಂಡು ತನ್ನ ಪತ್ನಿಗೆ ಕೊಟ್ಟಿದ್ದ. ಇದೀಗ ಆರೋಪಿ ರಾಘವೇಂದ್ರ ಪತ್ನಿ ಬಳಿ ಇದ್ದ …
Read More »