ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …
Read More »ಜು.22ರಂದು ಬಜೆಟ್ ಮಂಡನೆ
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರದ ಪೂರ್ಣ ಪ್ರಮಾಣದ ಬಜೆಟ್ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ.17ರಿಂದ ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …
Read More »ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ
ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 …
Read More »ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ‘ತರಬೇತಿ ರಹಿತ ವೇತನ ಶ್ರೇಣಿʼ ನಿಗಧಿಪಡಿಸಿ ಸರ್ಕಾರ ಆದೇಶ
ಬೆಂಗಳೂರು : ತರಬೇತಿ ಹೊಂದದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತರಬೇತಿ ಹೊಂದಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ ನಿರ್ಧರಿಸಿರುವುದನ್ನು ಹಂತ ಹಂತವಾಗಿ ವಿವರಿಸಲಾಗಿರುತ್ತದೆ. ಪ್ರಯುಕ್ತ, ಉಲ್ಲೇಖ(2)ರ ಅನುಬಂಧ-02 ರಲ್ಲಿನ ಸೂಚನೆಗಳನ್ನಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ರಹಿತ ಶಿಕ್ಷಕರ ಪಿಂಚಣಿಯನ್ನು ನಿಯಮಾನುಸಾರ …
Read More »ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ
ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಜೂ 10 ಸೋಮವಾರ …
Read More »ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ
ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಇನ್ನಷ್ಟು ಕರಾಳ ಮುಖಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ ಮತ್ತಷ್ಟು ಹಳೆ ಪ್ರಕರಣಗಳು ಹೊರಬರುತ್ತಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಪರಿಹಾರ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟು ಹೆದರಿಸಿ ವಿಕೃತಿ ಮೆರೆದಿದ್ದರು. ಪರಿಣಾಮ ಬೇರೆ ಆಗುತ್ತದೇ ಎಂದು …
Read More »ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’
ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ …
Read More »ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ
ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು. ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಯುವ …
Read More »ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!
ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು. ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …
Read More »ಜಗದೀಶ್ ಶೆಟ್ಟರ್ ಮುಂದೆ ಸವಾಲುಗಳ ಸಾಲು…
ಬೆಳಗಾವಿ: ಸಂಸದ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ‘ಮನೆಯ ಸದಸ್ಯ’ ಎಂದು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕವೇ ಅವರು ಈ ಮಾತಿಗೆ ‘ಠಸ್ಸೆ’ ಹೊಡೆಯಬೇಕಿದೆ. ‘ಬೆಳಗಾವಿಯಲ್ಲಿ ಶೆಟ್ಟರ್‌ಗೆ ಅಡ್ರೆಸ್ಸೇ ಇಲ್ಲ’ ಎಂಬ ಆರೋಪಕ್ಕೆ, ‘ಬೀಗರ ಮನೆಗೆ ಬಂದಿದ್ದೀರಿ ಶೆಟ್ಟರೇ, ಉಂಡು ವಾಪಸ್ ಹೋಗಿ’ ಎಂಬ ಮೂದಲಿಕೆಗೆ, ‘ಬೆಳಗಾವಿಗೆ ಮೋಸ ಮಾಡಿದವರಿಗೆ ಮತ ಕೊಡಬೇಕೆ?’ ಎಂಬ ಪ್ರಶ್ನೆಗಳಿಗೆ ಮತದಾರ ಈಗ ಉತ್ತರ ಕೊಟ್ಟಿದ್ದಾನೆ. ಶೆಟ್ಟರ್ ರಾಜಕೀಯ ಹೆಜ್ಜೆಯೊಂದನ್ನು …
Read More »