Breaking News

ರಾಷ್ಟ್ರೀಯ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ! ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ. ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ …

Read More »

ಲೈಂಗಿಕ ದೌರ್ಜನ್ಯಕ್ಕೊಳಗಾದ 14 ವರ್ಷದ ಬಾಲಕಿಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವು ಅಪ್ರಾಪ್ತೆಯ ಮೇಲೆ ಗರ್ಭಧಾರಣೆಯ ಪರಿಣಾಮವನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.   ಮುಂದುವರಿದ ಹಂತದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸುವುದರಿಂದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಭ್ರೂಣದ ಜನನಕ್ಕೆ ಕಾರಣವಾಗುತ್ತದೆ ಎಂದು ಹೇಳಿ ಗರ್ಭಧಾರಣೆಯನ್ನು ಕೊನೆಗೊಳಿಸಬೇಕೆಂಬ …

Read More »

ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್‌ ಸರಕಾರದಿಂದ ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್‌ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು. ರವಿವಾರ ರಾಜ್ಯ ಬಿಜೆಪಿ ಮಾಧ್ಯಮ …

Read More »

ಖಾಸಗೀಕರಣಕ್ಕೆ ಕೇಂದ್ರ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಹೊಸದಿಲ್ಲಿ: “ರೈಲ್ವೇ ಅಸಮರ್ಥ ಎಂದು ಬಿಂಬಿಸುವ ಮೂಲಕ ಖಾಸಗೀಕರಣ ಗೊಳಿಸಿ, ನಿರ್ವಹಣೆಯನ್ನು ತಮ್ಮ ಆಪ್ತರಿಗೆ ಮಾ ರಾಟ ಮಾಡುವ ಉದ್ದೇಶವನ್ನು ಮೋದಿ ಸರಕಾರ ಹೊಂದಿದೆ ಎಂದು ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ರೈಲಲ್ಲಿ ಜನ ತುಂಬಿ ತುಳುಕುತ್ತಿರುವ ವೀಡಿಯೋ ಒಂದನ್ನು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. “ಮೋದಿ ಆಡಳಿತದಲ್ಲಿ ರೈಲಿನಲ್ಲಿ ಓಡಾಡುವುದು ಜನರಿಗೆ ಶಿಕ್ಷೆಯಂತಾಗಿದೆ. ಐಷಾರಾಮಿ ರೈಲುಗಳ ಪ್ರಚಾರ ಮಾಡುತ್ತಾ, ಸಾಮಾನ್ಯ ಕೋಚ್‌ಗಳನ್ನು ಕೇಂದ್ರ ಕಬಳಿಸುತ್ತಿದೆ. ಇದನ್ನು ಉಳಿಸಬೇಕಾದರೆ ಮೋದಿ ಸರಕಾರವನ್ನು ಕೆಳಗಿಳಿಸಲೇ …

Read More »

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ …

Read More »

ಒಂದೇ ಕುಟುಂಬದ 6 ಮಂದಿ ಸಾವು

ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ): ಕಾಳಿ ನದಿ ಹಿನ್ನೀರು ಪ್ರದೇಶವಾದ ಬೀರಂಪಾಲಿಯ ಅಕ್ವಾಡ ಗ್ರಾಮದ ಹತ್ತಿರ ನಾಲ್ವರು ಮಕ್ಕಳು ಸೇರಿದಂತೆ, ಒಂದೇ ಕುಟುಂಬದ ಆರು ಜನ ಪ್ರವಾಸಿ ಗರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ ಹೊಂಬಳ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್‌ (6), ಬೆಂಗಳೂರಿನ ನಿವಾಸಿಗಳಾದ ರೇಷಾ ಉನ್ನಿಸಾ ತೋಸಿಫ್ ಅಹ್ಮದ್ (38), ಇಫ್ರಾ‌ ತೋಸಿಫ್ ಅಹ್ಮದ್ …

Read More »

ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ …

Read More »

ಸಿಗಂದೂರು | ಲಾಂಚ್ ಅವ್ಯವಸ್ಥೆಗೆ ಕೊನೆ ಎಂದು…?

ಹೊಳೆಬಾಗಿಲು (ತುಮರಿ): ಶರಾವತಿ ಮುಳುಗಡೆ ಸಂತ್ರಸ್ತರು ಸೇರಿದಂತೆ ಕರೂರು – ಬಾರಂಗಿ ಹೋಬಳಿಯ ಜನರಿಗೆ ಆದ್ಯತೆ ನೀಡದೇ, ಈ ಭಾಗದ ಜನರ ಸಂಪರ್ಕ ಕೊಂಡಿಯಾಗಿರುವ ‘ಸಿಗಂದೂರು ಲಾಂಚ್’ ಸಮರ್ಪಕ ಸೇವೆಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿರುದ್ಧ ಸ್ಥಳೀಯರು ದೂರಿದ್ದಾರೆ. ಶರಾವತಿ ಕಣಿವೆಯ ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ 30,000ಕ್ಕೂ ಅಧಿಕ ಜನರು ದಿನನಿತ್ಯದ ಕೆಲಸಗಳಿಗೆ, ಕೋರ್ಟ್, ಕಚೇರಿ ಕಾರ್ಯಗಳಿಗೆ ತಾಲ್ಲೂಕು ಕೇಂದ್ರವನ್ನು ಸಂಪರ್ಕಿಸಿಲು …

Read More »

ಏ.26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳದಂತೆ ಪ್ರವಾಸಿಗರಿಗೆ ಸೂಚನೆ

ಶಿವಮೊಗ್ಗ: ಏಪ್ರಿಲ್ 26 ಹಾಗೂ ಮೇ 7ಕ್ಕೆ ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಸಮೀಪದ ಸಕ್ರೈಬೆಲು ಆನೆ ಬಿಡಾರದಲ್ಲಿ ಪ್ರವಾಸಿಗರಿಗೆ ಮನವಿ ಮಾಡಿದರು. ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ …

Read More »

ಈ ಕಾರ್ಡ್ ನಿಮ್ಮ ಹತ್ರ ಇದ್ರೆ ಸಾಕು.! ಸರ್ಕಾರದಿಂದ ಸಿಗುತ್ತೆ 2 ಲಕ್ಷ ರೂ. ವಿಮೆ!

ಬೆಂಗಳೂರು : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ. ನೋಂದಣಿಯ …

Read More »