Breaking News

ರಾಷ್ಟ್ರೀಯ

ತೆರಿಗೆದಾರರ’ ಮೇಲಿನ ಹೊರೆ ಕಡಿಮೆ ಮಾಡಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದ ತೆರಿಗೆದಾರರ ಕೊಡುಗೆಯನ್ನು ಆಚರಿಸಬೇಕು ಮತ್ತು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ ಅವರನ್ನು ಆಚರಿಸಬೇಕು ಮತ್ತು ಗೌರವಿಸಬೇಕು.ನಾವು ತೆರಿಗೆದಾರರನ್ನು ಹಗಲು ರಾತ್ರಿ ನಿಂದಿಸಿದರೆ ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಕೇಳಿದರು. ದಕ್ಷ ಮತ್ತು ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರದ ಅಡಿಯಲ್ಲಿ …

Read More »

ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ನಾಳೆ ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು‌ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಹಾಗೂ ಡಿಸಿಎಂ ಭೇಟಿಗೆ ನನ್ನ ಆತ್ಮೀಯ ಮಿತ್ರರೂ ಆದ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ …

Read More »

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ ಧಾರವಾಡ: ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಕೋಚಿಂಗ್ ಸೆಂಟರ್‌ಗಳಲ್ಲಿ ಲಕ್ಷಾಂತರ ಹಣ ಸುರಿದು ತರಬೇತಿ ಪಡೆದುಕೊಳ್ಳುವುದು ಇತ್ತಿಚೆಗೆ ಅತೀಯಾಗಿ ನಡೆಯುತ್ತಿದೆ. ಆದರೆ ಹಣ ಖರ್ಚು ಮಾಡಲು ಸಾಧ್ಯವಾಗದ, ಆದರೆ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ಗುರುವಾಗಿ ಸಹಾಯ ಮಾಡಿ ಗುರಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಧಾರವಾಡದ ಕೃಷಿ ವಿವಿಯ ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು. …

Read More »

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!

ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ …

Read More »

ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ. ಜಮೀರ್ ಅಹಮದ್ ಖಾನ್ ಅವರು …

Read More »

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶವನ್ನು ಕಿತ್ತುಹಾಕಿ ಭಾರತದ ಭೂಪಟದಲ್ಲಿ ಸೇರಿಸಲಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರ ಆಡಳಿತ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಚಿತ್ರ ಬದಲಾಗಿದೆ. …

Read More »

ಇನ್ಮುಂದೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ರೆ ಹುಷಾರ್! ಕೂಡಲೇ ಬೀಳುತ್ತೆ ಸುಮೋಟೋ ಕೇಸ್!

ಬೆಂಗಳೂರು: ಇನ್​ಸ್ಟಾಗ್ರಾಮ್​, ಫೇಸ್ ಬುಕ್, ಟ್ವೀಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಹಿಳೆಯರ ಬಗ್ಗೆ ಲಘುವಾಗಿ ಕಮೆಂಟ್​ ಮಾಡಿದ್ರೆ, ಮಹಿಳೆಯರ ಗೌರವಕ್ಕೆ ಧಕ್ಕೆ ಬರುವಂತೆ ಮಾಡಿದರೆ ಭಾರೀ ಬೆಲೆ ತೆರಬೇಕಗುತ್ತೆ. ಬೇಕಾಬಿಟ್ಟಿ ಕಮೆಂಟ್ ಮಾಡಿದ್ರೆ, ನೊಂದ ಮಹಿಳೆಯರು ಸುಮ್ಮನಿದ್ರೂ ಮಹಿಳಾ ಆಯೋಗ ಮಾತ್ರ ಸುಮ್ಮನೆ ಬಿಡಲ್ಲ. ಇತ್ತಿಚ್ಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಮಹಿಳೆಯರ ಪೋಟೋ ಡೀಪ್ ಪೇಕ್ ನಿಂದ ಹಿಡಿದು ಅಸಭ್ಯ ಕಮೆಂಟ್ ಹಾಕಿ …

Read More »

ಲೋಕಸಭಾ ಚುನಾವಣೆಗೂ ಮುನ್ನವೇ 4650 ಕೋಟಿ ರೂ. ಸೀಜ್​! 75 ವರ್ಷದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತ

ನವದೆಹಲಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮಗಳ ಮೇಲೆ ಕೇಂದ್ರ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ದೇಶದಲ್ಲಿ ಮತದಾನ ಇನ್ನೂ ಆರಂಭವಾಗಿಲ್ಲ, ಅಷ್ಟರಲ್ಲೇ ಭರ್ಜರಿ ಬೇಟೆಯಾಡಿರುವ ಚುನಾವಣಾಧಿಕಾರಿಗಳು ಈವರೆಗೆ ದೇಶಾದ್ಯಂತ ನಗದು, ಮದ್ಯ, ಡ್ರಗ್ಸ್​ ಹಾಗೂ ಉಚಿತ ಉಡುಗೊರೆ ಸೇರಿದಂತೆ 4,650 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಸೋಮವಾರ (ಏಪ್ರಿಲ್​ 15) ತಿಳಿಸಿದೆ.   ವಶಕ್ಕೆ ಪಡೆಯಲಾದ ಹಣವು …

Read More »

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಅಮಾನತುಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಪರೀಕ್ಷೆ ನಕಲಿಗೆ ಅವಕಾಶ ನೀಡಿದ ಆರೋಪವೂ ಅವರ ಮೇಲಿದೆ. ಹೊರ್ತಿಯ ರೇವಣ ಸಿದ್ದೇಶ್ವರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರ ಹಾಗೂ ಕಾರಜೋಳದ ರಾಣಿ ಚನ್ನಮ್ಮ ವಸತಿ ಶಾಲೆಯ ಪರೀಕ್ಷಾ ಕೇಂದ್ರದ ಒಳಗೆ …

Read More »