ಬೆಂಗಳೂರು, ಏಪ್ರಿಲ್ 14: ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದು, ಹೆಣ್ಣುಮಕ್ಕಳ ಬಗ್ಗೆ ಕುಮಾರಸ್ವಾಮಿಯವರ ಮನಸ್ಥಿತಿ ಏನು ಎಂದು ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. …
Read More »ಕಾಗೇರಿ ಆರು ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಬಗ್ಗೆ ಮಾತನಾಡಲಿ,: ಡಾ.ಅಂಜಲಿ ಸವಾಲು
ಭಟ್ಕಳ: ನಾನು ಬಹಿರಂಗ ಚರ್ಚೆಗೆ ಸಿದ್ಧಳಿದ್ದೇನೆ. ಬಿಜೆಪಿ ಆಡಳಿತವಿದ್ದರೂ ಖಾನಾಪುರದಲ್ಲಿ ಐದು ವರ್ಷದಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಆರು ಅವಧಿಯಲ್ಲಿ ಮಾಡಿದ ಕೆಲಸಗಳನ್ನ ತೋರಿಸಲಿ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಸವಾಲೆಸೆದರು. ಮಾವಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಡವರು, ರೈತರಿಗೆ ಅನ್ಯಾಯವಾದರೆ ಯಾರಿಗೂ ಬಿಡಲ್ಲ, ಅದು ಎಷ್ಟೇ …
Read More »ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಮಾತ್ರ ತಪ್ಪಿಸುವುದಿಲ್ಲ’ ಮೋದಿ ರಾಜ್ಯ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು : ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರುವರೆ ಕೋಟಿ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕಕ್ಕೆ ಸ್ವಾಗತ. ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ …
Read More »ಲೋಕಸಭೆ ಹೊಸ ಸಮೀಕ್ಷೆ; ರಾಜ್ಯದಲ್ಲಿ ಬಿಜೆಪಿಗೆ ಶಾಕ್!
ಬೆಂಗಳೂರು; ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಮೀಕ್ಷಾ ವರದಿಗಳು ಬದಲಾಗುತ್ತಿವೆ.. ಈ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ 1-2 ಸ್ಥಾನ ಬರುತ್ತೆ ಎಂದು ಹೇಳಲಾಗಿತ್ತು.. ನಂತರ ಬಂದ ಸಮೀಕ್ಷೆಯಲ್ಲಿ ಕಾಂಗ್ರೆಸ್ 5-7 ಸ್ಥಾನ ಗೆಲ್ಲಬಹುದು ಎಂದು ವರದಿ ಬಂದಿತ್ತು. ಆದ್ರೆ ಇದೀಗ ಕಾಂಗ್ರೆಸ್ ಗೆ 15-17 ಸ್ಥಾನ ಬರಬಹುದು ಎಂದು ಸಮೀಕ್ಷಾ ವರದಿಯೊಂದು ಹೇಳಿದೆ. ಕಾಂಗ್ರೆಸ್ ಗೆ 15-17 ಸ್ಥಾನ ಸಾಧ್ಯತೆ; ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15-17 ಕ್ಷೇತ್ರಗಳಲ್ಲಿ …
Read More »‘ಪರಿಮಳದವರು’ ನಾಟಕ ಪ್ರದರ್ಶನ 13ರಿಂದ
ಬೆಳಗಾವಿ: ‘ಇಲ್ಲಿನ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ.13, 14ರಂದು ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮೀಜಿ ಜೀವನಾಧಾರಿತವಾದ ‘ಪರಿಮಳದವರು’ ನಾಟಕ ಪ್ರದರ್ಶನಗೊಳ್ಳಲಿದೆ’ ಎಂದು ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಮಾನ್ಯ ರಂಗಮಂದಿರದಲ್ಲಿ ಮಾ.29ರಂದು ಈ ನಾಟಕ ಪ್ರದರ್ಶಿಸಿದ್ದೆವು. ವೀಕ್ಷಣೆಗೆ ಜನರು ಕಿಕ್ಕಿರಿದು ಸೇರಿದ್ದರು. ಇನ್ನೂ ಕೆಲವು ಪ್ರದರ್ಶನ ನೀಡಬೇಕೆಂದು ಒತ್ತಾಯಿಸಿದರು. ಹಾಗಾಗಿ ಈಗ ಮತ್ತೆ ಪ್ರದರ್ಶಿಸುತ್ತಿದ್ದೇವೆ’ ಎಂದರು. ‘ಶ್ರೀಪತಿ ಮಂಜನಬೈಲು ನಿರ್ದೇಶಿಸಿರುವ …
Read More »ವರ್ಷ ಧಾರೆಗೆ ನೆಲಕ್ಕುರುಳಿದ ಮರ
ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಕೆಲ ಗ್ರಾಮಗಳಲ್ಲಿ ಗುಡುಗು, ಜೋರಾದ ಗಾಳಿಯೊಂದಿಗೆ ಗುರುವಾರ ಮಳೆ ಸುರಿಯಿತು. ಕಾಯ್ದ ಭೂ ತಾಯಿ ಒಡಲಿಗೆ ಏಕಾಏಕಿ ಧರೆಗಿಳಿದ ಮಳೆರಾಯ ತುಸು ತಂಪೆರೆದ. ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನತೆ ಮಳೆಯ ಹನಿ ನೀರು ನೆತ್ತಿಯ ಮೇಲೆ ಬಿಳುತ್ತಿದ್ದಂತೆ ವರ್ಷಧಾರೆಗೆ ಮೈಯೊಡ್ಡಿ ಸಂಭ್ರಮಿಸಿದರು. ಪಟ್ಟಣ ಪ್ರದೇಶದಲ್ಲಿ ತುಂತುರು ಮಳೆ ಹನಿ ಸುರಿದರೆ ಮತಕ್ಷೇತ್ರದ ಇಂಚಲ, ಹಾರೂಗೊಪ್ಪ, ಮರಕುಂಬಿ, ಮುರಗೋಡ, ಸುತ್ತಗಟ್ಟಿ ಗ್ರಾಮದಲ್ಲಿ ಜೋರಾದ ಮಳೆ ಸುರಿಯಿತು. …
Read More »ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು..: ಮುರುಗೇಶ್ ನಿರಾಣಿ
ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ದೊಡ್ಡವರು, ನಮ್ಮಿಂದ ಅಥವಾ ಪ್ರಹ್ಲಾದ್ ಜೋಶಿ ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ಆಗಿರುವ ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಂಗಾಲೇಶ್ವರ ಶ್ರೀಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ …
Read More »ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ
ಕಲಬುರಗಿ: ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ ದುಪ್ಪಟ್ಟು, ಎಂಎಸ್ಪಿ ಬೆಲೆ ಹೆಚ್ಚಳದಂತಹ ಗ್ಯಾರಂಟಿಗಳನ್ನೇ ಮಾಡದಿರುವ ಪ್ರಧಾನಿ ನರೇಂದ್ರ ಮೋದಿ ಈಗೇನು ಗ್ಯಾರಂಟಿ ಕೊಡ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಕಲಬುರಗಿ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಆಯೋಜಿಸಲಾ ಕಾಂಗ್ರೆಸ್ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅವುಗಳನ್ನು ಈಗಾಗಲೇ ರಾಜ್ಯದಲ್ಲಿ ಕಾರ್ಯಾನುಷ್ಠಾನ ತರಲಾಗಿದೆ. ಆದರೆ ಮೋದಿ ಗ್ಯಾರಂಟಿ ಬರೀ …
Read More »ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಯತ್ನಾಳ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರವಾಗಿ ಮತಯಾಚಿಸಿದ ಬಳಿಕ ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮುಂದಿನ ಮುಖ್ಯಮಂತ್ರಿ ನಾನೇ ಎಂದಿದ್ದಾರೆ. , : ರಾಜ್ಯದಲ್ಲಿ ಬಿಜೆಪಿ (BJP) ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda …
Read More »ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್
ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು.ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ …
Read More »