ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲವೆಂದು ಬಂಡಾಯ ಎದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವೇಳೆ ಅವರು ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿದಂತೆ ನಿರ್ಬಂಧಿಸಿ ಇದೀಗ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಚುನಾವಣಾ ವೇಳೆ ಮೋದಿ ಭಾವಚಿತ್ರ ಹೆಸರು ಬಳಕೆಗೆ ಕೆಎಸ್ ಈಶ್ವರಪ್ಪಗೆ ನಿರ್ಬಂಧ ವಿಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಇದೀಗ …
Read More »ಸಾಲು ಸಾಲು ಹಬ್ಬ; ಕೋಳಿ ಮಾಂಸ ದುಬಾರಿ
ಹೊಸಕೋಟೆ: ಮುನಿ ದ್ಯಾವರ, ಜಾತ್ರೆ, ಯುಗಾದಿಯ ಹೊಸ ತೊಡಕು, ನಂತರ ರಂಜಾನ್ ಹಬ್ಬಗಳು ಸಲುಸಾಲಾಗಿ ಬಂದಿರುವುದರಿಂದ ಕೋಳಿ ಮಾಂಸದ ಬೆಲೆ ದಿಢೀರನೆ ಏರಿಕೆಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿಕ್ಕ ಬಾಯ್ಲರ್ ಕೋಳಿ ಕೆ.ಜಿಗೆ ₹170 ಇದ್ದದ್ದು, ಏಕಾಏಕಿ ₹240 ಆಗಿದೆ. ಅದೇ ರೀತಿಯಲ್ಲಿ ದೊಡ್ಡ ಬಾಯ್ಲರ್ ಕೋಳಿ ₹180ರಿಂದ ₹240ಕ್ಕೆ ಮುಟ್ಟಿದೆ. ಕೆಲವೆಡೆ ಹತ್ತಿಪ್ಪತ್ತು ರೂಪಾಯಿ ವ್ಯತ್ಯಾಸವೂ ಆಗಿದೆ. ಚಿಕ್ಕಬಾಯ್ಲರ್ ಮಾಂಸದ ಬೆಲೆ ₹70 ಹೆಚ್ಚಳವಾಗಿದ್ದರೆ, ದೊಡ್ಡ ಬಾಯ್ಲರ್ …
Read More »ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್
ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್ ಟೀಕೆ ಬೆಳಗಾವಿ: ‘ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆ ಹಾವು ಇದ್ದಂತೆ. ಸುಳ್ಳುಗಳ ಮಹಾಪುರಾಣ ಹೇಳುವ ಈ ದುರಹಂಕಾರಿ ಮತ್ತು ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ನಟ ಪ್ರಕಾಶ ರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ‘ದೇಶ ಉಳಿಸಿ ಸಂಕಲ್ಪ ಸಮಾವೇಶ’ದಲ್ಲಿ …
Read More »ಪಕ್ಷಿಗಳ ಬಾಯಾರಿಕೆ ನೀಗಿಸಿ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ …
Read More »ಹನುಮಾನ್ ಚಾಲೀಸ ಪಠಣಕ್ಕೆ ನಿರ್ಬಂಧ ಇದೆಯೇ?: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ? ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. …
Read More »ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:
ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. …
Read More »ಹಿರೇಬಾಗೇವಾಡಿ: 25 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ
ಹಿರೇಬಾಗೇವಾಡಿ: 25 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಹಿರೇಬಾಗೇವಾಡಿ ಸಜ್ಜಾಗುತ್ತಿದ್ದು, ಊರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 1998ರ ಮೇ ತಿಂಗಳಲ್ಲಿ ಹಿರೇಬಾಗೇವಾಡಿಯಲ್ಲಿ ಜಾತ್ರೆ ನಡೆದಿತ್ತು. ಈ ಬಾರಿ ಏಪ್ರಿಲ್ 12ರಿಂದ ಮೇ 3ರವರೆಗೆ ಜಾತ್ರೆ ನಡೆಯಲಿದ್ದು, 21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತ್ರೆ ಪ್ರಯುಕ್ತ, ಗ್ರಾಮಸ್ಥರು ತಮ್ಮ ಮನೆಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡವರು, ತ್ವರಿತವಾಗಿ ಮುಗಿಸುವುದರಲ್ಲಿ ನಿರತವಾಗಿದ್ದಾರೆ. ಇನ್ನೂ ಕೆಲವರು …
Read More »ಯುಗಾದಿ ಬಳಿಕ ರಾಜ್ಯದಲ್ಲಿ ಒಳ್ಳೆ ಬೆಳೆ, ಮಳೆಯಾಗುತ್ತೆ ; ಕೋಡಿಮಠ ಶ್ರೀ ಭವಿಷ್ಯ
ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ …
Read More »ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ
ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು …
Read More »ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ
ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ …
Read More »