ತುಮಕೂರು: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ಮಠದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ಉದ್ಘಾಟಿಸಲಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ. ಡಾ. ಅನ್ನದಾನೇಶ್ವರ ಸ್ವಾಮೀಜಿ, …
Read More »ಚುನಾವಣಾ ಪ್ರಚಾರ’ದ ಅಖಾಡಕ್ಕಿಳಿದ ‘ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಸಮರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಳಿದಿದ್ದಾರೆ. ಮೈಸೂರು-ಕೊಡಗು, ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲೇ ಬೇಕು ಅಂತ ಪಣ ತೊಟ್ಟಿರುವಂತ ಅವರು, ಇಂದಿನಿಂದ ಮೂರು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 10.15ಕ್ಕೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. 10.40ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿರುವಂತ ಅವರು ಅಲ್ಲಿಂದ ರಸ್ತೆ ಮೂಲಕ ನಂಜನಗೂಡು ತಾಲೂಕಿನ ಬಿಳಿಗೆರೆಗೆ 11 ಗಂಟೆಗೆ …
Read More »ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ
ಸಂಕೇಶ್ವರ: ಸಂಕೇಶ್ವರ ಪಟ್ಟಣಕ್ಕೆ ಮಹಾರಾಷ್ಟ್ರದಿಂದ ಮಾವಿನಕಾಯಿಗಳು ಬರುತ್ತಿದ್ದು ಪಟ್ಟಣದ ತುಂಬೆಲ್ಲ ಮಾವಿನಕಾಯಿಗಳದ್ದೇ ರಾಶಿ. ಆದರೆ ದರ ಮಾತ್ರ ಗಗನಕ್ಕೇರಿದ್ದು ದುಬಾರಿ ದರಕ್ಕೆ ಮಾವಿನಕಾಯಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ದೇವಗಡ ಆಪೂಸ್ ಮಾವಿನಕಾಯಿ ದರ ಒಂದು ಡಜನ್ನಿಗೆ ₹800 ರಿಂದ ₹1,000 ಗಳಿದ್ದು ರತ್ನಾಗಿರಿ ಆಪೂಸ್ ಮಾವಿನಕಾಯಿ ದರ ₹1,200 ರೂಪಾಯಿಗಳಷ್ಟಿದೆ. ಯುಗಾದಿ ನಂತರವೇ ಮಾವಿನ ಹಣ್ಣಿನ ದರ ಇಳಿಮುಖವಾಗಲಿದೆ.
Read More »19 ಕೆ.ಜಿ ವಾಣಿಜ್ಯ, 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್‌ಗಳ ಬೆಲೆ ಇಳಿಕೆ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್ ಮತ್ತು 5 ಕೆ.ಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ ಎಂದು ಮೂಲಗಳು ತಿಳಿಸಿವೆ. 19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ ₹ 30.50 ಇಳಿಕೆಯಾಗಿದ್ದು, 5 ಕೆ.ಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ ₹7.50 ಇಳಿಕೆಯಾಗಿದೆ.ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ ₹ 1764.50 ನಿಗದಿಪಡಿಸಲಾಗಿದೆ ಎಂದು ಮೂಲಗಳು …
Read More »ಅಲ್ಲು ಅರ್ಜುನ್ ಹುಟ್ಟು ಹಬ್ಬಕ್ಕೆ ಬಿಡುಗಡೆಯಾಗಲಿದೆ ‘ಪುಷ್ಪ 2’ ಟೀಸರ್
ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಆಗಸ್ಟ್ 15ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದ್ದು, ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪುಷ್ಪ ಚಿತ್ರತಂಡ ಇಂದು ಟೀಸರ್ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಇದೇ ಏಪ್ರಿಲ್ 8 ಅಲ್ಲು ಅರ್ಜುನ್ ಹುಟ್ಟು ಹಬ್ಬದ ದಿನದಂದೇ ಟೀಸರ್ ರಿಲೀಸ್ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಅಲ್ಲು …
Read More »ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ INDIA ಮೈತ್ರಿಕೂಟದ ನ 5 ಬೇಡಿಕೆಗಳು ಇಂತಿವೆ…
ನವದೆಹಲಿ: ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಭೂಹಗರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಜಾರ್ಖಂಡ್ ನ ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಮುಕ್ತಗೊಳಿಸಬೇಕೆಂದು ಪ್ರತಿಪಕ್ಷಗಳು ಈ ಸಭೆಯಲ್ಲಿ ಒತ್ತಾಯಿಸಿವೆ. ದೇಶದ …
Read More »ʼಬಿಜೆಪಿ ಸೇರಿದರೆ, ಕೇಸ್ ಕ್ಲೋಸ್ʼ: ಸುದ್ದಿಗೋಷ್ಠಿಯಲ್ಲಿ ವಾಶಿಂಗ್ ಮೆಶಿನ್ ಪ್ರದರ್ಶಿಸಿ ಬಿಜೆಪಿಯನ್ನು ಲೇವಡಿ ಮಾಡಿದ ಕಾಂಗ್ರೆಸ್
ಹೊಸದಿಲ್ಲಿ: ಕಾಂಗ್ರೆಸ್ ತನ್ನ ಪತ್ರಿಕಾಗೋಷ್ಠಿಯ ವೇದಿಕೆಯಲ್ಲಿ ವಾಷಿಂಗ್ ಮೆಷಿನ್ ಅನ್ನು ಪ್ರದರ್ಶಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ಆಟೋಮ್ಯಾಟಿಕ್ ವಾಷಿಂಗ್ ಮೆಶೀನ್ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. “ಬಿಜೆಪಿ ಸೇರಿದರೆ, ಕೇಸ್ ಕ್ಲೋಸ್” ಕ್ಲೀನ್ ಚಿಟ್ ಪಡೆದು ಹೊರ ಬರಬಹುದು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ ಭ್ರಷ್ಟಾಚಾರದ ಆರೋಪಗಳಿರುವ ವಿಪಕ್ಷ ನಾಯಕರು ಬಿಜೆಪಿಗೆ ಸೇರಿದ ಬಳಿಕ ಆರೋಪ ಮುಕ್ತರಾಗುತ್ತಿರುವ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ. ವಾಶಿಂಗ್ ಮೆಶೀನ್ ನ ಸಾಂಕೇತಿಕ ಪ್ರದರ್ಶನ …
Read More »ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ: ಶರದ್ ಪವಾರ್
ಮುಂಬೈ: ಶಾಂತಿ ಮತ್ತು ಸಹೋದರತ್ವವನ್ನು ಖಚಿತಪಡಿಸಿಕೊಳ್ಳಲು ದೇಶದ ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ ಎಂದು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದರು. ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯ ಕೆಲ ನಾಯಕರು ಸಂವಿಧಾನದ ಬದಲಾವಣೆ ಮಾಡುವ ಮಾತುಗಳನ್ನಾಡುತ್ತಿದ್ದಾರೆ.ಇಂತಹ ಹೇಳಿಕೆಗಳು ಕಳವಳಕಾರಿಯಾಗಿದೆ’ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಉಲ್ಲೇಖಿಸಿದರು. ‘ಒಬ್ಬ ವ್ಯಕ್ತಿಯ ಹಿತಕ್ಕಾಗಿ ಇಡೀ ದೇಶದ ಪ್ರಜಾಪ್ರಭುತ್ವವನ್ನೇ ನಾಶಪಡಿಸಿದ ನೆರೆಹೊರೆಯ ಕೆಲ ದೇಶಗಳ ಸ್ಥಿತಿ ನಮ್ಮ ದೇಶಕ್ಕೆ ಎಂದಿಗೂ ಬರಬಾರದು …
Read More »ಪಕ್ಷಾಂತರಿಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ: ಸಿರಿಗೆರೆ ಶ್ರೀ
ಚಿತ್ರದುರ್ಗ: ಪಕ್ಷಾಂತರಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ. ಕಾರ್ಯಕರ್ತರ ಅಸಮಾಧಾನ ಹೆಚ್ಚಾಗುತ್ತದೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಸದ್ಧರ್ಮ ನ್ಯಾಯ ಪೀಠದಲ್ಲಿ ಮಾತನಾಡಿದ ಶ್ರೀಗಳು, ಪಕ್ಷಾಂತರಗಳಿಗೆ ಕಡಿವಾಣ ಬೀಳದೆ ರಾಜಕೀಯ ಶುದ್ಧೀಕರಣ ಮರೀಚಿಕೆಯಾಗಿದೆ ಎಂದು ಹೇಳಿದ್ದಾರೆ. ರಾಜಕೀಯ ಶುದ್ಧೀಕರಣ ಇಂದಿನ ಅಗತ್ಯವಾಗಿದೆ. ಇದಕ್ಕೆ ಬದ್ಧವಾಗಿರಲು ರಾಜಕಾರಣಿಗಳು ಮುಂದಾಗಬೇಕು. ಪಕ್ಷಾಂತರ ನಿಷೇಧ …
Read More »ಬಿಳಿ ಕೂದಲಿಗೆ ಇಲ್ಲಿದೆ ಶಾಶ್ವತ ಪರಿಹಾರ; ಪಾರ್ಲರ್ ಹೋಗ್ಬೇಡಿ ಈ ಎಣ್ಣೆಯನ್ನು ಕಾಫಿಪುಡಿಗೆ ಬೆರೆಸಿ ಹಚ್ಚಿದ್ರೆ ಸಾಕು.
ಬೆಂಗಳೂರು: ಬಿಳಿ ಕೂದಲು ಸಮಸ್ಯೆ ಸಾಮಾನ್ಯವಾಗಿ ಎಲ್ಲರಿಗೂ ಕಾಡುತ್ತದೆ. ಮಾರುಕಟ್ಟೆಯಲ್ಲಿ ಸಿಗುವ ಕೆಲಮಿಕಲ್ ಇರುವ ಪ್ರಾಡೆಕ್ಟ್ ಬಳಕೆ ಮಾಡುತ್ತೇವೆ. ಆದರೆ ಬಿಳಿಕೂದಲು ಸಮಸ್ಯೆಗೆ ಶಾಶ್ವತವಾದ ಪರಿಹಾರ ಮಾತ್ರ ಸಿಗುವುದು ಕಡಿಮೆ. ಹೀಗಿರುವಾಗ ನಾವು ಇಂದು ಹೇಳುತ್ತಿರುವ ಮನೆ ಮದ್ದಿನಿಂದ ನೀವು ನಿಮ್ಮ ಕೂದಲಿನ ಮಸ್ಯೆಗೆ ಯಾವುದೇ ಹಾನಿ ಇಲ್ಲದೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಕಾಫಿ ಪುಡಿ, ಜೇನುತುಪ್ಪ, 1 ಚಮಚ ತೆಂಗಿನ ಎಣ್ಣೆಯನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ಹೇರ್ ಮಾಸ್ಕ್ …
Read More »