ಮಂಗಳೂರು : ಇಫ್ತಾರ್ (iftar) ಕೂಟಕ್ಕಾಗಿ ಇಡೀ ರಸ್ತೆಯನ್ನೇ ಬಂದ್ ಮಾಡಿರುವ ಘಟನೆ ಮಂಗಳೂರಲ್ಲಿ(mangaluru) ನಡೆದಿದೆ. ರಸ್ತೆ ತುಂಬೆಲ್ಲಾ ಚೇರ್ ಹಾಕಿ ಒಂದಿಡೀ ರಸ್ತೆಯನ್ನೇ ಬಂದ್ ಮಾಡಿ ಆಹಾರ ಸೇವನೆಗೆ ವ್ಯವಸ್ಥೆ ಮಾಡಿರುವ ಕ್ರಮಕ್ಕೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಮಂಗಳೂರಿನ ಮುಡಿಪು ಜಂಕ್ಷನ್‌ನಲ್ಲಿ (mudipu junction) ಈ ರೀತಿ ರಸ್ತೆ ಬ್ಲಾಕ್ ಮಾಡಿ ಇಫ್ತಾರ್ ಆಯೋಜಿಸಲಾಗಿದೆ. ಇದರ ಪರಿಣಾಮ ಟೂ-ವೇ ಇದ್ದ ರಸ್ತೆ ಒನ್-ವೇ ಆಗಿದ್ದು, ವಾಹನಗಳೆಲ್ಲಾ …
Read More »BJP: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಈಶ್ವರಪ್ಪ, ಅನಂತ್ ಹೆಗಡೆಗಿಲ್ಲ ಅವಕಾಶ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಟಿಕೆಟ್ ವಂಚಿತರಾದ ನಳಿನ್ ಕುಮಾರ್ ಕಟೀಲು ಹಾಗೂ ಪ್ರತಾಪಸಿಂಹ ಅವರಿಗೆ ಅವಕಾಶ ನೀಡಿದೆ. ಆದರೆ ವರಿಷ್ಠರ ವಿರುದ್ಧ ಮುನಿಸಿಕೊಂಡಿರುವ ಅನಂತ್ ಕುಮಾರ್ ಹೆಗಡೆ ಹಾಗೂ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಗಣಿಸದೆ ನಿರ್ಲಕ್ಷಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ 40 ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕರ್ನಾಟಕದಲ್ಲಿ ಬಿಜೆಪಿ ಪರ …
Read More »ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ …
Read More »ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
ಮಂಡ್ಯ: ನಾನು ಮತ್ತು ಅಂಬರೀಶ್ ಹಲವು ವರ್ಷಗಳ ಸ್ನೇಹಿತರು. ಸಂಸದೆ ಸುಮಲತಾ ಅವರು ಕೂಡ ನನಗೆ ಊಟ ಬಡಿಸಿದ್ದಾರೆ. ನಾವು ಶಾಶ್ವತ ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ಸೂಕ್ತ ನಿರ್ಧಾರವೊಂದನ್ನು ಘೋಷಿಸಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಕೆಲಸ ಮಾಡಿದ್ದೇವೆ, ಅದರ ಕೂಲಿ ಕೇಳುತ್ತಿದ್ದೇವೆ ಎನ್ನುತ್ತಿದ್ದಾರೆ. ಹಾಗಾದರೆ ನಾವೇನೂ …
Read More »ಮುಖ್ಯಮಂತ್ರಿ, ಕಾಂಗ್ರೆಸ್ ಬಗ್ಗೆ ಮಾತನಾಡಲಾರೆ: ಯದುವೀರ್
ಮೈಸೂರು: ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ನಾನು ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಯದುವೀರ್ ಒಡೆಯರ್ ಬಗ್ಗೆ ಕಾಂಗ್ರೆಸ್ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ …
Read More »ಮಧ್ಯಾಹ್ನದ ಬಿಸಿಯೂಟಕ್ಕೆ ಅಡ್ಡಿಯಾದ ಬಿಸಿಲು.. ಕಲ್ಯಾಣ ಕರ್ನಾಟಕದಲ್ಲಿ 38-40 ಡಿಗ್ರಿ ತಾಪಮಾನ
ದೋಟಿಹಾಳ (ಕೊಪ್ಪಳ): ಸದ್ಯ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸೂರನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೇಸಿಗೆ ರಜೆ ಅವಧಿಯಲ್ಲಿ ಶಾಲಾ ಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸುಡುವ ಬಿಸಿಲಿನಲ್ಲಿ ಶಾಲೆಗೆ ಹೋಗುವಂತಾಗಿದೆ. ರಾಜ್ಯ ಸರ್ಕಾರ ಬರಗಾಲ ಇರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅವಧಿಯಲ್ಲೂ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆ ಮುಂದುವರಿಸಿದೆ. ಆದರೆ ಇದು ಪಾಲಕರನ್ನು ಚಿಂತೆಗೀಡು ಮಾಡಿದೆ. ಕೆಲವೆಡೆ ಬಿಸಿಲಿನ ತಾಪಮಾನ 40 ಡಿಗಿ, ಸೆಲ್ಸಿಯಸ್ ದಾಟುತ್ತಿದೆ. ಆರೋಗ್ಯ …
Read More »ಜಲಾಶಯಗಳ ನೀರು ಸಂಗ್ರಹವು ಕೊರತೆಯನ್ನು ಎದುರಿಸುತ್ತಿದೆ
ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕರ್ನಾಟಕದ ಜಲಾಶಯಗಳ ನೀರು ಸಂಗ್ರಹವು ಕೊರತೆಯನ್ನು ಎದುರಿಸುತ್ತಿದೆ ಎಂದು ಕೇಂದ್ರ ಜಲ ಆಯೋಗದ ಬುಲೆಟಿನ್ ಹೇಳಿದೆ. ಕಳೆದ 10 ವರ್ಷಗಳ ಸರಾಸರಿಯಲ್ಲೂ ಇದು ಅತೀ ಹೆಚ್ಚು ಕೊರತೆಯಾಗಿದೆ. ಅಲ್ಲದೇ ದೇಶದ ಒಟ್ಟು 150 ಜಲಾಶಯಗಳ ಲೈವ್ ಸ್ಟೋರೇಜ್ ಶೇ.36ಕ್ಕೆ ಇಳಿಕೆಯಾಗಿದೆ ಎಂದು ಆಯೋಗ ಹೇಳಿದೆ. ಕಳೆದ ವರ್ಷದಲ್ಲಿ ಮಳೆ ಅಭಾವ, ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆರೆಗಳು ನಾಶವಾದ ಪರಿಣಾಮ ಬೆಂಗಳೂರು ನೀರು ಕೊರತೆಯಿಂದ ಭಾರೀ …
Read More »ಹಿಂದುತ್ವದ ವಿಷ ಬೀಜ ಬಿತ್ತುವುದೇ ಬಿಜೆಪಿ ಸಾಧನೆ: ಸುನೀಲ್ ಬೋಸ್
ಮೈಸೂರು: ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಇಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಹತ್ತು ವರ್ಷದಲ್ಲಿ ಬಿಜೆಪಿ ಏನು ಮಾಡಿದೆ? ರಾಮ ಮಂದಿರ ಕಟ್ಟಿದ್ದೆ ಸಾಧನೆ. ಅಣ್ಣ ತಮ್ಮಂದಿರಂತೆ ಬದುಕುವವರ ಮಧ್ಯೆ ಬಿಜೆಪಿ ಹಿಂದುತ್ವದ ವಿಷ ಬೀಜ ಬಿತ್ತಿದೆ. ಆ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದೇ ಅವರ ಸಾಧನೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲೆಡೆ ಟಿಕೆಟ್ …
Read More »ಮೋದಿ ಪ್ರಮಾಣ ವಚನ ಸ್ವೀಕರಿಸಿ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ:ಬೊಮ್ಮಾಯಿ
ಹಾವೇರಿ: ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಅದರಲ್ಲೇನು ಆಶ್ವರ್ಯವಿಲ್ಲ. ಆದರೆ ಈ ಬಾರಿ ಇಷ್ಟು …
Read More »ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದರೊಂದಿಗೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವುದು ಕೋಲಾರ ವಿಚಾರದಲ್ಲಿ ನಿಜವಾಗಿದೆ. ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ …
Read More »