ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Read More »ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್ ಗುಂಡೂರಾವ್
ಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಇಲ್ಲಿ ಬುಧವಾರ ನಡೆದ ಮುಖಂಡರ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಧ್ಯಮವನ್ನೂ ಅವರ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರ ವಿರುದ್ಧ ಮಾತನಾಡಲಾಗದಂತೆ, ಪ್ರಶ್ನಿಸಿ ಬರೆಯಲಾಗದಂತೆ ಮಾಡಿದ್ದಾರೆ. ಭಯದ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.
Read More »SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ:
ಬೆಂಗಳೂರು, ಮಾ.28: ಎಸ್ಎಸ್ಎಲ್ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆಬೆಂಗಳೂರಿನರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. …
Read More »ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ
ದೇವನಹಳ್ಳಿ, ಮಾರ್ಚ್ 28: ಸಿಲಿಕಾನ್ ಸಿಟಿ ಅಂದರೆ ಇತ್ತೀಚೆಗೆ ಟ್ರಾಪಿಕ್ನಿಂದಾಗಿ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಪೀಕ್ ಅವರ್ನಲ್ಲಿ ಪೀಣ್ಯ ಕಡೆಯಿಂದ ಹಾಸನ- ತುಮಕೂರು ಹೆದ್ದಾರಿ(highway)ತಲುಪಲು ಸವಾರರು ಹೈರಣಾಗುತ್ತಿದ್ದರು. ಆದರೆ ಈಗ ಸಿಟಿ ಹೊರ ವಲಯದಲ್ಲಿ ಜನರಿಗೆ ಸಂಚಾರಕ್ಕೆ ಹೈಟೆಕ್ ಹೈವೆ ಮುಕ್ತವಾಗಿದೆ. ಆ ಮೂಲಕ ಹೆದ್ದಾರಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡುವ ಜೊತೆಗೆ ಸುರಕ್ಷತೆಗೂ ಒತ್ತು ನೀಡಲಾಗಿದೆ. ಹೊಸಕೋಟೆಯಿಂದ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ದಾಬಸ್ ಪೇಟೆವರೆಗೂ ಹೆದ್ದಾರಿ …
Read More »ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್ ಶೆಟ್ಟರ್ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ. ಬೆಳಗಾವಿ, ಮಾರ್ಚ್ 28: ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ …
Read More »KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ
KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ದಾಖಲೆಗಳಿಲ್ಲದೇ ಯಾವುದೇ ವಸ್ತು, ಹಣ ಸಾಗಿಸುವಂತಿಲ್ಲ. ಕೆ ಎಸ್ …
Read More »ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಹುಣಸಗಿ: ಕುಡಿಯುವ ನೀರಿನ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸಗಿ ಪಟ್ಟಣದಲ್ಲಿ ಮಾ. 27ರ ಬುಧವಾರ ರಾತ್ರಿ ನಡೆದಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದ ಯುವಕ. ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬ ಯುವಕನನ್ನು ಹಣುಮಂತ ಎಂಬಾತ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡವನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ …
Read More »2024: 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್; ಇಲ್ಲಿದೆ ಸಂಪೂರ್ಣ ಪಟ್ಟಿ!
ಬೆಂಗಳೂರು, ಮಾರ್ಚ್ 28: ಕರ್ನಾಟದಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನ ಎಲ್ಲ ಕ್ಷೇತ್ರಗಳಿಗೂ ಉಮೇದುವಾರರನ್ನು ಘೋಷಿಸಿವೆ. ಆಡಳಿತರೂಢ ಕಾಂಗ್ರೆಸ್ ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸುವುದು ಬಾಕಿ ಉಳಿದಿದೆ. ಆದರೆ, ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದೆ. ಇತ್ತ ಬಿಜಪಿ ಮೊದಲ ಪಟ್ಟಿಯಲ್ಲೇ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಣೆ …
Read More »ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ. ಬೀಸರಹಳ್ಳಿ ಗ್ರಾಮದಲ್ಲಿ …
Read More »ಸದ್ಯದಲ್ಲೇ ಬಿಜೆಪಿ ಸ್ಟಾರ್ ಪ್ರಚಾರಕರು ರಾಜ್ಯಕ್ಕೆ ಎಂಟ್ರಿ
ಬೆಂಗಳೂರು,ಮಾ.28- ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಬಿಜೆಪಿ ನಾಯಕರು ಮುಂದಿನ ಕೆಲವು ವಾರಗಳಲ್ಲಿ ಕನಿಷ್ಠ ಪಕ್ಷ 2-3 ಬಾರಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
Read More »