ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ಅವರು, ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ಸ್ಥಳಗಳಿಂದ ಸ್ಪರ್ಧಿಸಲು ಆಫರ್ ನೀಡಿದ್ದರು.ಆದರೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಾದ ಹಣವಿಲ್ಲದ ಕಾರಣ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹೇಳಿದರು. 10 ದಿನಗಳ ಚರ್ಚೆಯ ನಂತರ, ನಾನು ಅಂತಿಮವಾಗಿ ನಡ್ಡಾಜಿಗೆ ಕ್ಷಮೆಯಾಚಿಸಿದೆ. ಏಕೆಂದರೆ ಚುನಾವಣೆಯಲ್ಲಿ …
Read More »ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು
ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್ನಲ್ಲೇ ಕುಳಿತುಕೊಂಡು ಗಾಳ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ …
Read More »ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ
ಬೆಂಗಳೂರು : ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ …
Read More »ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ
ಬೆಂಗಳೂರು, – ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿ ಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ. ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ …
Read More »ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ;B.S.Y
ಬೆಳಗಾವಿ : ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ, ಅವರು ಸಮಾಧಾನದಿಂದ ಇರಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದೆ. ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ …
Read More »ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ
ಉತ್ತರಕನ್ನಡ: ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ …
Read More »SSLC ಪರೀಕ್ಷೆ: ಇಂದು ‘8.27 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ‘9 ಮಂದಿ’ ಡಿಬಾರ್ | SSLC Exam
ಬೆಂಗಳೂರು: ಇಂದು ರಾಜ್ಯಾಧ್ಯಂತ ಎರಡನೇ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. 8.27 ಲಕ್ಷ ವಿದ್ಯಾರ್ಥಿಗಳು ಇಂದು ನಡೆದಂತ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 27-03-2024ರಂದು ಸೋಷಿಯಲ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಿತು. ನೋಂದಾಯಿಸಿಕೊಂಡಿದ್ದಂತ 8,41,120 ವಿದ್ಯಾರ್ಥಿಗಳಲ್ಲಿ, 8,27,773 ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ED ಕಸ್ಟಡಿಯಲ್ಲಿ ಕೇಜ್ರಿವಾಲ್ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ: ಎಎಪಿ
ನವದೆಹಲಿ: ‘ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯವು ಸಂಪೂರ್ಣ ಹದಗೆಟ್ಟಿದೆ. ಮಧುಮೇಹದಿಂದ ಬಳಲುತ್ತಿರುವ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರಾಗುತ್ತಿದೆ’ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ಮೂಲಗಳು ಬುಧವಾರ ಹೇಳಿವೆ. ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಒಂದು ಸಮಯದಲ್ಲಿ 46 ಎಂಜಿ ಗೆ ಇಳಿದಿತ್ತು. ವೈದ್ಯರ ಪ್ರಕಾರ ಇದು ಅತ್ಯಂತ ಗಂಭೀರ ಆರೋಗ್ಯ ಪರಿಸ್ಥಿತಿಯಾಗಿದೆ’ ಎಂದಿದೆ. ಮಂಗಳವಾರ ಕೇಜ್ರಿವಾಲ್ ಅವರನ್ನು ಇ.ಡಿ …
Read More »ಮಾರ್ಚ್ 28ರಿಂದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ನೇಸರಗಿ: ಸಮೀಪದ ವಣ್ಣೂರ ಗ್ರಾಮದಲ್ಲಿ ಪ್ರಭುದೇವರ ಮೂರ್ತಿ ಪ್ರತಿಷ್ಠಾಪನೆ, ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾರ್ಚ್ 28ರಿಂದ ಏಪ್ರಿಲ್ 1ರ ವರೆಗೆ ನಡೆಯಲಿದೆ. ’28ರಂದು ಗ್ರಾಮದ ಪ್ರಭುದೇವರ ಮೂರ್ತಿಗಳ ಮೆರವಣಿಗೆ, 30ರಂದು ಪ್ರಭುದೇವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವೀರಭದ್ರೇಶ್ವರ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಲಿದೆ. ಏಪ್ರಿಲ್ 1ರಂದು ಬಾಳೆಹೊನ್ನೂರ ರಂಭಾಪುರಿ ಶ್ರೀ ಅಡ್ಡ ಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಸಮಾರಂಭ ನಡೆಯಲಿದೆ’ ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ …
Read More »ಮಹಿಳಾ ಮತದಾರರು ಬಿಜೆಪಿ ಪರ ಇದ್ದಾರೆ: B.S.Y.
ಬೆಳಗಾವಿ: ‘ರಾಜ್ಯದಲ್ಲಿ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತೆಯರು ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್‌ಗಳನ್ನು ಕೊಟ್ಟಿದ್ದೇವೆ. ಎಲ್ಲ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿ ನಿಮಗೆ ಉತ್ತರ ಕೊಡುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ‘ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಏಕಮಾತ್ರ ಮಹಿಳಾ ಸಂಸದರಾದ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ತಪ್ಪಿಸಿದ್ದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, …
Read More »