ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಎಂದಿಗೂ ಹಿಂಪಡೆಯುವುದಿಲ್ಲ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. “ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ವಿವಾದಾತ್ಮಕ ಪೌರತ್ವ …
Read More »ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!
ಬೆಳಗಾವಿ, ಮಾರ್ಚ್ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …
Read More »ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ಅಸಲಿ ಕಾರಣ ಇಲ್ಲಿದೆ ನೋಡಿ!
ಬಿಜೆಪಿ ಲೋಕಸಭಾ ಚುನಾವಣೆ 2024ರ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಮೊದಲೇ ಅಂದುಕೊಂಡಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಲ್ಲೂ ಈ ಪಟ್ಟಿಯಲ್ಲಿ ಮೈಸೂರು & ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಈಗ, ಮಾಜಿ ಸಂಸದ ಆಗೋದು ಪಕ್ಕಾ ಆಗಿದೆ. ತಮ್ಮದೇ ತಪ್ಪಿಗೆ ಬೆಲೆ ಕಟ್ಟಿದ ಸಿಂಹ?ಹೊರಗಡೆ ಈಗ ಓಡಾಡುತ್ತಿರುವ ವಿಚಾರ ಏನು ಅಂದ್ರೆ, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಸ್. ಯಡಿಯೂರಪ್ಪ …
Read More »ಅತಂತ್ರ ಸ್ಥಿತಿಯಲ್ಲಿ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ
ಬೆಂಗಳೂರು,ಮಾ.14- ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಡೋಲಾಯಮಾನ ಸ್ಥಿತಿಗೆ ಬಂದಿದೆ. ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವುದರಿಂದ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಹುತೇಕ ತೀರ್ಮಾನಿಸಿದ್ದು, ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯಕ್ಕೆ ಮಂಕು ಆವರಿಸಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲೇಬಾಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಮಂಡ್ಯ …
Read More »ಬಿಜೆಪಿ ಟಿಕೆಟ್ ಪಡೆದ ಯದುವೀರ ಕೃಷ್ಣದತ್ತ ಒಡೆಯರ್‌ಗೆ ಮೊದಲನೇ ಶಾಕ್?
ಕರ್ನಾಟಕದಲ್ಲಿ ಇದೀಗ ಲೋಕಸಭೆ ಚುನಾವಣೆ ಅಬ್ಬರ ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಹಂತ ಹಂತವಾಗಿ ಟಿಕೆಟ್ ಘೋಷಣೆ ಮಾಡುತ್ತಿವೆ. ಹೀಗಿದ್ದಾಗ ಇದೀಗ ಮೈಸೂರು & ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದ್ದು ಮೈಸೂರಿನ ರಾಜವಂಶದ, ಯದುವೀರ ಕೃಷ್ಣದತ್ತ ಒಡೆಯರ್ ಅವರಿಗೆ.ಪ್ರತಾಪ್ ಸಿಂಹ ಅವರ ಕೈತಪ್ಪಿದ ಈ ಟಿಕೆಟ್ ಯದುವೀರ್‌ಗೆ ಸಿಕ್ಕಿದೆ. ಇದೇ ಖುಷಿ ಸಮಯದಲ್ಲೀಗ ಯದುವೀರ್ ಅವರಿಗೆ ದೊಡ್ಡ ಆಘಾತ ಕೂಡ ಎದುರಾಗಿದೆ!ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. …
Read More »ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್ ಶೆಟ್ಟರ್ ಕಾರು ವಾಪಸ್ ಹುಬ್ಬಳ್ಳಿಯತ್ತ ತಿರುಗಿದೆ.
ಹುಬ್ಬಳ್ಳಿ, (ಮಾರ್ಚ್ 13): ಲೋಕಸಭಾ ಚುನಾವಣೆಗೆ (Loksabha Elections 2024) ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕ ಒಟ್ಟು 8 ಹಾಲಿ ಬಿಜೆಪಿ(BJP) ಸಂಸದರಿಗೆ ಟಿಕೆಟ್ ಮಿಸ್ ಆಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish shettar) ಅವರ ಕಾರು ವಾಪಸ್ ಹುಬ್ಬಳ್ಳಿ ಕಡೆ ತಿರುಗಿದೆ. ಹೌದು.. ಜಗದೀಶ್ ಶೆಟ್ಟರ್ ಬೆಳಗಾವಿ(Belagavi) ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದ್ರೆ, 2ನೇ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದು …
Read More »ಇಬ್ಬರು ಹಾಲಿ ಶಾಸಕರ ಸ್ಪರ್ಧೆ: ಗೆದ್ದರೆ ಉಪ ಚುನಾವಣೆ ಖಚಿತ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಅದರಲ್ಲಿ ಇಬ್ಬರು ಹಾಲಿ ಶಾಸಕರೂ ಇದ್ದಾರೆ. ಅವರು ಗೆದ್ದರೆ ಆ ಕ್ಷೇತ್ರಗಳ ಮತದಾರರು ಮತ್ತೊಂದುಚುನಾವಣೆಗೆ ಸಜ್ಜಾಗಬೇಕಾಗುತ್ತದೆ! ಬುಧವಾರ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರೂ ಇದೆ.ಅವರು ಕ್ರಮವಾಗಿ ಹಾವೇರಿ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ. …
Read More »ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುರುಬ ಸಮುದಾಯ ಮರೆತ ಬಿಜೆಪಿ ಹೈಕಮಾಂಡ್
ಬೆಂಗಳೂರು, ಮಾರ್ಚ್ 14: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಸರಿ ಪಡೆ ಈಗಾಗಲೇ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಲವು ಜಾತಿ ಲೆಕ್ಕಾಚಾರದಿಂದ ಬಿಜೆಪಿ ಟಿಕೆಟ್ ಘೋಷಿಸಿದೆ.ಬಿಜೆಪಿ ಲೋಕಸಭೆ ಟಿಕೆಟ್ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರು ನಿರ್ಣಾಯಕರಾಗಿರುವ ಕಾರಣ ಬಿಜೆಪಿಯ ಪ್ರಕಟಿತ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದವರಿಗೆ ಸಿಂಹಪಾಲು ಸಿಕ್ಕಿದ್ದು, …
Read More »ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ: ಡಿ.ಕೆ. ಶಿ.
ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು. ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ‘ನಮ್ಮ ಸರ್ಕಾರ …
Read More »ಚುನಾವಣೆಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ 1.4 ಸಾವಿರ ಕೋಟಿ ರೂ.ಕೊಡುಗೆ!
ಕಲಬುರಗಿ, ಮಾರ್ಚ್ 14: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರ ಜಿಲ್ಲೆ ಕಲಬುರಗಿಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಪಣ ತೊಟ್ಟಿದೆ. ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು ಮತ್ತೆ ಕಣಕ್ಕಿಳಿಸಿದೆ. ಇದೆ ವೇಳೆ ಮತ್ತೆ ಕಲಬುರಗಿಯನ್ನು ಗೆಲ್ಲುವ ವಿಶ್ವಾಸದಲ್ಲಿರುವ ಕಾಂಗ್ರೆಸ್ ಹಲವು ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಿದೆ.ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಸಾವಿರಾರು ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …
Read More »