ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ …
Read More »ಟ್ರ್ಯಾಕ್ಟರ್ ಸಾಲ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಲಕ್ಷ್ಮೇಶ್ವರ: ಸಾಲ ತೀರಿಸಲು ಸಾಧ್ಯವಾಗದೆ ತಾಲ್ಲೂಕಿನ ಗೋವನಾಳ ಗ್ರಾಮದ ಒಂದೇ ಕುಟುಂಬದ ಮೂವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಣುಕಾ ತೇಲಿ (50), ಸಹೋದರಿ ಸಾವಕ್ಕ ತೇಲಿ (45) ಮತ್ತು ರೇಣುಕಾ ಅವರ ಪುತ್ರ ಮಂಜುನಾಥ (22) ಮೃತರು. ‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ.
Read More »ಹೆಂಡತಿ ಜೊತೆಗೆ ‘ವಿಡಿಯೋ ಕಾಲ್’ ನಲ್ಲಿ ಮಾತನಾಡುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಮೈಸೂರು : ರೈಲಿನಲ್ಲಿ ಸಂಚರಿಸುವಾಗ ಅಥವಾ ರೈಲು ಹಳಿಯ ಬಳಿ ನಿಂತಿರುವಾಗ ಯಾವಾಗಲೂ ಜಾಗರೂಕರಾಗಿರಬೇಕು ಏಕೆಂದರೆ ಯಾವುದೇ ಸಂದರ್ಭದಲ್ಲಿಯೂ ಕೂಡ ಮೈ ಮರೆತು ಕುಳಿತಿದ್ದರೆ, ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಾಗುತ್ತದೆ. ಅದೇ ರೀತಿ ಇದೀಗ ಮೈಸೂರಿನಲ್ಲಿ ಹೆಂಡತಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ವೇಳೆ ವ್ಯಕ್ತಿ ಸಾವನಪ್ಪಿದ್ದಾನೆ. ವಿಡಿಯೋ ಕಾಲ್ ವೇಳೆ ರೈಲಿಗೆ ಸಿಲುಕಿ ವ್ಯಕ್ತಿ ಸಾವನನಪ್ಪಿರುವ ಘಟನೆ ನಡೆದಿದೆ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ …
Read More »11 ಹಾಸ್ಟೆಲ್‌ಗಳಿಗೆ ನಾಲ್ವರು ವಾರ್ಡನ್
ಹೊಸಕೋಟೆ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ 11 ವಿದ್ಯಾರ್ಥಿ ನಿಲಯಗಳಲ್ಲಿ ಏಳರಲ್ಲಿ ನಿಲಯ ಪಾಲಕರು ಇಲ್ಲ. 11 ಹಾಸ್ಟೆಲ್‌ಗಳ 590 ವಿದ್ಯಾರ್ಥಿಗಳನ್ನು ನಾಲ್ಕೇ ನಿಲಯಪಾಲಕರು ನೋಡಿಕೊಳ್ಳಬೇಕಿದೆ. 11 ವಿದ್ಯಾರ್ಥಿ ನಿಯಲಗಳಲ್ಲಿ ಮೂರು ನಿಲಯಪಾಲಕರು ಇದ್ದಾರೆ. ಒಂದರಲ್ಲಿ ಸಿಬ್ಬಂದಿಯೇ ನಿರ್ವಹಣೆ ಮಾಡುತ್ತಿದ್ದಾರೆ. ಈ ನಾಲ್ವರು 11 ವಿದ್ಯಾರ್ಥಿ ನಿಲಯಗಳನ್ನು ನಿರ್ವಹಣೆ ಮಾಡಬೇಕಿದೆ. 10 ಹಾಸ್ಟೆಲ್‌ಗಳನ್ನು ಕೇವಲ ಮೂವರು ಮಾತ್ರ ನೋಡಿಕೊಳ್ಳಬೇಕಿರುವುದರಿಂದ ಅವುಗಳನ್ನು ಹಂಚಿಕೆ ಮಾಡಿಕೊಂಡಿದ್ದಾರೆ. ಮೂವರಲ್ಲಿ ಒಬ್ಬರಿಗೆ ಐದು …
Read More »ತೇರದಾಳ: ಗ್ರಂಥಾಲಯಗಳಿಗೆ ದಿನಪತ್ರಿಕೆ ಸ್ಥಗಿತ
ತೇರದಾಳ: ತಾಲ್ಲೂಕಿನ ಮೂರು ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಗ್ರಂಥಾಲಯಗಳಿಗೆ ಸರಬರಾಜಾಗುತ್ತಿದ್ದ ಪತ್ರಿಕೆಗಳನ್ನು ನಿಲ್ಲಿಸಿದ್ದರಿಂದ ಸ್ಪರ್ಧಾ ಪರೀಕ್ಷೆಗೆ ಸಿದ್ಧತೆ ನಡೆಸಿದ ಅಭ್ಯರ್ಥಿಗಳು, ಸಾಮಾನ್ಯ ಓದುಗರು ತೊಂದರೆ ಎದುರಿಸುತ್ತಿದ್ದಾರೆ. ತಾಲ್ಲೂಕಿನ ಸಸಾಲಟ್ಟಿ, ಗೋಲಬಾವಿ ಹಾಗೂ ಹನಗಂಡಿ ಗಂಥಾಲಯಗಳಿಗೆ ಅಗತ್ಯ ಇರುವ ದಿನಪತ್ರಿಕೆಗಳ ಬಿಲ್ ಅನ್ನು ಗ್ರಾಮ ಪಂಚಾಯಿತಿಗಳು ಪಾವತಿಸದ್ದರಿಂದ ಪತ್ರಿಕೆಗಳ ಸರಬರಾಜು ಸ್ಥಗಿತಗೊಂಡಿದೆ. ಓದುಗರಿಗಾಗಿ ಹನಗಂಡಿ ಗಂಥಾಲಯದ ಗ್ರಂಥಪಾಲಕ, ತಾವೇ ಪತ್ರಿಕೆಗಳನ್ನು ಖರೀದಿಸಿ ಕೊಡುತ್ತಿದ್ದರೆ, ಸಸಾಲಟ್ಟಿಯವರು ಒಂದು ಪತ್ರಿಕೆ ತರಿಸುತ್ತಿದ್ದಾರೆ. ಇದರಿಂದ ಜನರು ಮಾಹಿತಿ …
Read More »ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ 14 ಜನರ ಮೇಲೆ ಪ್ರಕರಣ ದಾಖಲ
ಕಾಗವಾಡ : ತಾಲೂಕಿನ ಐನಾಪುರ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 14 ಜನರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 1991ರಲ್ಲಿ ಮೂರು ಎಕರೆ ಜಮೀನು ಮಂಜೂರು ಮಾಡಿತ್ತು. ಸರ್ಕಾರ ನೀಡಿದ್ದ ಜಮೀನಿನಲ್ಲೇ ಬಡ ಕುಟುಂಬ ಬದುಕು ಸಾಗಿಸುತ್ತಿತ್ತು. ಆದರೆ ಗ್ರಾಮದ ಕೆಲವರು 20 ಗುಂಟೆ ಜಾಗ ಅತಿಕ್ರಮಣ ಮಾಡಿಕೊಂಡು ಮಹಿಳೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ …
Read More »ಅಮ್ಮಾಜೇಶ್ವರಿ ಕೊಟ್ಟಲಗಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆ ಸಮಾರಂಭಕ್ಕೆ ಇದೇ ಮಾರ್ಚ್ 6 ರಂದು ಆಗಮಿಸಲಿದ್ದಾರೆ:C.M.
ಅಥಣಿ : ಅಥಣಿ ತಾಲೂಕಿನ ಪೂರ್ವ ಭಾಗದ ಸು. 12 ಹಳ್ಳಿಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವ ಅಮ್ಮಾಜೇಶ್ವರಿ ಕೊಟ್ಟಲಗಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆ ಸಮಾರಂಭಕ್ಕೆ ಇದೇ ಮಾರ್ಚ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು ಆಗಮಿಸಲಿದ್ದಾರೆ. ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು …
Read More »ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ರಾಜೀನಾಮೆ.!
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆ.ಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ …
Read More »ಗುತ್ತಿಗೆದಾರರ ಸಮಾವೇಶದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಸಿಎಂ
ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ (Bengaluru) ನಡೆದ ಗುತ್ತಿಗೆದಾರರ ಸಮಾವೇಶದಲ್ಲಿ (Contractor’s Convention) ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಹಾಗೆಂದ ಮಾತ್ರಕ್ಕೆ ಸಿದ್ದರಾಮಯ್ಯ ಅವರು ರಾಜಕೀಯದಿಂದ ನಿವೃತ್ತರಾಗುತ್ತಾರೆ ಎಂದುಕೊಳ್ಳಬೇಡಿ. ಅವರು ಹಾಗೆ ಹೇಳಲು ಕಾರಣವಿದೆ! ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಗುತ್ತಿಗೆದಾರರಿಂದ ಐದು ಪೈಸೆ ಕಮಿಷನ್ ಪಡೆದಿರುವುದು ಸಾಬೀತಾದರೂ ರಾಜಕೀಯ ನಿವೃತ್ತಿ ಘೋಷಿಸುವೆ. 2013ರಿಂದ 2018ರವರೆಗೆ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದೆ. 2023ರ …
Read More »ಬೆಳಗಾವಿಯಲ್ಲೂ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ
ಬೆಳಗಾವಿಯಲ್ಲೂ ಇದೇ ಸ್ಥಿತಿ: ಜಿಲ್ಲೆಯ 506 ಗ್ರಾಪಂ ವ್ಯಾಪ್ರಿಯ 640ಕ್ಕೂ ಅಧಿಕ ಹಳ್ಳಿಗಳಲ್ಲಿ ರೈತರು, ಕೂಲಿಕಾರರಿಗೆ ನರೇಗಾ ಯೋಜನೆ ಆಶ್ರಯವಾಗಿತ್ತು. ಆದರೆ, ನಾಲ್ಕೈದು ತಿಂಗಳಿನಿಂದ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಜನರು ಬೆಂಗಳೂರು, ಹೈದರಾಬಾದ್, ಬೆಳಗಾವಿ, ಮಹಾರಾಷ್ಟ್ರದ ಪುಣೆ, ಮುಂಬೈ, ಕೊಲ್ಲಾಪುರ, ಗೋವಾ ರಾಜ್ಯದ ವಾಸ್ಕೋ, ಪಣಜಿ ಸೇರಿ ಇತರ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ. ಈಗಾಗಲೇ ಹಿಂಗಾರು ಹಂಗಾಮಿನ ಜೋಳ, ಕಡಲೆ, ಸೂರ್ಯಕಾಂತಿ ಸುಗ್ಗಿ ಮುಗಿದಿದೆ. ಕಬ್ಬು ಕಟಾವು …
Read More »