ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ …
Read More »ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ
ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ …
Read More »ಬೀದರ್ | ಲೋಕ ಅದಾಲತ್‌ನಲ್ಲಿ 17,476 ಪ್ರಕರಣ ಇತ್ಯರ್ಥ, ₹7.98 ಕೋಟಿ ಪರಿಹಾರ
ಬೀದರ್: ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 …
Read More »HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …
Read More »ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ …
Read More »ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ತಪ್ಪಿಸಿದ್ದು ನಾನೆ : ಛಲವಾದಿ ನಾರಾಯಣಸ್ವಾಮಿ
ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ …
Read More »ಹುಬ್ಬಳ್ಳಿ | ಕನ್ನಡ ಬೆಳೆಯಲು ಪುಸ್ತಕ ಓದಿ: ಎಸ್.ಎಲ್. ಭೈರಪ್ಪ
ಹುಬ್ಬಳ್ಳಿ: ‘ಪುಸ್ತಕ ಓದದಿದ್ದರೆ ಕನ್ನಡ ಬೆಳೆಯುವುದಿಲ್ಲ. ಪುಸ್ತಕ ಖರೀದಿಸಿ ಓದಬೇಕು’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಸಲಹೆ ನೀಡಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಮತ್ತು ಸಾಹಿತ್ಯ ಪ್ರಕಾಶನವು ಸಾಹಿತ್ಯ ಭಂಡಾರದ ಮ. ಅನಂತಮೂರ್ತಿ ಅವರ ಪುಣ್ಯತಿಥಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪ್ರಕಾಶಕರಿಗೆ ಸನ್ಮಾನ, ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನವೋದಯ ಕಾಲಘಟದಲ್ಲಿ ಹಲವಾರು ಕೃತಿಗಳು ಮೂಡಿಬಂದರೂ, ಸರಿಯಾದ ಪ್ರಕಾಶಕರು …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ
ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೋಲೀಸರು ತಿಳಿಸಿದ್ದಾರೆ. ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Read More »ಜೈಲಿನಲ್ಲಿ ಟಿವಿ ಬೇಕು ಎಂದಿದ್ದ ದಾಸನಿಗೆ, ಕೇವಲ ದೂರ ‘ದರ್ಶನ’ ವಷ್ಟೇ ವೀಕ್ಷಿಸಲು ಅವಕಾಶ : ಖಾಸಗಿ ವಾಹಿನಿಗಳಿಗೆ ಬ್ರೇಕ್!
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಸೆಲ್‌ಗೆ ಟಿವಿ ಸೌಲಭ್ಯ ನೀಡಲಾಗಿದೆ. ಟಿವಿಯಲ್ಲಿ ಕೇವಲ ಒಂದೇ ಒಂದು ಚಾನೆಲ್ ಬರಲಿದೆ. ಇನ್ನು ಖಾಸಗಿ ಚಾನೆಲ್ ನೋಡುವ ಮೂಲಕ ತನ್ನ ಸುದ್ದಿಗಳನ್ನು ತಿಳಿದುಕೊಳ್ಳಬೇಕು ಎಂಬ ನಟನ ಉದ್ದೇಶಕ್ಕೆ ನಿರಾಸೆಯಾಗಿದೆ. ಹೌದು ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪಗೆ ಟಿವಿ ನೋಡುವ ಸೌಲಭ್ಯ ಸಿಕ್ಕಿದೆ. ಹಲವು ದಿನಗಳ ಬೇಡಿಕೆಯ ಬಳಿಕ ಬಳ್ಳಾರಿ ಜೈಲನಲ್ಲಿ …
Read More »ಧಾರವಾಡ ಜಿಲ್ಲಾಸ್ಪತ್ರೆ: ನೋಂದಣಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ
ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್ ಕೇಂದ್ರದ ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …
Read More »