Breaking News

ರಾಷ್ಟ್ರೀಯ

ನಿತಿನ್‌ ಗಡ್ಕರಿ ಹೆದ್ದಾರಿಗಳ ಬಾದ್‌ಶಹಾ:ಸತೀಶ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿ ಗುರುವಾರ ನಡೆದ 36 ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಹಾಡಿ ಹೊಗಳಿದರು.   ‘ನಿತಿನ್‌ ಗಡ್ಕರಿ ಅವರು ಹೆದ್ದಾರಿ ಸಚಿವರಾದ ಮೇಲೆ ಹೆದ್ದಾರಿಗಳ ಅಭಿವೃದ್ಧಿ ಪರ್ವ ಶುರುವಾಗಿದೆ. ಪಕ್ಷಾತೀತವಾಗಿ ಅವರು ಕೆಲಸ ಮಾಡುತ್ತಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬೇರೆಬೇರೆ ಸರ್ಕಾರಗಳು …

Read More »

ಮರಕ್ಕೆ ಕಾರು ಡಿಕ್ಕಿ: ಆರು ಮಂದಿ ಸ್ಥಳದಲ್ಲೇ ಸಾವು,

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಧಾರವಾಡ ಹಾಗೂ ಹಾವೇರಿಯ ಎರಡು ಕುಟುಂಬದವರು ಈ ಕಾರಿನಲ್ಲಿದ್ದರು.   ಧಾರವಾಡದವರಾದ ಕಾರ್‌ ಚಾಲಕ ಶಾರೂಖ್‌ ಪೆಂಡಾರಿ (30), ಇಕ್ಬಾಲ್‌ ಜಮಾದಾರ (50), ಹಾವೇರಿಯವರಾದ ಸಾನಿಯಾ ಲಂಗೋಟಿ (37), ಉಮ್ರಾ ಬೇಗಮ್‌ ಲಂಗೋಟಿ (17), ಶಬನಮ್‌ ಲಂಗೋಟಿ …

Read More »

ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾ ಸ್ಪರ್ಧಿಸಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾಗೆ ಟಿಕೆಟ್‌ ನೀಡುವ ವಿಷಯ ಚರ್ಚೆಯಾಗಿದೆ. ಆದರೆ, ಟಿಕೆಟ್‌ ಕೊಡಲು ನಾವು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿಲ್ಲ. ಅವರು ಚುನಾವಣೆಗೆ ಸ್ಪರ್ಧಿಸಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.   ‘ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಲಕ್ಷ್ಮಣರಾವ್‌ ಚಿಂಗಳೆ, ಗಜಾನನ ಬುಟಾಳಿ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ಕೊಡುತ್ತೇವೆ ಹೊರತು ನಮ್ಮ …

Read More »

ಹೊಸ ರೇಶನ್ ಕಾರ್ಡಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ..!

ರಾಜ್ಯದ್ಯಂತ ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಗುರುವಾರ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದರೆ.   ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ …

Read More »

ರಾಮ ದೇವರೇ ಅಲ್ಲ, ಕೇವಲ ಒಬ್ಬ ಮನುಷ್ಯ ಎಂದ ಉಗ್ರಪ್ಪ!

ವಿಜಯನಗರ: ರಾಮ ದೇವರೇ ಅಲ್ಲ (Rama is not god), ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಮ ಭಕ್ತನೇ ಅಲ್ಲ ಎಂದು ಕಾಂಗ್ರೆಸ್‌ ನಾಯಕ ವಿ.ಎಸ್‌. ಉಗ್ರಪ್ಪ (VS Ugrappa) ಅವರು ವಾಗ್ದಾಳಿ ನಡೆಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ ನಿಂದಿಸಿದ್ದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಪೂಜಿಸುವ ಶ್ರೀರಾಮ ದೇವರಲ್ಲ, ದೇವರಲ್ಲ, ದೇವರಲ್ಲ ಎಂದ …

Read More »

ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ. ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್‌ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಫೆ.22ರ …

Read More »

ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್

ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ …

Read More »

ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿಗಳು,

ಮೈಸೂರು,ಫೆ.18- ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ ಮಳಿಗೆಗಳನ್ನು ನೆಲಸಮಗೊಳಿಸಲಾಗಿದೆ. ಹಲವು ವರ್ಷಗಳಿಂದ ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಒಂದೇ ಸೂರಿನಡಿ ಐದು ಮಳಿಗೆಗಳನ್ನು ನಿರ್ಮಿಸಿ ಅದನ್ನು ಪತ್ರ ಬರಹಗಾರರ ಕಚೇರಿ, ಜೆರಾಕ್ಸ್ ಅಂಗಡಿ ಸೇರಿದಂತೆ ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಬಾಡಿಗೆ ನೀಡಲಾಗಿತ್ತು. ಈ ಅಕ್ರಮ ಕಟ್ಟಡಕ್ಕೆ ಚೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು …

Read More »

ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …

Read More »

ಬೆಂಗಳೂರು: ಚಿರತೆಗಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು. ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ …

Read More »