ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪೋಕ್ಸೊ ಪ್ರಕರಣದಡಿ ಬಂಧಿತನಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮೊಹಮ್ಮದ್ ಸಾದಿಕ್ ಮೀಯಾಬೇಗ್ (39) ಎಂಬುವನನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಬಿ. ಎ. ಮೇಕನಮರಡಿ ತಿಳಿಸಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದರು.
Read More »ರಾಜಿ ಸಂಧಾನ: 27,376 ಪ್ರಕರಣಗಳು ಇತ್ಯರ್ಥ
ಬಾಗಲಕೋಟೆ: ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ 27,376 ಪ್ರಕರಣಗಳನ್ನು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ವಿವಿಧ ನ್ಯಾಯಾಲಯಗಳಲ್ಲಿನ 7,151 ಪೈಕಿ 4,819 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 24,107 ಪೈಕಿ 22,557 ಪ್ರಕರಣಗಳು ಇತ್ಯರ್ಥ ಮಾಡಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ವಿ.ವಿಜಯ ನೇತೃತ್ವದಲ್ಲಿ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ₹25.11 ಕೋಟಿ ಮೊತ್ತದ ಪ್ರಕರಣಗಳಿಗೆ …
Read More »ಗೃಹಲಕ್ಷ್ಮಿ’ ಯೋಜನೆ ನಿತ್ಯ, ನಿರಂತರ : 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್ ಹೇಳಿಕೆ
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ …
Read More »ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ: ಸೋಮಣ್ಣ
ಬೆಳಗಾವಿ: ‘ಪ್ರಯಾಣಿಕರ ಬೇಡಿಕೆಯಂತೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ ವಹಿಸಲಾಗುವುದು’ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ರೈಲ್ವೆ ಅಧಿಕಾರಿಗಳು ಏನು ತಾಂತ್ರಿಕ ಕಾರಣ ಕೊಟ್ಟಿದ್ದಾರೆ ಗೊತ್ತಿಲ್ಲ. ಆಗ ನಾನು ಸಚಿವನಾಗಿರಲಿಲ್ಲ. ಹಳೆಯದ್ದನ್ನೇ ಕೆದಕಿ ಕೆಲಸ ಮಾಡಲಾಗುವುದಿಲ್ಲ. ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸುವ ಕುರಿತು …
Read More »ಶಿಕ್ಷಕರಿಗೆ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ ಪ್ರದಾನ
ಚಿಕ್ಕೋಡಿ: ‘ಶಿಕ್ಷಕರು ಮಕ್ಕಳಿಗೆ ಗುರಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳಲ್ಲಿ ಏಕಾಗ್ರತೆ ಮೂಡಿಸಬೇಕು, ನಗು ನಗುತ್ತ ಪಾಠ ಮಾಡಬೇಕು’ ಎಂದು ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪದ್ಮಶ್ರೀ ರೂಗೆ ಸಲಹೆ ನೀಡಿದರು. ಪಟ್ಟಣದ ಆರ್.ಡಿ ಹೈಸ್ಕೂಲ್‌ನ ಧೋಂಡಿರಾಜ್ ಸಭಾ ಭವನದಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಶನಿವಾರ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ಯನ್ನು ಶಿಕ್ಷಕರಿಗೆ ವಿತರಿಸಿ ಅವರು ಮಾತನಾಡಿದರು. ಶಿಕ್ಷಕ ಉಮೇಶ ತೋಟದ ಮಾತನಾಡಿ, ‘ಶಿಕ್ಷಕರನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಹೀಗಾಗಿ …
Read More »ಕಪ್ಪಗಿದ್ದಾಳೆ ಎಂದು ನಿಂದಿಸಿದ ಪತಿ, ಮನನೊಂದು ನೇಣಿಗೆ ಶರಣಾದ ನವವಿವಾಹಿತೆ!
ಚಿಕ್ಕಬಳ್ಳಾಪುರ : ಪತ್ನಿ ಕಪ್ಪಗಿದ್ದಾಳೆ ಎಂದು ನಿಂದಿಸಿದ್ದು ಅಲ್ಲದೆ, ತವರು ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಗಾಂಧಿನಗರದಲ್ಲಿ ನಡೆದಿದೆ. ಬಿಂದುಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು. ಗಾಂಧಿನಗರದ ನಿವಾಸಿ ಟೈಲರ್ ವೃತ್ತಿಯ ಕೆ.ಬಿ.ದೇವರಾಜು ಅವರಿಗೆ ಬಿಂದುಶ್ರೀ ಏಕೈಕ ಪುತ್ರಿ. ಇವರನ್ನು ಆವಲಹಳ್ಳಿ ಸಮೀಪದ ಹಿರಂಡಹಳ್ಳಿ ಗ್ರಾಮದ ಮುನಿರಾಜು ಎಂಬವರ ಮಗ ಎಚ್.ಎಂ.ರಾಘವೇಂದ್ರ ಅವರಿಗೆ …
Read More »ರಾಗಿಯಲ್ಲಿ ಮೂಡಿದ ಮೋದಿ ಚಿತ್ರ, ದಾಖಲೆ ಬರೆದ 13ರ ಬಾಲಕಿ
ಚೆನ್ನೈ,ಸೆ.16- ಹದಿಮೂರು ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ 800 ಕೆಜಿ ತೂಕದ ರಾಗಿಯನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು 12 ಗಂಟೆಗಳ ಕಾಲ ಬಿಡುವಿಲ್ಲದಂತೆ ಚಿತ್ರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾನೆ.ಪ್ರೀಸ್ಲಿ ಶೆಕಿನಾ ಅವರು ನಾಳಿನ ಅವರ ಜನದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ವಿಶ್ವದ ಅತಿದೊಡ್ಡ ರಾಗಿ ಪೇಂಟಿಂಗ್ ಅನ್ನು ಅನಾವರಣಗೊಳಿಸಿದರು. ಪ್ರೀಸ್ಲಿ ಶೆಕಿನಾ ಚೆನ್ನೈನ ಕೋಲ್ಪಾಕ್ಕಂ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಾಪ್ ಸೆಲ್ವಂ ಮತ್ತು ಸಂಕೀರಾಣಿ ಅವರ …
Read More »HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ
ಬೆಂಗಳೂರು,ಸೆ.16- ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. ಸೆಪ್ಟೆಂಬರ್ 18ರಂದು ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ …
Read More »ಇನ್ಮುಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಹಣ ಸಿಗಲ್ಲ?
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಪ್ರಮುಖ 5 ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ ಖಾತೆಗೆ 2,000 ರೂಪಾಯಿ ಜಮೆ ಮಾಡುತ್ತಾ ಬಂದಿದೆ. ಆದರೆ, ಇದೀಗ 1.78 ಲಕ್ಷ ಮಹಿಳೆಯರಿಗೆ ಹಣ ಪಾವತಿಗೆ ತಡೆ ಹಾಕಲಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ತಡೆ ಹಾಕಲಾಗಿದೆ. …
Read More »ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ
ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ. ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು …
Read More »