Breaking News

ರಾಷ್ಟ್ರೀಯ

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ

ನವದೆಹಲಿ, (ಏಪ್ರಿಲ್ 23): ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ (Kashmir) ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ ಸಂಬಂಧ ಇಂದು (ಏಪ್ರಿಲ್ 23) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ …

Read More »

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

ಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ – ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ‍್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ …

Read More »

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು. ನಂತರ …

Read More »

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ‍್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ …

Read More »

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …

Read More »

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …

Read More »

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …

Read More »

*ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ*

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ* *ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಂಬರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಈ ಕುರಿತು ನಿನ್ನೆ ಅಷ್ಟೇ ಜರುಗಿದ ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ …

Read More »

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ …

Read More »