ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು. ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. …
Read More »ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.
ಮಂಗಳೂರು (Mangaluru): ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ (congress) ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ …
Read More »ಹಿತನನ್ನೇ ಕೊಂದ ಗೆಳೆಯರು; ಮೂವರು ಆರೋಪಿಗಳು ಅರೆಸ್ಟ್
ಕಲಬುರ್ಗಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ರೋಹನ್ ಕೊಲೆಯಾದ ದುರ್ದೈವಿ. ನಾಲ್ವರು ಗೆಳೆಯರು ಸೇರಿ ರೋಹನ್ ನನ್ನು ಚಾಕುವಿನಿಂದ ಇರುದು ಹತ್ಯೆಗೈದಿದ್ದರು. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುನೀಲ್ ಸಿಂಗ್, ಭಗತ್ ಸಿಂಗ್, ಸೊಹೆಲ್ ಬಂಧಿತ ಆರೋಪಿಗಳು. ಓರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ರೋಹನ್ …
Read More »ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್
ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ …
Read More »ಕನ್ನಡ ನಾಮಫಲಕ ಅಳವಡಿಸಿಕೊಳ್ಳದ ಅಂಗಡಿಗಳಿಗೆ ಬೀಗ
ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು. ವಲಯ …
Read More »ಕಲ್ಲಂಗಡಿ ತಿನ್ನಲು ಅಂಗಡಿಗೆ ಬಂದ ಕಾಡಾನೆ,
ಆನೇಕಲ್, ಫೆ.17: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿಕಾಡಾನೆಗಳ(Wild Elephant) ಹಾವಳಿ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನ ಆನೇಕಲ್ ತಾಲೂಕಿನ ಬಳಿ ಇರುವ ತಮಿಳುನಾಡಿಗೆ (Tamil Nadu) ಡೆಂಕಣಿಕೋಟೆ ಗ್ರಾಮಕ್ಕೆ ಒಂಟಿ ಸಲಗ ನುಗ್ಗಿದೆ. ಮುಂಜಾನೆ 5 ಗಂಟೆಯ ಸುಮಾರಿಗೆ ಗ್ರಾಮದ ಸುತ್ತಲೂ ಅಡ್ಡಾಡಿದ ಒಂಟಿ ಸಲಗ, ರಸ್ತೆ ಬದಿಯಲ್ಲಿ ಕಲ್ಲಂಗಡಿ ಅಂಗಡಿ ಬಳಿ ಹೋಗಿದೆ. ಈ ವೇಳೆ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ ಅಂಗಡಿ ವ್ಯಾಪಾರಸ್ಥರಾದ ದಂಪತಿಗೆ ಇತರೆ ಗ್ರಾಮಸ್ಥರು ಬೊಬ್ಬೆ ಹಾಕಿ …
Read More »ಅಭಿವೃದ್ಧಿ ಬೇಕಾ? ಧರ್ಮ ಪ್ರಚೋದನಾಕಾರಿ ಮಾತುಗಳು ಬೇಕಾ; ಇದನ್ನು ಜನರ ಮುಂದಿಡುತ್ತೇವೆ: ದಿನೇಶ್ ಗುಂಡೂರಾವ್
ಮಂಗಳೂರು, ಫೆ.17: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವದಿನೇಶ್ ಗುಂಡೂರಾವ್(Dinesh Gundu Rao) ಕೇಳಿದರು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಆಯೋಜಿಸಿದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿ ನಾವು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಆಗಲಿಲ್ಲ. ಇದನ್ನ ಒಪ್ಪಿಕೊಳ್ಳುತ್ತೇವೆ. ಆದರೆ …
Read More »ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ
ಕಲಬುರಗಿ: ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆ (Siddha Siri Ethanol and Power). ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕನೆಂದು ಗುರುತಿಸಿಕೊಳ್ಳುವ ಮತ್ತುವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಇದರ ಮಾಲೀಕ. ಬಿಜೆಪಿ ನಾಯಕರು (BJP leaders) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವ ಸಂಗತಿ ನಮಗೆಲ್ಲ ಗೊತ್ತಿದೆ. ಆದರೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯು ಪಾಟೀಲ್ ಮತ್ತು ಅವರ ಕಾರ್ಖಾನೆ …
Read More »ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ
ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್ ಸಿಗ್ನಲ್ ಕೊಟ್ಟ ಸಿಎಂ ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ …
Read More »ಇಂದು ‘ದೆಹಲಿ ವಿಧಾನಸಭೆ’ಯಲ್ಲಿ ‘ಸಿಎಂ ಕೇಜ್ರಿವಾಲ್’ರಿಂದ ‘ವಿಶ್ವಾಸಮತ ಯಾಚನೆ’
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆಬ್ರವರಿ 16) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ್ದಾರೆ. ಎಎಪಿ ಶಾಸಕರನ್ನ ಬೇಟೆಯಾಡಲು ಮತ್ತು ತಮ್ಮ ಸರ್ಕಾರವನ್ನ ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ ಕೆಲವು ದಿನಗಳ ನಂತರ ಈ ಪ್ರಕಟಣೆ ಹೊರಬಿದ್ದಿದೆ. “ನಾನು ಇಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ತರುತ್ತೇನೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಈ ಕ್ರಮದ ಹಿಂದಿನ ಕಾರಣವನ್ನು ಅವರು ನಿರ್ದಿಷ್ಟಪಡಿಸಲಿಲ್ಲ.
Read More »
Laxmi News 24×7