ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ(Police constable) ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕಾನ್ಸ್ಟೇಬಲ್ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ …
Read More »ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ
ವಿಜಯಪುರ,: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದನಗರದಸಿದ್ದೇಶ್ವರ ಜಾತ್ರಾ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ. ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ …
Read More »ಕೆಎಸ್ಆರ್ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ
ಬೆಂಗಳೂರು, ಜ.8: ನಗರದಿಂದ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆಕೆಎಸ್ಆರ್ಟಿಸಿ (KSRTC)ಸ್ಪೆಷಲ್ ಬಸ್ ಮೂಲಕ ತೆರಳಿದ್ದ ಓಂ ಶಕ್ತಿ ಮಾಲಾಧಾರಿಗಳು ಬಸ್ ಸೋರಿಕೆಯಿಂದ ಪರದಾಡುವಂತಾಗಿದೆ. ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ. ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಆದರೆ, ಬೆಂಗಳೂರಿನಿಂದ ಓಂ ಶಕ್ತಿ ದೇವಾಲಯಕ್ಕೆ ಭಕ್ತರು ಹೋಗಿದ್ದ ಕೆಎಸ್ಆರ್ಟಿಸಿ ಬಸ್ ಗುಜರಿಯಾಗಿದ್ದರಿಂದ ಮಳೆ ನೀರು ಸೋರಿಕೆಯಾಗುತ್ತಿದೆ. ಬಸ್ ಒಳಗೆ ಮಳೆ …
Read More »ನನಗೆ ನನ್ನ ಇಬ್ಬರು ಹೆಂಡ್ತೀರು ಬೇಕು; ಮದ್ಯದ ಅಮಲಿನಿಲ್ಲಿ ಮಾನ್ವಿ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ವ್ಯಕ್ತಿ
ರಾಯಚೂರು, : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆರಾಯಚೂರು(Raichur) ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಊಟದ ಹೊತ್ತಲ್ಲಿ ಎಂಟ್ರಿ ಕೊಟ್ಟಿದ್ದ ಆತನ ಕಿರಿಕ್ಗೆ ಖಾಕಿ ಪಡೆ ಏನ್ ಮಾಡಬೇಕು ಎಂದು ತಿಳಿಯದೇ ತಲೆ ಮೇಲೆ ಕೈ ಹೊತ್ತು ಕೂತಿದ್ದರು. ಮದಿರೆಯ ಮತ್ತಲ್ಲಿ ಹಾವಳಿ ಇಟ್ಟಿದ್ದವನ ಡಿಮ್ಯಾಂಡ್ಗೆ …
Read More »ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹೋಗುವಾಗ ಮತ್ತೊಂದು ದುರ್ಘಟನೆ! ಯುವಕನ ಸ್ಥಿತಿ ಗಂಭೀರ
ಗದಗ:ರಾಕಿಂಗ್ ಸ್ಟಾರ್ ಯಶ್ (Yash)ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ …
Read More »ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್ಟೇಬಲ್ನಿಂದ ವಂಚನೆ
ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್ಟೇಬಲ್ನಿಂದ ವಂಚನೆ ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್ ಕಾರ್ತಿಕ್ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್ ರಾಜು ದೂರು ನೀಡಿದ್ದಾರೆ. ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ …
Read More »ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ
ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು. ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು. ಧಾರವಾಡದ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ …
Read More »ಕೆಆರ್‌ಎಸ್‌ಗೆ ಧಕ್ಕೆ ಆದರೆ ಆಗುವ ಅನಾಹುತದ ಅರಿವಿದೆಯೇ? ಹೈ ಕೋರ್ಟ್ ಪ್ರಶ್ನೆ, ಗಣಿಗಾರಿಕೆ ನಿಷೇಧ!
ಬೆಂಗಳೂರು : ಕೆಆರ್‌ಎಸ್ ಆಣೆಕಟ್ಟಿಗೆ(KRS dam) ಹಾನಿಯಾದರೆ ಆಗುವ ಅನಾಹುತದ ಅರಿವಿದೆಯೇ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ(Justice prasanna B Varale) ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೆಆರ್‌ಎಸ್ ಸುತ್ತ ಗಣಿಗಾರಿಕೆ ವಿಚಾರವಾಗಿ ಜಿಲ್ಲಾಧಿಕಾರಿಗಳು ವಿಧಿಸಿದ್ದ ಷರತ್ತು ವಿರೋಧಿಸಿ ಗಣಿ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಕೆಆರ್‌ಎಸ್ ಡ್ಯಾಮ್ ಸುತ್ತ …
Read More »ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ …
Read More »ಭಾರೀ ಮಳೆಗೆ 9ರ ಬಾಲಕಿ ಬಲಿ
ತಮಿಳುನಾಡು: ಭಾರೀ ಮಳೆಗೆ (Rain) ಮನೆಯ ಗೊಡೆ ಕುಸಿದು ಬಾಲಕಿ (Girl) ಮೃತಪಟ್ಟ ಘಟನೆ ತಮಿಳುನಾಡಿನ (Tamil Nadu) ತಿರುವಾರೂರ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮೋನಿಷಾ (9) ಎಂದು ಗುರುತಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆಯ ಒಂದು ಭಾಗ ಬಿದ್ದಿದೆ. ಈ ವೇಳೆ ಮನಿಷಾ ಸ್ಥಳದಲ್ಲೇ ಮೃತಪಟ್ಟರೇ, ಆಕೆಯ ಸಹೋದರ ಮೋಹನ್ ದಾಸ್ (12) ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮೋಹನ್ ದಾಸ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದಾಗಿ …
Read More »