Breaking News

ರಾಷ್ಟ್ರೀಯ

ಬಿಜೆಪಿಯವರದ್ದು ಮೂರು ಅಜೆಂಡಾ ಇದೆ: ಮಂಕಾಳ ವೈದ್ಯ

ಕಾರವಾರ: ಬಿಜೆಪಿಯವರದ್ದು ಮೂರು ಅಜೆಂಡಾ ಇದೆ. ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಸಚಿವ ಮಂಕಾಳ ವೈದ್ಯ (Mankal Vaidya) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು (BJP) ರಾಜಕಾರಣಕ್ಕೋಸ್ಕರ (Politics) ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರದ್ದು ಬೋಗಸ್ ಭಕ್ತಿ. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು …

Read More »

ಕಾಂಗ್ರೆಸ್‌ನ ರಾಮ ವಿರೋಧಿ ತಂತ್ರ ಉಲ್ಟಾ ಹೊಡೆದಿದೆ – ಬೊಮ್ಮಾಯಿ ಟೀಕೆ

ಬೆಂಗಳೂರು : ರಾಮ ಮಂದಿರ ಉದ್ಟಾಟನೆ(Ram Mandir Inauguration) ದಿನ ಹತ್ತಿರ ಬರುತ್ತಿದ್ದಂತೆ ರಾಮ ವಿರೋಧಿ ನೀತಿ (Anti Ram Strategies)ಅನುಸರಿಸುತ್ತಿದ್ದ ಕಾಂಗ್ರೆಸ್‌ಗೆ ಈಗ ಜನ ತಮ್ಮನ್ನ ವಿರೋಧಿಸುತ್ತಿದ್ದಾರೆ ಎಂಬುದು ಅರ್ಥವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಹೊಟೇಲ್‌ ರಮಾಡದಲ್ಲಿ ಲೋಕಸಭೆ ಚುನಾವಣೆ ವಿಚಾರವಾಗಿ ಸಭೆ ನಡೆದಿದ್ದು , ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ರಾಜಕೀಯದ ಬಗ್ಗೆ …

Read More »

ಸ್ವಪಕ್ಷದ ವಿರುದ್ಧ ಆರೋಪಗಳ ಬೆನ್ನಲ್ಲೇ ಅಮಿತ್ ಶಾ, ನಡ್ಡಾ ಭೇಟಿಯಾಗಿ ಬಂದ ಯತ್ನಾಳ್

ವಿಜಯಪುರ, (ಜನವರಿ, 08): ಈ ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಕೊರೋನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ಅಗಿದೆ ಎನ್ನುವ ಗಂಭೀರ ಆರೋಪ ಮಾಡಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangpuda Patil Yatnal), ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯ …

Read More »

ಉಪ ತಹಶೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಉಪ ತಹಶೀಲ್ದಾರ್ ಕಿರುಕುಳ ಆರೋಪ ಕೇಳಿ ಬಂದಿದ್ದು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ವಿಕಲಚೇತನ ಪರಮೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಉಪ ತಹಶೀಲ್ದಾರ್ ಶಿವಕುಮಾರ್ ವಿರುದ್ದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಆರೋಪ ಮಾಡಿ ವಿಷ ಕುಡಿದು ವಿಕಲಚೇತನ ಪರಮೇಶ್ ಆತ್ಮಹತ್ಯೆಗೆ …

Read More »

ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಕೃಷ್ಣಪ್ಪನ ಕೊಪ್ಪಲು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಮೂಲದ ಅಮಾನುಲ್ಲಾ ಖಾನ್(60) ಮುನಾವರ್(50) ಮೃತ ದುರ್ದೈವಿಗಳು. ಅಪರಿಚಿತ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌; ಬೆಂಕಿ ಹಚ್ಚಿದವರು ಅಮಾಯಕರಾ?: ಬೊಮ್ಮಾಯಿ

ಹಾವೇರಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ (DJ Halli, KG Halli Riots) ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಅಮಾಯಕರು ಎಂಬ ನಿರ್ಣಯಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಕ್ರೋಶ ಹೊರಹಾಕಿದ್ದಾರೆ.   ನಗರದಲ್ಲಿ ಮಾತನಾಡಿದ ಅವರು, ಎರಡು ಪೊಲೀಸ್​ ಠಾಣೆಗಳಿಗೆ ಬೆಂಕಿ ಹಚ್ಚಿದವರು ಅಮಾಯಕರಾ? ಸಾರ್ವಭೌಮತ್ವಕ್ಕೆ ಸವಾಲು ಎಸೆಯುವ ಶಕ್ತಿಗೆ ಅಮಾಯಕರು ಅಂತಾರಾ ಎಂದು ಪ್ರಶ್ನಿಸಿದ್ದಾರೆ. ಪೊಲೀಸರ ಕ್ರಮ …

Read More »

ನಾನು ಕೇಂದ್ರ ಮಂತ್ರಿ ಆಗಲ್ಲ, ನನ್ನ ಗುರಿಯೇ ಬೇರೆ:H.D.K.

ಬೆಂಗಳೂರು: ನಾನು ಕೇಂದ್ರ ಮಂತ್ರಿ (Union Minister) ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದರು.   ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ …

Read More »

ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಬಾಲಕಿ. ದೀಕ್ಷಾ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈಕೆ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಸೋಮವಾರ ಲ್ಯಾಬ್ ಪರೀಕ್ಷೆಯಿತ್ತು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸ್‌ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ. ಪುತ್ತೂರು …

Read More »

ಹಿಂದೂ ಮುಸ್ಲಿಂ ಅಣ್ಣ ತಮ್ಮಂದಿರ ತರಹ ಇರಬೇಕು ಎಂದರೆ ಎಲ್ಲೆಲ್ಲಿ ದೇವಾಲಯ ಕೆಡವಿ ಮಸೀದಿ ಕಟ್ಟಿದ್ದೀರೋ ಅದನ್ನು ಕಿತ್ತು ಬಿಸಾಕಿ.’ – ಈಶ್ವರಪ್ಪ

ಬೆಳಗಾವಿ: ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಿ ಬಾಬರ್ ಮಸೀದಿ ಎನ್ನುತ್ತಿದ್ದರು. ಈಗ ವಿಶ್ವದಲ್ಲಿ ಮುಸ್ಲಿಮರಿಗೆ ತಾಕತ್ತಿದ್ದರೆ ದೇಗುಲ ಕೆಡವಿ ಮಸೀದಿ (Mosque) ಕಟ್ಟಲಿ ನೋಡೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.   ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈಗ ಮುಸ್ಲಿಮರು ತಾಕತ್ತಿದ್ದರೆ ದೇಗುಲಗಳನ್ನು ಕೆಡವಿ ಮಸೀದಿ ಕಟ್ಟಲಿ ನೋಡೋಣ. ನಾನು ಹೀಗೆ ಯಾಕೆ …

Read More »

ಐಟಿ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯ’: ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಈಗ, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಅಡಿಯಲ್ಲಿ ನೀಡಲಾದ ವಿನಾಯಿತಿಗಳನ್ನು ಕೊನೆಗೊಳಿಸುವ ಮೂಲಕ ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳನ್ನು ಕಾಯಿದೆ1946ರ ಅಡಿ ತನ್ನ ವ್ಯಾಪ್ತಿಗೆ ತರಲು ರಾಜ್ಯ ಕಾರ್ಮಿಕ ಇಲಾಖೆ …

Read More »