Breaking News

ರಾಷ್ಟ್ರೀಯ

ನಾಗರಪಂಚಮಿಗೆ ಮುಸ್ಲಿಂ ಬಾಂಧವರಿಂದ ನಾಗಸ್ವರ ವಾದನ; ಕರಾವಳಿಯಲ್ಲಿ ಹೀಗೊಂದು ಸೌಹಾರ್ದತೆ

ಉಡುಪಿ: ಸಾಮಾನ್ಯವಾಗಿ ನಾಗಾರಾಧನೆಯಲ್ಲಿ ತೊಡಗುವವರು ಬಹುತೇಕ ಹಿಂದೂಗಳು ಮಾತ್ರ. ಅಲ್ಲೊಂದು ಇಲ್ಲೊಂದು ಇದಕ್ಕೆ ಅಪವಾದ ಇರುವುದನ್ನು ನಾವು ಕಾಣುತ್ತೇವೆ. ಉಡುಪಿ ಜಿಲ್ಲೆಯ ತೆಂಕ ಎರ್ಮಾಳ್ ಎಂಬಲ್ಲಿಯ ಅಮೀನ್ ಕುಟುಂಬಸ್ಥರ ಮೂಲಸ್ಥಾನದಲ್ಲಿ ಮೂವರು ಮುಸ್ಲಿಂ ಬಾಂಧವರು ನಾಗಸ್ವರ ನುಡಿಸುತ್ತಿರುವುದು ವಿಶೇಷವಾಗಿದೆ. ತಲೆತಲಾಂತರಗಳಿಂದ ಈ ಮುಸ್ಲಿಂ ಸಮುದಾಯದ ಜನರು ಲಯಬದ್ಧವಾದ ನಾಗಸ್ವರವನ್ನು ನುಡಿಸುತ್ತಾ ಬಂದಿದ್ದಾರೆ. ಇಲ್ಲಿನ ಮೂವರು ಮುಸ್ಲಿಮರು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಈ ನಾಗಸ್ವರ ಪೂಜೆ ನಡೆಸುತ್ತಾ ಬರುವ ಮೂಲಕ ಕರಾವಳಿಯ …

Read More »

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಸ್ಕೆಚ್; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ ಮೇಲೆ ಆರೋಪಿ ಲಕ್ಷ್ಮಿ (ಲಿಂಗಪ್ಪನ ಹೆಂಡತಿ) ಅವರ ತಾಯಿ ಮಾಲಮ್ಮ …

Read More »

ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ

ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಬೆಳಗಾವಿ ಮಹಾನಗರ ಪಾಲಿಕೆಯಿಂದ ಕಾಮಗಾರಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ 27 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಆಗಸ್ಟ್ 27 ರಿಂದ ಆರಂಭಗೊಳ್ಳಲಿರುವ ಗಣೇಶೋತ್ಸವದ ಹಿನ್ನೆಲೆ ಮೆರವಣಿಗೆ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ಮಹಾಪೌರರು ಮತ್ತು ಉತ್ತರ ಶಾಸಕರು ಚಾಲನೆಯನ್ನು ನೀಡಿದರು. ಬೆಳಗಾವಿಯ ಗಣೇಶೋತ್ಸವದ ಮೆರವಣಿಗೆ ಮಾರ್ಗದಲ್ಲಿ ಉಂಟಾದ ತೆಗ್ಗುಗಳನ್ನು ಮುಚ್ಚಿ …

Read More »

ನರಸಿಂಹವಾಡಿಯ ದತ್ತ ಮಂದಿರ ಜಲಾವೃತ

ನರಸಿಂಹವಾಡಿಯ ದತ್ತ ಮಂದಿರ ಜಲಾವೃತ ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ದತ್ತ ಮಂದಿರ ಜಲಾವೃತ ವಾಗಿದೆ. ಮಹಾರಾಷ್ಟ್ರದ, ಕರ್ನಾಟಕ ರಾಜ್ಯದ ಆರಾಧ್ಯದೈವ ಆಗಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿ ಸಂಗಮ‌ ಸ್ಥಾನದಲ್ಲಿರುವ ದತ್ತ ಮಂದಿರ ಜಲಾವೃತವಾಗಿದೆ.ಎದೆ ವರೆಗೂ ನೀರಿದ್ರೂ ದೇವಸ್ಥಾನಕ್ಕೆ ಭಕ್ತರು ಪ್ರದಕ್ಷಿಣೆ ಹಾಕುತ್ತಿದ್ದಾರೆ.

Read More »

ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿ

. ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿಸಿದೆವು. ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಕ್ಕೆ ಹೆಚ್ಚುವರಿ ರಸಗೊಬ್ಬರವನ್ನು ಒದಗಿಸಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜೊತೆಗೆ, ರಾಜ್ಯಕ್ಕೆ ಮತ್ತಷ್ಟು ರಸಗೊಬ್ಬರದ ಅವಶ್ಯಕತೆ ಇದ್ದರೆ, ಅದನ್ನು ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು. …

Read More »

MRPಗಿಂತ ಅಧಿಕ ಬೆಲೆಗೆ ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದು

ಕಲಬುರಗಿ: ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು MRPಗಿಂತ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದುಪಡಿಸಿದ್ದಾರೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು. ನಿಗದಿತ ಬೆಲೆಗಿಂತ ಹೆಚ್ಚಿನ …

Read More »

ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ

ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. …

Read More »

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.

ಗಂಗಾವತಿ (ಕೊಪ್ಪಳ) : ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ, ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆಯ ಗಂಗಾವತಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಈ ಆದೇಶ ಹೊರಡಿಸಿದ್ದು, ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ …

Read More »

ಬೆಂಗಳೂರು: ಗಸ್ತಿನಲ್ಲಿದ್ದ ಕಾನ್ಸ್‌ಟೇಬಲ್ ಮೇಲೆ ಡ್ಯಾಗರ್‌ನಿಂದ ಹಲ್ಲೆ; ಅಪ್ರಾಪ್ತ ಸಹಿತ ನಾಲ್ವರ ಬಂಧನ

ಬೆಂಗಳೂರು: ಪೊಲೀಸ್​​​ ಹೆಡ್​​ ಕಾನ್ಸ್‌ಟೇಬಲ್​​ ಒಬ್ಬರ ಮೇಲೆ ಕಿಡಿಗೇಡಿಗಳು ಡ್ಯಾಗರ್‌ನಿಂದ ಹಲ್ಲೆಗೈದಿರುವ ಘಟನೆ ಚಾಮರಾಜಪೇಟೆಯ ವಾಲ್ಮೀಕಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಜುಲೈ 26ರಂದು ರಾತ್ರಿ 9:30ರ ಸುಮಾರಿಗೆ ಘಟನೆ ನಡೆದಿದೆ. ಹೆಡ್ ಕಾನ್ಸ್‌ಟೇಬಲ್ ಸಂತೋಷ್​ ಅವರ ಎಡಗೈಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತಬ್ರೇಜ್, ಅಬ್ರೇಜ್, ಸಲ್ಮಾನ್ ಪಾಶಾ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮದ್ಯದ ನಶೆಯಲ್ಲಿ ಹಲ್ಲೆ: …

Read More »

ಕಮಲಾಪುರದ ಮೃಗಾಲಯದಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಇನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿದ್ದಾನೆ.

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.ಎರಡು ತಿಂಗಳಲ್ಲಿ ಎರಡು ಹುಲಿ ಸಾವು: ಕಳೆದ ತಿಂಗಳು ಜೂನ್​ನಲ್ಲಿ ಇದೇ ಮೃಗಾಲಯದಲ್ಲಿ ದೇವಿ ಹೆಸರಿನ ಹೆಣ್ಣು ಹುಲಿ ವಯೋಸಹಜ …

Read More »