Breaking News

ರಾಷ್ಟ್ರೀಯ

ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೊಳಿಸಲು ವಿಫಲವಾದಾಗ ಹೋರಾಟ ಅನಿವಾರ್ಯ: ಬೊಮ್ಮಾಯಿ

ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ …

Read More »

ಬೆಂಗಳೂರು: ಸುರಂಗ ಮಾರ್ಗದೊಳಗೆ ರೈಲುಗಳ ಸಂಚಾರದಿಂದ ಉಂಟಾಗುವ ಕಂಪನದಿಂದ ರಕ್ಷಿಸಲು ಸುರಕ್ಷತಾ ವ್ಯವಸ್ಥೆ

ಬೆಂಗಳೂರು: ಸುರಂಗ ಮಾರ್ಗ (Underground) ಹಳಿಗಳ ಮೇಲೆ ಚಲಿಸುವ ರೈಲುಗಳ ಕಂಪನದಿಂದ ಸುತ್ತಮುತ್ತಲಿನ ಕಟ್ಟಡಗಳು ಮತ್ತು ರಚನೆಗಳ ಮೇಲೆ ಹಾನಿಯುಂಟಾಗದಂತೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳಿಗಳಲ್ಲಿ ವಿಶೇಷ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಲು ಮುಂದಾಗಿದೆ. 13.8 ಕಿಮೀ ನೆಲದೊಳಗೆ ಕಾರಿಡಾರ್ನಲ್ಲಿ ಡೈರಿ ಸರ್ಕಲ್ನಿಂದ ಹಂತ-2 ರ ಪಿಂಕ್ ಲೇನ್ ನ ನಾಗವಾರವರೆಗಿನ 9 ಕಿಲೋಮೀಟರ್ನಲ್ಲಿ ಇದನ್ನು ಯೋಜಿಸಲಾಗಿದೆ. ಬಿಎಂಆರ್ ಸಿಎಲ್ ನ ಯೋಜನೆಗಳು ಮತ್ತು ಯೋಜನಾ ನಿರ್ದೇಶಕ …

Read More »

ಮತ್ತೆ ಮುನ್ನೆಲೆಗೆ ಡಿಸಿಎಂ ಹುದ್ದೆ.ಸತೀಶ ಜಾರಕಿಹೊಳಿ ಹೇಳಿಕೆಗೆ ಪರಮೇಶ್ವರ ಸಾಥ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೂವರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಪಾದಿಸಿದ್ದಾರೆ. ಇವರ ಪ್ರತಿಪಾದನೆಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬೆಂಬಲ ಸೂಚಿಸಿದ್ದಾರೆ.   ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ, ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, …

Read More »

ಅವರಿಗೆ ವಿಷ ಕೊಟ್ಟು ನಾವೇಕೆ ಪಾಪ ಕಟ್ಕೊಬೇಕು: ಕಾರಜೋಳ ಹೀಗೆ ಹೇಳಿದ್ದೇಕೆ?

ಧಾರವಾಡ: ಕಾಂಗ್ರೆಸ್ನಲ್ಲಿಯೂ ಅತೃಪ್ತರಿದ್ದಾರೆ. ಆ ಪಕ್ಷದ ಯಾವ ಶಾಸಕರನ್ನೂ ನಾವು ಸಂಪರ್ಕಿಸಿಲ್ಲ. ಹಾಲು ಕುಡಿದು ಸಾಯ್ತಾರೆ ಅಂತ ಗೊತ್ತಿದೆ. ಹೀಗಿರುವಾಗ ಅವರಿಗೆ ವಿಷ ಯಾಕೆ ಕೊಟ್ಟು ಪಾಪ ಕಟ್ಕೊಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾರ್ಮಿಕವಾಗಿ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ನಲ್ಲಿ 40 ಕ್ಕಿಂತ ಹೆಚ್ಚು ಶಾಸಕರು ಅತೃಪ್ತರಾಗಿದ್ದಾರೆ. ಬಿಆರ್ ಪಾಟೀಲ್, ಬಸವರಾಜ್ ರಾಯರೆಡ್ಡಿ ಅಂಥವರು ಅಸಮಾಧಾನವನ್ನು ಹಾಕಿದ್ದಾರೆ. …

Read More »

ʼಇಂತಹ ಶಿಕ್ಷಣ ಸಚಿವರು ಬೇಕೇʼ.ಮಧು ಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡಕ್ಕೆ ಗುರಿಯಾಗಿರುವ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಮಧು ಬಂಗಾರಪ್ಪ ಶಿಕ್ಷಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿ, ರಾಜ್ಯದ ಶಿಕ್ಷಣ ಇಲಾಖೆಯನ್ನು ಹಳ್ಳ ಹಿಡಿಸಿದ್ದೇ ಅವರ ದೊಡ್ಡ ಸಾಧನೆ ಎಂದು ಟೀಕಿಸಿದೆ.   ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪ ದೋಷಿ ಎಂದು ಬೆಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. ಸಂಸದರು/ಶಾಸಕರನ್ನು ಒಳಗೊಂಡ ಪ್ರಕರಣಗಳ ವಿಶೇಷ ನ್ಯಾಯಾಲಯವು ದೂರುದಾರರಾದ ರಾಜೇಶ್ …

Read More »

ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಗುರುವಾರ ಬೆಳಗ್ಗೆ ಹಲಸುರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ …

Read More »

ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ: ಯತ್ನಾಳ್​ಗೆ ಪ್ರಲ್ಹಾದ್ ಜೋಶಿ ಪಾಠ

ದಾವಣಗೆರೆ, ಡಿಸೆಂಬರ್ 29: ‘ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿ ಅಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎಂದು ಅನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ. ಅದನ್ನು ಹೇಳಿಕೆ ಕೊಡುವುದು ಸರಿ ಅಲ್ಲ’ ಎಂದು ಶಾಸಕ ಬಸನಗೌಡ ಯತ್ನಾಳ್​​ಗೆ (Basangouda Patil Yatnal) ಕೇಂದ್ರ ಪ್ರಲ್ಹಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಪರ ಇರುವವರಿಗೆ ಮಾತ್ರ ಸ್ಥಾನ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ …

Read More »

ಯತ್ನಾಳ್ ಉಚ್ಚಾಟನೆಗೆ ಹೆಚ್ಚಿದ ಒತ್ತಡ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಎಂದು ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪದೇಪದೆ ಟೀಕಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡುವಂತೆ ವರಿಷ್ಠರನ್ನು ಒತ್ತಾಯಿಸಲು ರಾಜ್ಯ ಬಿಜೆಪಿ ಪದಾಧಿಕಾರಿಗಳು ತೀರ್ವನಿಸಿದ್ದಾರೆ.   ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ನಡೆದ ಹೊಸ ಪದಾಧಿಕಾರಿಗಳ ಸಭೆಯಲ್ಲಿ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯತ್ನಾಳ್ ಅವರನ್ನು ಉಚ್ಚಾಟನೆ ಮಾಡದಿದ್ದರೆ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕುತ್ತದೆ. ಲೋಕಸಭಾ ಚುನಾವಣೆಯನ್ನು …

Read More »

ವರ್ಣಶಿಲ್ಪಿ, ಜಾನಪದ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟಿಸಿದ್ದು, ಎಂಟು ಮಂದಿ ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಒಳಗೊಂಡಿವೆ.   ‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಮೈಸೂರಿನ ಜಿ.ಎಲ್.ಎನ್.ಸಿಂಹ ಮತ್ತು ಕಲಬುರಗಿಯ ಬಸವರಾಜ ಎಲ್. ಜಾನೆ, ‘ಜಕಣಾಚಾರಿ ಪ್ರಶಸ್ತಿ’ಗೆ ಕಲಬುರಗಿಯ ಮಹದೇವಪ್ಪ ಎಲ್.ಶಿಲ್ಪಿ ಮತ್ತು ಚಿಕ್ಕಮಗಳೂರಿನ ಎಸ್.ಪಿ. ಜಯಣ್ಣಾಚಾರ್, ಜಾನಪದ …

Read More »

ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ

ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಎದ್ದಾಕ್ಷಣ ಆ ನೀರಿನ ಸಹಿತ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ರಕ್ತ ಶುದ್ಧವಾಗುತ್ತದೆ. ತುರಿಕೆ, ಕಜ್ಜಿ ಮೊದಲಾದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಇದು ದೇಹದ ಕಲ್ಮಶಗಳನ್ನು ಹೊರಹಾಕುತ್ತದೆ. ಕೂದಲು ಉದ್ದಗಾಗಿ …

Read More »