Breaking News

ರಾಷ್ಟ್ರೀಯ

ಜೋಡಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ.

ಚಿಕ್ಕೋಡಿ(ಬೆಳಗಾವಿ): ಕಳೆದ ಭಾನುವಾರ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ-ಮಗನನ್ನು ಕತ್ತು ಹಿಸುಕಿ, ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳಲ್ಲಿ ಓರ್ವ ಪೊಲೀಸರನ್ನು ಕಂಡು ಹೆದರಿ ಓಡಿಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನೋರ್ವ ಆತ್ಮಹತ್ಯೆಯಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ವಿವರ: ಏಪ್ರಿಲ್ 13ರಂದು ಕೊಡಗಾನೂರು ಗ್ರಾಮದಲ್ಲಿನ ತೋಟದ ವಸತಿ ಪ್ರದೇಶದಲ್ಲಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ಹಾಗೂ ವಿಠ್ಠಲ್ ಅಪ್ಪರಾಯ ಇಚೇರಿ (42) ಎಂಬ ತಾಯಿ ಮತ್ತು ಮಗನನ್ನು ಕೊಲೆಗೈದ ದುಷ್ಕರ್ಮಿಗಳು ಶವಗಳನ್ನು ಕಬ್ಬಿನ …

Read More »

ಕೇಂದ್ರ ಸರ್ಕಾದಿಂದ ಬಡವರ ರಕ್ತ ಕುಡಿಯುವ ಕೆಲಸ ಆಗುತ್ತಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​​ನಿಂದ ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ನಿರಂತರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಎಲ್​​ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಕೇಂದ್ರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್​​ ನಾಯಕರು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ …

Read More »

ಮಲೆ ಮಹದೇಶ್ವರ ದೇಗುಲದಲ್ಲಿ ₹3.26 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 3.26 ಕೋಟಿ ರೂ. ಸಂಗ್ರಹವಾಗಿದೆ. ಇದು ಕಳೆದ 35 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಂಬುದು ಗಮನಾರ್ಹ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ರಾತ್ರಿ 10ರ ತನಕವೂ ಹುಂಡಿ ಎಣಿಕೆ ನಡೆದಿತ್ತು. ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, “ಅಮಾವಾಸ್ಯೆ, ಸರ್ಕಾರಿ ರಜಾ ದಿನ, ಯುಗಾದಿ ಜಾತ್ರೆ, ವಿವಿಧ …

Read More »

ಜಾತಿ ಗಣತಿ ವರದಿ ದೋಷಪೂರಿತ, ಲಿಂಗಾಯತರಿಗೆ ಅನ್ಯಾಯ: ತೋಂಟದಾರ್ಯ ಶ್ರೀ ಅಸಮಾಧಾನ

ಗದಗ: ”ಜಾತಿ ಗಣತಿ ವರದಿಯು ದೋಷಪೂರಿತವಾಗಿದೆ. ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ, ವರದಿ ಸಿದ್ಧಪಡಿಸಬೇಕು” ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ”ಜಾತಿ ಗಣತಿ ವರದಿಯು ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. 10 ವರ್ಷಗಳ ಹಿಂದೆ ಗಣತಿ ನಡೆಸಿ, ಈ ವರದಿ ಮಾಡಿದ್ದಾರೆ. ವರದಿಯು ಸಮರ್ಪಕವಾಗಿಲ್ಲ. ಅದನ್ನು ಸಿದ್ದಪಡಿಸಿದವರು ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಯನ್ನೂ ಸಂಪರ್ಕಿಸಿಲ್ಲವೆಂಬ ಆರೋಪವಿದೆ” …

Read More »

ಕೊಪ್ಪಳದ ಇಟಗಿ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪತ್ರ

ಕೊಪ್ಪಳ: ಐತಿಹಾಸಿಕ ಹಿನ್ನೆಲೆಯುಳ್ಳ ಕೊಪ್ಪಳ ಜಿಲ್ಲೆಯಲ್ಲಿ ಅನೇಕ ಸ್ಮಾರಕಗಳು, ಶಿಲಾ ಶಾಸನಗಳು ಕಾಣಸಿಗುತ್ತವೆ. ಅದರಲ್ಲೂ ಶಿಲ್ಪಕಲಾ ವೈಭವವನ್ನು ಬಿಂಬಿಸುವ, ದೇವಾಲಯಗಳ ತೊಟ್ಟಿಲು ಎಂದೇ ಪ್ರಸಿದ್ಧಿ ಪಡೆದಿರುವ ಕುಕನೂರ ತಾಲೂಕಿನ ಇಟಗಿಯ ಮಹಾದೇವ ದೇವಾಲಯವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ ಮಾಡಲು ಪ್ರಸ್ತಾವ ಕಳುಹಿಸುವಂತೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕಾರ್ಯದರ್ಶಿಗೆ ಪುರಾತತ್ವ ಇಲಾಖೆ ಪತ್ರ ಬರೆದಿದೆ. ಈಗಾಗಲೇ ಕರ್ನಾಟಕದ ಹಂಪಿ, ಬೇಲೂರು, ಹಳೇಬೀಡು ಸೇರಿ ಹಲವು ಪ್ರದೇಶಗಳು ವಿಶ್ವವಿಖ್ಯಾತಿ ಹೊಂದಿವೆ. …

Read More »

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ* ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ …

Read More »

ಶಬರಿಮಲೆಗೆ ತೆರಳಿದ್ದ ಹಾವೇರಿಯ ಗುರುಸ್ವಾಮಿ ರಸ್ತೆ ಅಪಘಾತದಲ್ಲಿ ಸಾವು

ಎರಿಮಲೈ/ಹಾವೇರಿ: ಕೇರಳ ರಾಜ್ಯದ ಎರಿಮಲೈ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಹಾನಗಲ್ ಪಟ್ಟಣದ 51 ವರ್ಷದ ಮಾರುತಿ ಎಂ ಹರಿಹರ ಎಂದು ಗುರುತಿಸಲಾಗಿದೆ. ಕೇರಳ ರಾಜ್ಯದಲ್ಲಿರುವ ಶಬರಿಮಲೆಗೆ ಹಾವೇರಿ ಜಿಲ್ಲೆಯಿಂದ 25 ಪ್ರಯಾಣಿಕರು ತೆರಳಿದ್ದರು. ಯಾತ್ರೆಗೆ ತೆಗೆದುಕೊಂಡಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಮಾರುತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. 20 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ …

Read More »

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್

*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್* ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ‌ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ‌ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ …

Read More »

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ.

ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು: * ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. …

Read More »

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ:ಮಧು ಬಂಗಾರಪ್ಪ

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ (Karnataka Education Department) ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. …

Read More »