ಬೆಳಗಾವಿ: ತಾಲೂಕಿನ ಹಲಗಾದಲ್ಲಿ ಗೃಹಲಕ್ಷ್ಮೀ ಅದಾಲತ್‍ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಆ ಬಳಿಕ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ (gruha lakshmi scheme) ಯಾವೊಬ್ಬ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ 3 ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿ …
Read More »ಬಿಜೆಪಿಯಿಂದ ಶ್ರೀರಾಮನ ಅಪಹರಣ.ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ
ನವದೆಹಲಿ: ಅಯೋಧ್ಯೆಯಲ್ಲಿನ ರಾಮ ಮಂದಿರ ಉದ್ಘಾಟನೆಗೆ ಶಿವಸೇನಾ ನಾಯಕ, ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಆಹ್ವಾನಿಸದ ವಿಚಾರವಾಗಿ ಬಿಜೆಪಿ ವಿರುದ್ಧ ಸಂಸದ ಸಂಜಯ್ ರಾವತ್ ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಈ ಕುರಿತು ಮಾತನಾಡಿರುವ ಅವರು, ಬಿಜೆಪಿಯವರು ಭಗವಾನ್ ಶ್ರೀರಾಮನನ್ನು ಕಿಡ್ನಾಪ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಮಂದಿರದ ಲೋಕಾರ್ಪಣೆ ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಯುತ್ತಿದೆ. ಬಿಜೆಪಿಯವರ ಕಾರ್ಯಕ್ರಮಕ್ಕೆ ಯಾರು ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಶಿವಸೇನಾ ಹಾಗೂ ಉತ್ತರ ಪ್ರದೇಶಕ್ಕೆ ಬಿಜೆಪಿಗಿಂತಲೂ ಮುಂಚಿತವಾಗಿ …
Read More »ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಕರವೇ ವಿರುದ್ಧ ಕ್ರಮಧರಣಿ ಮಾಡಿದ್ದಕ್ಕಲ್ಲ,:C.M.
ಬೆಂಗಳೂರು, ಡಿಸೆಂಬರ್ 28: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ (Siddaramaiah), ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆದರೂ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಧರಣಿ ಮಾಡಿದ್ದಕ್ಕೆ ಕರವೇ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಾನೂನು ಕೈಗೆತ್ತಿಕೊಂಡಿದ್ದಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು. ಕನ್ನಡ ನಾಮಫಲಕ ಸಂಬಂದ …
Read More »ಯತ್ನಾಳ್ಗೆ ಮೂಗುದಾರ ಹಾಕಲು ಹಿರಿಯ ನಾಯಕರ ಸಭೆ
ಬೆಂಗಳೂರು, (ಡಿಸೆಂಬರ್ 28): ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದಕ್ಕೆ ಪೂರಕವೆಂಬಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ನಿನ್ನೆ(ಡಿಸೆಂಬರ್ 27) ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 28) ವಿಜಯೇಂದ್ರ ನೇತೃತ್ವದ ಹಿರಿಯ ಬಿಜೆಪಿ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ …
Read More »2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ …
Read More »ಕಲ್ಲಡ್ಕ ಪ್ರಭಾಕರ್ ಭಟ್‌ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ (High Court) ಸೂಚಿಸಿದೆ. ತಮ್ಮ ವಿರುದ್ಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಕಲ್ಲಡ್ಕ ಪ್ರಭಾಕರ್‌ಗೆ …
Read More »ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ
ಕೊಪ್ಪಳ, ಡಿ.28: ಡಿಸೆಂಬರ್ 31 ರೊಳಗೆ ಗ್ಯಾಸ್ ಸಂಪರ್ಕ್ ಪಡೆದವರೆಲ್ಲರೂ ನಿಮಗೆ ಸೇವೆ ನೀಡುವ ಗ್ಯಾಸ್ ಏಜೆನ್ಸಿಯವರ ಬಳಿ ಹೋಗಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ(Subsidy) ಹಣ ಬಂದಾಗುತ್ತದೆ. ಕೆವೈಸಿ ಮಾಡಿಸಿದ್ರೆ ನಿಮಗೆ ಕೇವಲ ಐನೂರು ರೂಪಾಯಿಗೆ ಸಿಲಿಂಡರ್ ಸಿಗುತ್ತೆ.ಇಲ್ಲದಿದ್ದರೆ, ಕಮರ್ಷಿಯಲ್ ಸಿಲಿಂಡರ್ ಬೆಲೆ ನೀಡಿ ಸಿಲಿಂಡರ್ ಖರೀದಿಸಬೇಕು ಎನ್ನುವ ವದಂತಿಯನ್ನು ಹಬ್ಬಿಸಿದ್ದಾರೆ. ಈ ಹಿನ್ನಲೆ ಕೊಪ್ಪಳ(Koppala) ನಗರ ಸೇರಿದಂತೆ ರಾಜ್ಯದ ವಿವಿಧ ಗ್ಯಾಸ್ ಏಜೆನ್ಸಿಗಳ ಅಂಗಡಿಗಳ ಮುಂದೆ …
Read More »ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಡೆಡ್ಲೈನ್ ನೀಡಿದ ಸಿಎಂ
ಬೆಂಗಳೂರು, (ಡಿಸೆಂಬರ್ 28): ಕನ್ನಡ ನಾಮಫಲಕ (Kannada Board) ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)ಕಾರ್ಯಕರ್ತರ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ (Siddaramaiah) ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ …
Read More »ತಮಿಳು ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ಇನ್ನಿಲ್ಲ
ತಮಿಳುನಾಡು: ನಟ ಕಮ್ ರಾಜಕಾರಣಿ ವಿಜಯಕಾಂತ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ ಕರೊನಾ ಪಾಸಿಟಿವ್ ದೃಢವಾಗಿತ್ತು. ಇದಾದ ಬಳಿಕ ಉಸಿರಾಟದ ತೊಂದರೆಯಿಂದಾಗಿ ಚೆನ್ನೈನ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಹಾಕಲಾಗಿತ್ತು. ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿ ನೀಡಿದೆ. ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರನ್ನು ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯೇ ಅವರು ಕೊನೆಯುಸಿರೆಳೆದರು. ಅವರ ನಿಧನ ಸುದ್ದಿ ತಿಳಿದ ನಂತರ ಆಸ್ಪತ್ರೆಯ ಹೊರಗೆ ಭದ್ರತೆಯನ್ನು …
Read More »ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆಗೆ 1ದಿನ ಮಾತ್ರ ಬಾಕಿ ಅಡ್ವಾನ್ಸ್ ಬುಕ್ಕಿಂಗ್‌ಗೆ ಅದ್ಭುತ ರೆಸ್ಪಾನ್ಸ್
ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ಗಳನ್ನು ‘ಕಾಟೇರ’ ದರ್ಶನ್ ಸ್ವಾಗತಕ್ಕೆ ಕಾಯುತ್ತಿದ್ದಾರೆ. ಚಿತ್ರದ ಅಡ್ವಾನ್ಸ್ ಬುಕ್ಕಿಂಗ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಕೆಲವೆಡೆ ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ‘ಕಾಟೇರ’ ಚಿತ್ರದ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ನಟ ದರ್ಶನ್ ಕೂಡ ಸಂದರ್ಶನಗಳಲ್ಲಿ ಭಾಗಿಯಾಗಿ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಈ ವೇಳೆ ಸಾಕಷ್ಟು …
Read More »