Breaking News
Home / ರಾಷ್ಟ್ರೀಯ (page 288)

ರಾಷ್ಟ್ರೀಯ

ಎಂಇಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಭಾಗಿ

ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ನಾಡದ್ರೋಹಿ ಎಂಬ ಘೋಷಣೆ ಕೂಗುವ ಮೂಲಕ ಮತ್ತೆ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದಾರೆ. 1986ರಲ್ಲಿ ಗಡಿ ಗಲಾಟೆಯಲ್ಲಿ ಮೃತಪಟ್ಟ ಮರಾಠಿ ಭಾಷಿಕರಿಗೆ ಎಂಇಎಸ್ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಕೂಡ ಭಾಗಿಯಾಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಕಾರಣರಾಗಿದ್ದಾರೆ. ಈ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, …

Read More »

ನಕ್ಸಲರಿಗಿಂತ ಸಿ.ಟಿ.ರವಿ ಡೇಂಜರ್: ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ಜಾತಿ, ಧರ್ಮದ ಬಗ್ಗೆ ಪದೇ ಪದೇ ಮಾತನಾಡಿ ಮತ ಕೇಳುವುದು, ಹಿಂದೂ ರಾಷ್ಟ್ರ ಮಾಡ್ತೀನಿ ಅನ್ನೋದು, ಸಂವಿಧಾನ ಬದಲಾಯಿಸ್ತೀವಿ ಅನ್ನೋ ಹೇಳಿಕೆಗಳು ನಕ್ಸಲ​ರಿಗಿಂತ ಡೇಂಜರಸ್ ಪದಗಳು. ಹಾಗಾಗಿ ಇವರು ನಕ್ಸಲ​ರಿಗಿಂತ ಡೇಂಜರ್ ಎಂದು ಸಿ.ಟಿ.ರವಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಕಿಡಿಕಾರಿದರು. ಚಿಕ್ಕಮಗಳೂರಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರ ಅರ್ಬನ್ ನಕ್ಸಲ್ ಹೇಳಿಕೆ ಬಗ್ಗೆ ಭೋಜೇಗೌಡ ಹೀಗೆ ಪ್ರತಿಕ್ರಿಯೆ ನೀಡಿದರು. ಸಂವಿಧಾನ ಬದಲಾವಣೆ, ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜ ಹಾಕ್ತೀವಿ …

Read More »

ಹಸೆಮಣೆ ಏರಬೇಕಿದ್ದ ವ್ಯಕ್ತಿಯಬರ್ಬರ ಹತ್ಯೆ

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಬೂದಪ್ಪ ನವಲೂರ (28) ಕೊಲೆೆಯಾದ ವ್ಯಕ್ತಿ. ದುಷ್ಕರ್ಮಿಗಳು ತೋಟದ ಮನೆಯಲ್ಲಿ ಕಣ್ಣಿಗೆ ಕಾರದ ಪುಡಿ ಎರಚಿ ಬಳಿಕ ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ತಾವರಗೇರೆ ಗ್ರಾಮದ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಜೂನ್ 7 ರಂದು ಮದುವೆ ನಡೆಯಬೇಕಿತ್ತು. ಗುರುವಾರ ಮಧ್ಯರಾತ್ರಿ ಕೊಲೆ ನಡೆದಿದ್ದು, ನಿಖರ ಕಾರಣ ತಿಳಿದು …

Read More »

ಮಂಡ್ಯದ ಖ್ಯಾತ ವೈದ್ಯ ಡಾ.ವೇಣುಗೋಪಾಲ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಡ್ಯ: ಖ್ಯಾತ ವೈದ್ಯ ಡಾ.ವೇಣುಗೋಪಾಲ್ (57) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದ ಕೆರೆಯ ಬಳಿ ಇಂದು (ಶುಕ್ರವಾರ) ಬೆಳಿಗ್ಗೆ ಕಂಡುಬಂದಿದೆ. ಇವರು ಮಂಡ್ಯದ ಉಮ್ಮಡಹಳ್ಳಿ ಗೇಟ್ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಸಾಂಜೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಡಾ.ವೇಣುಗೋಪಾಲ್ ಎಂದಿನಂತೆ ಗುರುವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು ಹಲವು ಮಂದಿಗೆ ಚಿಕಿತ್ಸೆ ನೀಡಿದ್ದಾರೆ. ಮಧ್ಯಾಹ್ನ 3-4 ಗಂಟೆಯ ಸುಮಾರಿಗೆ ಆಸ್ಪತ್ರೆಯಿಂದ ಹೊರಟು ಮದ್ದೂರು …

Read More »

ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ವ್ಯಾಪಕವಾಗಿ ಕುಸಿತ

ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ವ್ಯಾಪಕವಾಗಿ ಕುಸಿತಕ್ಕೊಳಗಾಗಿದೆ. ಈ ಬಾರಿಯ ಮುಂಗಾರು ಸಕಾಲದಲ್ಲಿ ಬಿರುಸು ಪಡೆಯದೆ ಕೈಕೊಟ್ಟಲ್ಲಿ ಬೆಳಗಾವಿ ಮಹಾನಗರ ನೀರಿಗೆ ಬರ ಎದುರಿಸುವ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪಾಟೀಲ್ ಅವರು ರಕ್ಕಸಕೊಪ್ಪ ಜಲಾಶಯಕ್ಕೆ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು. ಕೆಯುಐಡಿಎಫ್‌ಸಿ ಅಧೀಕ್ಷಕ ಎಂಜಿನಿಯರ್ ಅಶೋಕ್ …

Read More »

2000 ರೂ. ನೋಟು ಬದಲಾಯಿಸಿಕೊಡುವುದಾಗಿ ವಂಚಿಸಿದ ಕಾನಸ್ಟೆಬಲ್

ಬೆಳಗಾವಿ :  500 ರೂ ಮುಖಬೆಲೆಯ 5 ಲಕ್ಷ ರೂ. ನೀಡಿದರೆ 2000 ರೂ. ಮುಖ ಬೆಲೆಯ 6 ಲಕ್ಷ ರೂ. ನೀಡುವುದಾಗಿ ಹೇಳಿ ವಂಚಿಸಿದ ಮೀರಜ್ ಠಾಣೆ ಪೊಲೀಸ್ ಕಾನಸ್ಟೆಬಲ್ ಸೇರಿ ಮೂವರನ್ನು ಕಾಗವಾಡ ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಪ್ರಮುಖ ಆರೋಪಿ ಹುಡುಕಾಟ ನಡೆಸಲಾಗುತ್ತಿದೆ.   ಮೀರಜ್ ನ ಸಮೀರ್ ಬೋಸ್ಲೆ ಎನ್ನುವವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಕಾಗವಾಡ ಠಾಣೆ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. …

Read More »

ಮಹಾರಾಷ್ಟ್ರ: ಬಾಯಿಯ ನೈರ್ಮಲ್ಯ ಅಭಿಯಾನಕ್ಕೆ ‘ನಗುವಿನ ರಾಯಭಾರಿ’ ಆಗಿ ಸಚಿನ್‌ ನೇಮಕ

ಮುಂಬೈ: ಬಾಯಿಯ ಆರೋಗ್ಯವನ್ನು ಉತ್ತೇಜಿಸುವ ಮಹಾರಾಷ್ಟ್ರದ ಸ್ವಚ್ಚ ಮುಖ್‌ ಅಭಿಯಾನಕ್ಕೆ ಕ್ರಿಕೆಟ್‌ ಐಕಾನ್‌ ಸಚಿನ್‌ ತೆಂಡೂಲ್ಕರ್‌ ಅವರು ‘ನಗುವಿನ ರಾಯಭಾರಿ’ (ಸ್ಮೈಲ್‌ ಅಂಬಾಸಿಡರ್‌) ಆಗಿ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ತೆಂಡೂಲ್ಕರ್ ಅವರೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದರು.   ಮುಂದಿನ ಐದು ವರ್ಷಗಳ ಕಾಲ ಬ್ಯಾಟಿಂಗ್‌ ದಿಗ್ಗಜ ತೆಂಡೂಲ್ಕರ್ ಪ್ರಚಾರದ ಬ್ರಾಂಡ್‌ ಅಂಬಾಸಿಡರ್‌ ಆಗಿರುತ್ತಾರೆ. ಸ್ವಚ್ಛ …

Read More »

ಶಿಂದೆ ಬಣದ 22 ಶಾಸಕರು, 9 ಸಂಸದರು ಶೀಘ್ರ ರಾಜೀನಾಮೆ: ಉದ್ಧವ್ ಠಾಕ್ರೆ

ಮುಂಬೈ: ಶಿವಸೇನಾದ ಏಕನಾಥ್ ಶಿಂದೆ ಬಣದ 22 ಶಾಸಕರು ಮತ್ತು 9 ಸಂಸದರು ರಾಜೀನಾಮೆ ನೀಡಲಿದ್ದಾರೆ ಎಂದು ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ. ಬಿಜೆಪಿಯ ಮಲತಾಯಿ ಧೋರಣೆಯಿಂದ ಉಸಿರುಗಟ್ಟಿದ ವಾತಾವರಣದಲ್ಲಿ ಬೇಸತ್ತಿರುವ ಅವರು, ಶಿಂದೆ ಬಣವನ್ನು ತೊರೆಯಲಿದ್ದಾರೆ ಎಂದು ಉದ್ಧವ್ ಹೇಳಿದ್ದಾರೆ.   ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ, ಬಿಜೆಪಿಯಿಂದ ಮಲತಾಯಿ ಧೋರಣೆ ಎದುರಿಸುತ್ತಿದ್ದೇವೆ ಎಂಬ ಶಿವಸೇನಾ ಸಂಸದ …

Read More »

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ. ಇದು ಅತಿದೊಡ್ಡ ದೇಶ ವಿರೋಧಿ ಕೃತ್ಯ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.   ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷ ಅಧಿಕಾರ ಪೂರ್ಣಗೊಳಿಸಿರುವುದರ ವಿರುದ್ಧ ಬುಧವಾರವೂ ಖರ್ಗೆ ವಾಗ್ದಾಳಿ ಮುಂದುವರಿಸಿದ್ದಾರೆ. ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡುವುದು ದೇಶಕ್ಕೆ ದೊಡ್ಡ ಹಾನಿ. …

Read More »

2 ತಿಂಗಳಲ್ಲಿ 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಮಾನದಂಡಗಳನ್ನು ಪಾಲಿಸದ ಆರೋಪದಿಂದ ಕಳೆದ ಎರಡು ತಿಂಗಳಲ್ಲಿ ದೇಶದಾದ್ಯಂತ ಸುಮಾರು 40 ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು, ಗುಜರಾತ್‌, ಅಸ್ಸಾಂ, ಪಂಜಾಬ್‌, ಆಂಧ್ರಪ್ರದೇಶ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದ ನೂರಕ್ಕೂ ಹೆಚ್ಚು ಕಾಲೇಜುಗಳೂ ಇದೇ ಕ್ರಮ ಎದುರಿಸಲಿವೆ ಎಂದು ಆ ಮೂಲಗಳು ಮಾಹಿತಿ ನೀಡಿವೆ.   ನಿಯಮಗಳ ಉಲ್ಲಂಘನೆ ಮತ್ತು ಸಿ.ಸಿ. ಟಿ.ವಿ ಕ್ಯಾಮೆರಾ ಅವಳವಡಿಕೆ, ಬಯೊಮೆಟ್ರಿಕ್‌ ಹಾಜರಾತಿ …

Read More »