ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆಗಾಗಿ ಕಾಯುತ್ತಿದೆ ಎಂದು ನವಲಗುಂದ ಶಾಸಕ ಎನ್.ಎಚ್. ಕೊನರೆಡ್ಡಿ ಹೇಳಿದರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಮಹಾದಾಯಿ ಯೋಜನೆ ಬಹಳ ಮುಖ್ಯವಾಗಿದೆ ಟೀಕಿಸುವ ಬದಲು ಅದನ್ನು ಕಾರ್ಯಗತಗೊಳಿಸಬೇಕು ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಅವರನ್ನು ಅವರು ನೆನಪಿಸಿಕೊಂಡರು. ಈಗ, ಕೇಂದ್ರ ಸಚಿವ …
Read More »ಒಂದೇ ವೇದಿಕೆಯಲ್ಲಿ ಪಂಚಪೀಠಾಧೀಶ್ವರರು
ದಾವಣಗೆರೆ: ನಗರದಲ್ಲಿ ನಡೆದ ಅದ್ಧೂರಿ ಶೃಂಗ ಸಮ್ಮೇಳನದಲ್ಲಿ ವೀರಶೈವ ಪಂಚಪೀಠಗಳ ಪೀಠಾಧೀಶ್ವರರು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಭಕ್ತರಿಗೆ ದರ್ಶನ ನೀಡಿದರು. ದರ್ಶನದ ಜೊತೆಗೆ ಎಲ್ಲ ಶ್ರೀಗಳು ತಮ್ಮ ಹಿತವಚನ ನೀಡಿದರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ವತಿಯಿಂದ ರೇಣುಕಾ ಮಂದಿರದಲ್ಲಿ ಸೋಮವಾರ ನಡೆದ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಮಾತನಾಡಿದ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು, ವೀರಶೈವ ಧರ್ಮದಲ್ಲಿ ಪಂಚಪೀಠಗಳಿಗೆ ಇರುವ ಮಹತ್ವ ಯಾವುದಕ್ಕೂ ಇಲ್ಲ. …
Read More »ಬಿಹಾರ ಉದ್ಯಮಿಗೆ 10 ಕೋಟಿ ರೂಪಾಯಿ ವಂಚನೆ ಆರೋಪ: ಆರೋಪಿ ರೋಶನ್ ಸಲ್ಡಾನ್ ಪ್ರಕರಣ ಸಿಐಡಿಗೆ
ಮಂಗಳೂರು: ದೇಶಾದ್ಯಂತ ಸಿರಿವಂತ ಉದ್ಯಮಿಗಳನ್ನು ವಂಚನೆಯ ಜಾಲದಲ್ಲಿ ಸಿಲುಕಿಸಿ ಅವರಿಂದ ಕೋಟ್ಯಂತರ ಹಣ ಲಪಟಾಯಿಸುತ್ತಿದ್ದ ಆರೋಪಿ ರೋಶನ್ ಸಲ್ಡಾನ್ ವಿರುದ್ಧ ಬಿಹಾರ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಶನ್ ಸಲ್ಡಾನ್ ತನಗೆ ಭೂಮಿ ಖರೀದಿ ವಿಚಾರದಲ್ಲಿ 10 ಕೋಟಿಗೂ ಅಧಿಕ ಮೋಸ ಮಾಡಿದ್ದಾಗಿ ಆರೋಪಿಸಿ ದೂರು ನೀಡಿದ್ದಾರೆ. 10 ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ ಅದನ್ನು ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮಂಗಳೂರು …
Read More »ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ ಲಂಚ ಸ್ವೀಕಾರ ಆರೋಪ: ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಲೋಕಾ ಬಲೆಗೆ
ಬೆಂಗಳೂರು : ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಆರೋಪಿಯಿಂದ 1.25 ಲಕ್ಷ ಸ್ವೀಕರಿಸುತ್ತಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋವಿಂದಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಮೊಹಮ್ಮದ್ ಯೂನಸ್ ಎಂಬಾತನಿಂದ 1.25 ಲಕ್ಷ ರೂ. ಸ್ವೀಕರಿಸುತ್ತಿದ್ದಾಗಲೇ ಸಾವಿತ್ರಿ ಬಾಯಿ ಅವರನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣವೇನು?: ವಿವಾಹವಾಗಿರುವುದನ್ನು ಮುಚ್ಚಿಟ್ಟು ಲೀವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಮೊಹಮ್ಮದ್ ಯೂನಸ್ನನ್ನು ಪ್ರಶ್ನಿಸಿದಾಗ ತನ್ನ ಮೇಲೆ ಹಲ್ಲೆಗೈದಿರುವುದಾಗಿ …
Read More »ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್
ಬೆಂಗಳೂರು, ಜುಲೈ 21: ಮುಡಾ ಹಗರಣ (MUDA Scam) ಸಂಬಂಧ ಜಾರಿ ನಿರ್ದೇಶನಾಲಯ (ED) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ (Parvathi Siddaramaiah) ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ …
Read More »ಕಾಶಪ್ಪನವರ್ ಅಂತ್ಯ ಸಮೀಪಿಸಿದೆ, ವಿಭೂತಿ ಹೆಸರಲ್ಲಿ ಆಯಿಲ್ ಪೇಂಟ್ ಹಚ್ಚಿಕೊಳ್ಳುವ ಅವನೆಂಥ ಲಿಂಗಾಯತ? ಯತ್ನಾಳ್
ವಿಜಯಪುರ, ಜುಲೈ 21: ಕೂಡಲಸಂಗದ ಪೀಠದ ಸ್ವಾಮೀಜಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಯಾವದೇ ಪಕ್ಷಕ್ಕಾಗಿ ಹೋರಾಡುತ್ತಿಲ್ಲ, ಪಂಚಮಸಾಲಿ ಸಮಾಜದ ಒಳಿತಿಗಾಗಿ ಮಾತ್ರ ಅವರು ಹೋರಾಡುತ್ತಿದ್ದಾರೆ, ಅವರ ಕುರಿತು ಹಗುರವಾಗಿ ಮಾತಾಡುವ ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಅಂತ್ಯಕಾಲ ಬಂದಿದೆ, ದೀಪ ಆರುವ ಮುನ್ನ ಭಗ್ಗನೆ ಉರಿಯುವ ಹಾಗೆ ಅವನ ಅಂತ್ಯವೂ ಸಮೀಪಿಸಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮಾಧ್ಯಮಗಳು ಟಿಆರ್ಪಿಗೋಸ್ಕರ ಅಯೋಗ್ಯನನ್ನು ವೈಭವೀಕರಿಸುತ್ತಿವೆ, ತೈಲವರ್ಣದ ವಿಭೂತಿ ಹಣೆಗೆ ಬಳಿದುಕೊಳ್ಳುವ …
Read More »ಸ್ವಾತಂತ್ರ ಹೋರಾಟಗಾರರಿಗೆ ಅಕ್ಷರ ನೀಡಿದ ಮುನ್ಸಿಪಲ್ ಹೈಸ್ಕೂಲ್ಗೆ 133ನೇ ವರ್ಷ: ಆದರೂ ನಡೆಯದ ಶತಮಾನೋತ್ಸವ ಸಂಭ್ರಮ
ಹಾವೇರಿ: ನಾಡೋಜ ಪಾಟೀಲ್ ಪುಟ್ಟಪ್ಪ, ಸಾಹಿತಿ ಚಂದ್ರಶೇಖರ್ ಪಾಟೀಲ್, ವಿಮರ್ಶಕ ಜಿ.ಎಸ್. ಅಮೂರ್ ಸೇರಿದಂತೆ ನೂರಾರು ಸ್ವಾತಂತ್ರ ಹೋರಾಟಗಾರರಿಗೆ ಅಕ್ಷರ ನೀಡಿದ ಶಾಲೆ ಹಾವೇರಿಯ ಮುನಿಸಿಫಲ್ ಹೈಸ್ಕೂಲ್. 1892 ಆಗಸ್ಟ್ ಒಂದರಂದು ಹಾವೇರಿ ಪಟ್ಟಣದ ಏಲಕ್ಕಿ ಓಣಿಯಲ್ಲಿ ಹಳೆಯ ಕಟ್ಟಡದಲ್ಲಿ 26 ವಿದ್ಯಾರ್ಥಿಗಳಿಂದ ಆರಂಭವಾದ ಈ ಶಾಲೆ ಇಲ್ಲಿಯವರೆಗೆ ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಕಂಡಿದೆ. ಇಲ್ಲಿ ಕಲಿತವರು ದೇಶ – ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಆಗಸ್ಟ್ 1 …
Read More »ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು
ಹುಕ್ಕೇರಿ : ಹಿಡಕಲ್ ಡ್ಯಾಂ ಜಾಕ್ ವೇಲ್ ಕಾಮಗಾರಿ ಸ್ಥಗಿತಗೋಳಿಸಿದ ರೈತರು ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಯೋಜನೆಯ ಅಂಗವಾಗಿ ಇಂದು ಜಲಾಶಯ ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ಜಾಕ್ ವೇಲ್ ಕೇಲಸ ಪ್ರಾರಂಬವಾಗಿದ್ದನ್ನು ಗಮನಿಸಿದ ಹುಕ್ಕೇರಿ ತಾಲೂಕಿನ ವಿವಿಧ ರೈತ ಸಂಘಟನೆಗಳು ಮತ್ತು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಅದ್ಯಕ್ಷ ದುಂಡನಗೌಡಾ ಪಾಟೀಲ ಹಾಗೂ ಮಾಜಿ ಸಚಿವ ಶಶಿಕಾಂತ ನಾಯಿಕ, …
Read More »ಪಂಚಮಸಾಲಿ ಪೀಠ ವಿವಾದ: ಶ್ರಾವಣದಲ್ಲಿ ಸಂಧಾನಕ್ಕೆ ಮುಹೂರ್ತ!
ಬಾಗಲಕೋಟೆ, ಜುಲೈ 21: ಒಂದೆಡೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji), ಮತ್ತೊಂದೆಡೆ ವಿಜಯಾನಂದ ಕಾಶಪ್ಪನವರ (Vijayanand Kashappanavar) ನೇತೃತ್ವದಲ್ಲಿ ನಡೆದ ಟ್ರಸ್ಟ್ ಸಭೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸುತ್ತಿರುವ ನಾಯಕರು. ಹೀಗೆ ಕೂಡಲಸಂಗಮ ಪಂಚಮಸಾಲಿ ಪೀಠ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಸಮಾಜದ ಮುಖಂಡರು ಸಂಧಾನದ ಸುಳಿವು ನೀಡಿದ್ದಾರೆ. ಅತ್ತ ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ನಡೆದಿದ್ದರೆ, ಇತ್ತ ಸ್ವಾಮೀಜಿ …
Read More »ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ
ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …
Read More »
Laxmi News 24×7