Breaking News
Home / ರಾಷ್ಟ್ರೀಯ (page 291)

ರಾಷ್ಟ್ರೀಯ

ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭ

ಬೆಳಗಾವಿ: ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭಗೊಂಡಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಜಿಲ್ಲೆಯ 4,015 ಪ್ರಾಥಮಿಕ, ,1,200 ಪ್ರೌಢ ಸೇರಿದಂತೆ 5,215 ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.   ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ಬೇಸಿಗೆ ರಜೆಯಿಂದಾಗಿ ವಿದ್ಯಾರ್ಥಿಗಳಿಲ್ಲದೆ ಭಣಗುಡುತ್ತಿದ್ದ ಶಾಲೆಯಂಗಳದಲ್ಲಿ ಮಕ್ಕಳ ಕಲರವ ಕಂಡುಬಂತು. ಕೆಲವೆಡೆ ಸಾಂಕೇತಿಕವಾಗಿ ಪಠ್ಯಪುಸ್ತಕ ವಿತರಿಸಲಾಯಿತು.

Read More »

ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ

ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ. ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ. ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ …

Read More »

ಸಾರಿಗೆ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಮುಕ್ತ ಅವಕಾಶ: ಷರತ್ತು ವಿಧಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಶಾಂತಿನಗರದ ಕೆಎಸ್‌ಆರ್​​ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಇರಲಿದೆ. ಎಲ್ಲ ಹೆಣ್ಣು ಮಕ್ಕಳು, ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಾಲ್ಕು ನಿಗಮಗಳ ಒಟ್ಟು ಆದಾಯ 8,946.85 ಕೋಟಿ ರೂ.‌ ಇದೆ. ಒಟ್ಟು ಕಾರ್ಯಾಚರಣೆ ವೆಚ್ಚ 12,750.49 ಕೋಟಿ ರೂ. …

Read More »

5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ: ಜಮೀರ್ ಅಹ್ಮದ್ ಖಾನ್

ತುಮಕೂರು: ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಈಗಾಗಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ ಇದಕ್ಕಾಗಿ ಪೂರಕವಾದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ ಎಂದರು. ಸಿದ್ದಗಂಗಾ ಮಠಕ್ಕೆ ನಾನು ಹೊಸದಾಗಿ ಬರ್ತಿಲ್ಲ. ನಾನು …

Read More »

ಮೈಸೂರು ಅಪಘಾತ ದುರಂತ: ಸಂಗನಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಬಳ್ಳಾರಿ: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ 9 ಜನರ ಮೃತದೇಹಗಳನ್ನು ಗ್ರಾಮದಲ್ಲಿ ಮಂಗಳವಾರ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳ ಪ್ರಕಾರ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು. ಭೀಕರ ಅಪಘಾತದಲ್ಲಿ ಸಂದೀಪ್ (24), ಅವರ ತಂದೆ ಕೊಟ್ರೇಶ್ (45), ತಾಯಿ ಸುಜಾತಾ (40) ಒಂದು ಕುಟುಂಬದವರಾಗಿದ್ದರೆ, ಇನ್ನೊಂದು …

Read More »

ಅಧಿಕಾರಿಗಳಿಗೆ ಜಾರಕಿಹೊಳಿ, ಹೆಬ್ಬಾಳಕರ್ ನೀಡಿದ ಎಚ್ಚರಿಕೆ ಸಂದೇಶ ಏನು?

ಯಾವುದೇ ಅಧಿಕಾರಿಗಳನ್ನು ಬದಲಿಸುವ ಉದ್ದೇಶ ನಮಗಿಲ್ಲ. ಆದರೆ ಹಿಂದಿನಂತೆ ಇದ್ದರೆ ಆಗುವುದಿಲ್ಲ. ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಸುಳ್ಳು ಹೇಳುತ್ತ ಕಾಲಕಳೆದರೆ ನಡೆಯುವುದಿಲ್ಲ. ನಮ್ಮ ಸ್ಪೀಡ್ ಗೆ ನೀವೂ ಓಡಬೇಕು. ಜಿಲ್ಲಾಧಿಕಾರಿಗಳ ಕೈಗೆ, ಶಾಸಕರ ಕೈಗೆ ಸಿಗದೆ ಓಡಾಡುವವರು ಈಗಲೇ ಹೊರಗೆ ಹೋಗಲು ಸಿದ್ಧತೆ ಮಾಡಿಕೊಳ್ಳಿ” ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ …

Read More »

ರಾಜ್ಯ ಸರಕಾರಿ ನೌಕರರಿಗೆ ಹೊಸ ಸರಕಾರದ ಕೊಡುಗೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರಿ ಆದೇಶ ಹೊರಡಿಸಿದೆ. ಶೇ.31ರಿಂದ 35ಕ್ಕೆ ಡಿಎ ಹೆಚ್ಚಳ ಮಾಡಲಾಗಿದೆ. ಇದು ಜನೆವರಿ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಆಇ ೧ ಎಸ್‌ಆರ್‌ಪಿ 2023 ಬೆಂಗಳೂರು, ದಿನಾಂಕ: 30ನೇ ಮೇ 2023 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 …

Read More »

ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.

ಬೆಂಗಳೂರು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾಗಿರುವ ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ಅವರ ಜಾಗಕ್ಕೆ 1987ನೇ ಬ್ಯಾಚಿನ ಭಾರತೀಯ ಅರಣ್ಯ ಸೇವೆ ಅಧಿಕಾರಿ ಹಾಗೂ ಪ್ರಸ್ತುತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ರಂಜನ್ ಅವರನ್ನು ಜೂನ್ 1 ರಿಂದ ಅನ್ವಯ …

Read More »

ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು,ಬೆಳಗಾವಿ 16,765, B.P.L. ರೇಷನ್ ಕಾರ್ಡ್ ರದ್ದು.!

ಬೆಂಗಳೂರು : ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ …

Read More »

ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ

ಬೆಂಗಳೂರು : ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಇಂತಹ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ. ಕೆಲವು ದಿನಗಳಿಂದ ಭೀಮಾಶಂಕರ ಮತ್ತು ಮಹಿಳೆ ಪ್ರೀತಿಸುತ್ತಿದ್ದರು. ಆಬಳಿಕ ಮಹಿಳೆಗೆ ಮೊದಲೇ ಮದುವೆಯಾಗಿದೆ ಎಂದು ಗೊತ್ತಾಗಿದೆ. ಈ ಕಾರಣದಿಂದಾಗಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಭೀಮಾಶಂಕರ ಮುಂದಾಗಿದ್ದಾನೆ ಅಲ್ಲದೇ ತಾನು ವಾಸವಾಗಿದ್ದ …

Read More »